ಹಲೋ ಸ್ನೇಹಿತರೆ, 2023-24 ನೇ ಸಾಲಿನ 5, 8 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಲಾದ ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಅಮಾನ್ಯಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಆದರೆ, ಫಲಿತಾಂಶ ಪ್ರಕಟಿಸಿದ ಶಿಕ್ಷಣ ಇಲಾಖೆ ಹಾಗೂ ಪೋಷಕರಿಗೆ ಈಗ ಸಂಕಷ್ಟ ಎದುರಾಗಿದೆ. ಈ ಆದೇಸದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.
ರಾಜ್ಯದಲ್ಲಿ 2023-24 ನೇ ಸಾಲಿನಲ್ಲಿ 5, 8 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಲಾದ ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಅಮಾನ್ಯಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಆದರೆ ಫಲಿತಾಂಶ ಪ್ರಕಟಿಸಿದ ಬಳಿಕ ಶಿಕ್ಷಣ ಇಲಾಖೆ ಸಂಕಷ್ಟಕ್ಕೆ ಸಿಲುಕಿದೆ. ಸುಪ್ರೀಂ ಕೋರ್ಟ್ ಈಗಾಗಲೇ ಫಲಿತಾಂಶವನ್ನು ತಡೆಹಿಡಿದಿದ್ದರೂ, ಕೆಲವು ಶಾಲೆಗಳು ಫಲಿತಾಂಶಗಳನ್ನು ಪ್ರಕಟಿಸಿವೆ.
ಆದರೆ, ಇದೀಗ ಫಲಿತಾಂಶ ಅಸಿಂಧು ಎಂಬ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮುಂದಿನ ತರಗತಿಗೆ ಮಕ್ಕಳನ್ನು ಸೇರಿಸಬೇಕು ಎಂಬುದಕ್ಕೆ ಪಾಲಕರಿಗೂ ತೊಂದರೆಯಾಗುತ್ತಿದೆ. ಹೌದು, 2023-24ನೇ ಸಾಲಿನ 5, 8, 9ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಿರುವುದರಿಂದ ವಿದ್ಯಾರ್ಥಿಗಳು, ಪೋಷಕರು, ಶಾಲೆಗಳು, ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಣ ಇಲಾಖೆಯೂ ತೊಂದರೆಗೆ ಸಿಲುಕಿದೆ.
ಬೋರ್ಡ್ ಎಕ್ಸಾಂ ನಡೆಸಬೇಕೋ ಬೇಡವೋ ಎಂಬ ಗೊಂದಲದ ನಡುವೆಯೇ ಸರ್ಕಾರ ನಡೆಸಿರುವ ಬೋರ್ಡ್ ಎಕ್ಸಾಂ ಎಲ್ಲರ ಸಂಕಷ್ಟಕ್ಕೆ ಕಾರಣವಾಗಿದೆ. ಪ್ರತಿ ವರ್ಷದಂತೆ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಮಕ್ಕಳು ಪರೀಕ್ಷೆ ಬರೆದು ಮುಂದಿನ ತರಗತಿಗೆ ಪ್ರವೇಶ ಪಡೆಯುತ್ತಿದ್ದರು. ಆದರೆ, ಸರ್ಕಾರದ ನಿರ್ಧಾರ ಹಾಗೂ ಸುಪ್ರೀಂ ಕೋರ್ಟ್ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದನ್ನು ಓದಿ: ರೇಷನ್ ಕಾರ್ಡ್ ಇರುವ ಪ್ರತಿ ಕುಟುಂಬಗಳಿಗೆ ಅಗ್ಗದ ಬೆಲೆಯಲ್ಲಿ ಪಡಿತರ ಸಾಮಗ್ರಿ
ಶಿಕ್ಷಣ ಇಲಾಖೆ ಈಗಾಗಲೇ ರಾಜ್ಯಾದ್ಯಂತ ಶಾಲೆಗಳಿಗೆ ಬೇಸಿಗೆ ರಜೆ ನೀಡಿದೆ. ಕೆಲವು ಶಾಲೆಗಳು ಫಲಿತಾಂಶ ಪ್ರಕಟಿಸಿವೆ. ಘೋಷಿತ ಫಲಿತಾಂಶ ಅಸಿಂಧು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದಾಗಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಯಾವ ಅಂಕಗಳನ್ನು ಪರಿಗಣಿಸಬೇಕು ಎಂಬ ಗೊಂದಲದಲ್ಲಿ ಶಿಕ್ಷಣ ಇಲಾಖೆ ಸಿಲುಕಿದೆ.
