ಹಲೋ ಸ್ನೇಹಿತರೆ, SCSP/TSP ಪರಿಷತ್ ಸಭೆ ನಡೆಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಸದ್ಯ 10 ಸಾವಿರ ಕೊಡಲಾಗುತ್ತಿದ್ದು ಈ ಯೋಜನೆಯ ಮೊತ್ತವನ್ನು 5 ಸಾವಿರ ಹೆಚ್ಚಿಸಲಾಗುವುದು. ದೆಹಲಿ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
IAS, IRS ಸೇರಿ ಹಲವು ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ SC/ST ಮಕ್ಕಳಿಗಾಗಿ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲಿ ಹೇಳಿದರು.
2024-25 ನೇ ಸಾಲಿಗೆ scsp/tsp ನಲ್ಲಿ ಲಭ್ಯ ಇರುವಂತಹ ಹಣವನ್ನು ಖರ್ಚು ಮಾಡಲು ಪ್ಲಾನ್ ಗೆ ಅನುಮೋದನೆ ಮಾಡಲಾಗಿದೆ. ರಾಜ್ಯದ ಅಭಿವೃದ್ಧಿ ಆಯವ್ಯಯ ಈ ಸಾಲಿನಲ್ಲಿ ಒಟ್ಟು 160000 ಕೋಟಿ. ಇದರಲ್ಲಿ scsp/tsp ಗೆ ಸುಮಾರು 39121.46 ಕೋಟಿ ಈ ಯೋಜನೆಯಡಿ ಅಡಿ 34 ಇಲಾಖೆಗಳಿಗೆ ಹಂಚಿಕೆ ಮಾಡಿರುವ ಹಣ action plan ನಲ್ಲಿದೆ. ಹಿಂದಿನ ವರ್ಷ ಬಿಡುಗಡೆ ಮಾಡಿರುವ ಹಣದಲ್ಲಿ 97.81 ಕೋಟಿ ಉಳಿತಾಯವಾಗಿದೆ.
ಕಳೆದ ವರ್ಷಕ್ಕಿಂತ ಈ ವರ್ಷ 3900 ಕೋಟಿ ಹೆಚ್ಚಿಗೆ ಇದ್ದು. 3900 ಕೋಟಿ ಹೆಚ್ಚುವರಿ ಹಣವನ್ನು ಈ ವರ್ಷ ನೀಡಿದ್ದೇವೆ. ಈ ಹಣ ಸಂಬಂಧಿಸಿದ ಇಲಾಖೆಗಳಿಗೆ ಹಂಚಿಕೆಯಾಗಿದ್ದು ಇದರ ಸದುಪಯೋಗ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ಈ ಎಲ್ಲಾ ನಿಗಮಗಳು ಕಾಯ್ದೆಯ ಉದ್ದೇಶಕ್ಕೆ ಪೂರಕವಾಗಿ ಕೆಲಸ ಮಾಡುವುದರ ಮೂಲಕ ಶೇ100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮವನ್ನು ಸಹ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ.
ಖಾಲಿ ಇರುವ ಹೋಬಳಿಗಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆರಂಭಿಸಲೇಬೇಕು. ಆಯಾ ಹೋಬಳಿಯ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಸೀಟು, ಇತರೆ ಪ್ರದೇಶದ ವಿಧ್ಯಾರ್ಥಿಗಳಿಗೆ ಉಳಿದ ಶೇ.25 ರಷ್ಟು ಸೀಟುಗಳನ್ನು ವಸತಿ ಶಾಲೆಗಳಲ್ಲಿ ನೀಡಬೇಕು.
ಇದನ್ನು ಓದಿ: ಅನ್ನದಾತರಿಗೆ ಸಿಹಿ ಸುದ್ದಿ: ಪಿಎಂ ಕಿಸಾನ್ ಹಣದಲ್ಲಿ ದಿಢೀರ್ ಜಿಗಿತ!
ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸದಿದ್ದರೆ ಸಸ್ಪೆಂಡ್ ಮಾಡಲಾಗುವುದು. 10 ವರ್ಷದಲ್ಲಿ ಈ ಯೋಜನೆಯಿಂದ ಸಮುದಾಯದ ಮೇಲೆ ಆಗಿರುವ ಪರಿಣಾಮ, ಸಮುದಾಯಕ್ಕೆ ಯೋಜನೆ ತಲುಪಿರುವ ಪ್ರಮಾಣದ ಬಗ್ಗೆ, ಹಾಗೂ ಅವರ ಆರ್ಥಿಕ ಸ್ಥಿತಿ ಪ್ರಗತಿ ಹೊಂದಿರುವ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು. 3 ತಿಂಗಳ ಬಳಿಕ ಮತ್ತೊಮ್ಮೆ ಪರಿಷತ್ ಸಭೆ ಕರೆಯುತ್ತೇವೆ. ಯಾರಿಂದಾದರೂ ಲೋಪ ಆಗಿದೆ ಎಂದು ಗೊತ್ತಾದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈ ವರ್ಷದ action plan ಅನ್ನು ಈ ಸಭೆಯಲ್ಲಿ ಶಾಸಕರು/ಸಚಿವರು/ ಅಧಿಕಾರಿಗಳು ನೀಡಿದ ಸಲಹೆಗಳ ಸಮೇತ ಜಾರಿ ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದರು.
ಇತರೆ ವಿಷಯಗಳು:
ಮೋದಿ ಸರ್ಕಾರದ ಘೋಷಣೆ ! ಇಂಥವರಿಗೆ ಪ್ರತಿ ತಿಂಗಳು 3000 ಹಣ ಜಮಾ!
ಇಂದಿನಿಂದ ಬೈಕ್ ಟ್ಯಾಕ್ಸಿ ಓಡಿಸಿದ್ರೆ ಹುಷಾರ್! ರಾಜ್ಯ ಸರ್ಕಾರ ಆದೇಶ..!