ಮಕ್ಕಳ ಶಾಲೆ ಬದಲಾವಣೆಯೂ ಸಮಸ್ಯೆಯಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಲು ವರ್ಗಾವಣೆ ಪ್ರಮಾಣ ಪತ್ರ (ಟಿಸಿ) ಕಳುಹಿಸುವಂತೆ ಹೇಳಿದರೂ ತೊಂದರೆಯಾಗುತ್ತಿದೆ. ಶಿಕ್ಷಣ ಇಲಾಖೆ ಮಾತ್ರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಿಲ್ಲ. ಪೋಷಕರೂ ಗೊಂದಲದಲ್ಲಿದ್ದಾರೆ.
ಆದರೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿಗಳ ಮರು ಪರೀಕ್ಷೆ ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಈಗಾಗಲೇ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ನೀಡಲಾಗಿದ್ದು, ಇನ್ನೊಂದೆಡೆ ಲೋಕಸಭೆ ಚುನಾವಣೆ ನಡೆಯುತ್ತಿದೆ. ಹೀಗಾಗಿ ಪರೀಕ್ಷೆ ಫಲಿತಾಂಶದ ಬಗ್ಗೆ ಗೊಂದಲದಲ್ಲಿರುವ ಶಿಕ್ಷಣ ಇಲಾಖೆ. ಟಿಸಿ ಕೂಡ ಮಕ್ಕಳನ್ನು ಒಂದು ಶಾಲೆಯಿಂದ ಇನ್ನೊಂದು ಶಾಲೆಗೆ ಸೇರಲು ಬಿಡುತ್ತಿಲ್ಲ. ಹೀಗಾಗಿ ಮಕ್ಕಳ ಪ್ರೋಗ್ರೆಸ್ ಕಾರ್ಡ್ ವರದಿ ಸಿಗದೆ ಪಾಲಕರು ಪರದಾಡುತ್ತಿದ್ದಾರೆ.
ಮಕ್ಕಳ ಫಲಿತಾಂಶದ ಬಗ್ಗೆ ಸರ್ಕಾರ ನಿರ್ಧಾರ ಪ್ರಕಟಿಸಬೇಕು. ಈ ಹಿಂದೆ ಶಾಲೆಯಲ್ಲಿ ಎಸ್‌ಎ-1 ಎಸ್‌ಎ-2 ಪರೀಕ್ಷೆ ನಡೆಸಲಾಗಿತ್ತು. ಅದರ ಆಧಾರದ ಮೇಲೆ ನೀವು ಅಂಕಗಳನ್ನು ನೀಡುತ್ತೀರಾ? ಆ ಬಗ್ಗೆ ಶಿಕ್ಷಣ ಇಲಾಖೆ ಸ್ಪಷ್ಟ ಮಾಹಿತಿ ನೀಡಬೇಕು. ಈಗಾಗಲೇ ಮಕ್ಕಳು ಮತ್ತು ಪೋಷಕರು ಗೊಂದಲದಲ್ಲಿದ್ದಾರೆ. ಸರಕಾರ ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಮಾತೃ ಸಂಘಟನೆಯ ಸದಸ್ಯ ಚಿದಾನಂದ್ ಒತ್ತಾಯಿಸಿದರು.
ಇತರೆ ವಿಷಯಗಳು:
ನೌಕರರ ಮೂಲ ವೇತನಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್!
ಉಚಿತ ಹೊಲಿಗೆ ಯಂತ್ರ ಅರ್ಜಿಗೆ ಕೊನೆಯ ದಿನಾಂಕ ಹತ್ತಿರ!