ಹಲೋ ಸ್ನೇಹಿತರೇ, ಸಿಎಂ ಸಿದ್ದರಾಮಯ್ಯ ಅವರು ಸಹಕಾರ ಇಲಾಖೆಗಳ ಅನುದಾನದಲ್ಲಿ ಗ್ರಾಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯಗಳನ್ನು ಬಲಪಡಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ಸರ್ಕಾರ ರೈತರಿಗಾಗಿ 15 ಲಕ್ಷದವರೆಗು ಬಡ್ಡಿ ರಹಿತ ಸಾಲವನ್ನು ನೀಡಲು ನಿರ್ಧಾರವನ್ನು ಮಾಡಿದೆ ಎಂದಿನಿಂದ ನೀಡಲಿದೆ ಮತ್ತು ಯಾವ ಬ್ಯಾಂಕ್‌ನಲ್ಲಿ ಹೇಗೆ ಪಡೆದುಕೊಳ್ಳಬೇಕು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.
Contents
ರಾಜ್ಯ ಬಜೆಟ್
ಸಹಕಾರ ಇಲಾಖೆಯ ಅನುದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗ್ರಾಮೀಣ ಆರ್ಥಿಕತೆಯ ಜೀವನಾಡಿ ಆಗಿರುವ ಸಹಕಾರ ವಲಯಗಳನ್ನು ಬಲಪಡಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. 2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹಾಗೂ ಮಧ್ಯಮಾವಧಿ & ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿಯ ದರದಲ್ಲಿ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲು ಮಹತ್ತರ ಕ್ರಮವನ್ನು ಕೈಗೊಳ್ಳಲಾಗಿದೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ರೂ. ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿಯನ್ನು ಹೊಂದಿದೆ ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಲಾಯಿತು.
ಸಹಕಾರಿ ಬ್ಯಾಂಕುಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕೈಗೊಂಡ ಕ್ರಮಗಳು
1. ನಮ್ಮ ಸರ್ಕಾರದ ಹಿಂದಿನ ಅವಧಿಯ 50,000 ರೂ. ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿಯಲ್ಲಿ 21 ಲಕ್ಷ ರೈತರಿಗೆ 7,631 ಕೋಟಿ ರೂ. ಬೆಳೆ ಸಾಲ ಮನ್ನಾ ಮಾಡಲಾಯಿತು. ಈ ಯೋಜನೆಯಡಿ ಡಿಸಿಸಿ ಬ್ಯಾಂಕುಗಳಿಗೆ ಸುಮಾರು 132 ಕೋಟಿ ರೂ. ಬಿಡುಗಡೆಯಾಗದೆ ಇರುವ ಪರಿಣಾಮವಾಗಿ ಬ್ಯಾಂಕುಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾದವು. ಇದರಿಂದ DCC ಬ್ಯಾಂಕುಗಳಿಗೆ ಬಾಕಿ ಇರುವ 132 ಕೋಟಿ ರೂ. ಮೊತ್ತವನ್ನು ಬಿಡುಗಡೆ ಮಾಡಲು ನಿರ್ಧರ ಮಾಡಲಾಗಿದೆ.
ಇದನ್ನು ಓದಿ: ವಿದ್ಯಾಧನ್ ಸ್ಕಾಲರ್ಶಿಪ್: ₹10000 ದಿಂದ ₹60000 ಪ್ರತಿ ವರ್ಷ ನೇರ ವಿದ್ಯಾರ್ಥಿಯ ಖಾತೆಗೆ
2. DCC & ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ & ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನ ಮಾಡಿದೆ, ಇದರಿಂದ 57,000 ರೈತರಿಗೆ ಅನುಕೂಲವಾಗುತ್ತದೆ. ಸುಮಾರು ಇದರಿಂದ DCC /ಪಿಕಾರ್ಡ್ ಬ್ಯಾಂಕುಗಳಿಗೆ 496 ಕೋಟಿ ರೂ.ಗಳಷ್ಟು ಸಾಲ ಮರುಪಾವತಿಯಾಗುವ ನಿರೀಕ್ಷೆಯಿರುವುದರಿಂದ ಬ್ಯಾಂಕುಗಳ ಆರ್ಥಿಕ ಸ್ಥಿತಿಯು ಗಣನೀಯವಾಗಿ ಸುಧಾರಣೆಯಾಗಲಿದೆ.
ಈ ಉದ್ದೇಶಕ್ಕಾಗಿ 450 ಕೋಟಿ ರೂ. ಅನುದಾನ ಒದಗಿಲಾಗುತ್ತದೆ.
3. ಕರ್ನಾಟಕ ಕೃಷಿ ಬೆಲೆ ಆಯೋಗವು ತನ್ನ ವರದಿಗಳಲ್ಲಿ 26 ಬೆಳೆಗಳನ್ನು ನಮ್ಮ ಕರ್ನಾಟಕದಲ್ಲಿ ಪ್ರಮುಖವಾದವು ಎಂದು ಗುರುತಿಸಲಾಗಿದ್ದು, ಇವುಗಳಲ್ಲಿ 16ಕ್ಕೆ ಮಾತ್ರವೇ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸುತ್ತಿದೆ. ಆದ್ದರಿಂದ ಕರ್ನಾಟಕ ರಾಜ್ಯದ ಇತರ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ & ಇತರ ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುತ್ತಿದೆ.
4. ಕೃಷಿ ತಜ್ಞ M. S.ಸ್ವಾಮಿನಾಥನ್ ಅವರಿಗೆ ಭಾರತ ರತ್ನ ನೀಡಿರುವುದು ಸಂತೋಷದ ವಿಷಯವಾಗಿದೆ. ಅವರ ಅಧ್ಯಕ್ಷತೆಯ ಸಮಿತಿ ವರದಿ ಶಿಫಾರಸು ಮಾಡಿದಂತೆ ಕನಿಷ್ಠ ಬೆಂಬಲ ಬೆಲೆಯನ್ನು ವ್ಯವಸಾಯಕ್ಕೆ ತಗಲುವ ವೆಚ್ಚ & ಶೇ.50 ರಷ್ಟು ಲಾಭಾಂಶ ಆಧಾರದಡಿ ನಿಗದಿ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
ಇತರೆ ವಿಷಯಗಳು
ರೈತರಿಗಾಗಿ ಇಂದಿನಿಂದ ಆರಂಭವಾಯ್ತು ಕೃಷಿ ಸಂಪದಾ ಯೋಜನೆ!!
ಮನೆಯಿಲ್ಲದವರಿಗೆ ಸರ್ಕಾರದ ನೆರವು! ಸಿಗಲಿದೆ ಸಂಪೂರ್ಣ ಹಣದ ಜೊತೆ ಉಚಿತ ಮನೆ
1. ಎಷ್ಟ ಹಣಕ್ಕೆ ಬಡ್ಡಿ ರಹಿತ ಸಾಲವನ್ನು ನೀಡಲು ಸರ್ಕಾರ ನಿರ್ಧರಿಸಿದೆ.
15 ಲಕ್ಷಕ್ಕೆ ಬಡ್ಡಿ ರಹಿತ ಸಾಲವನ್ನು ನೀಡಲು ನಿರ್ಧರಿಸಲಾಗಿದೆ.
2.ಅಲ್ಪಾವಧಿ ಸಾಲವನ್ನು 3 ಲಕ್ಷದಿಂದ ಎಷ್ಟು ಲಕ್ಷಕ್ಕೆ ಏರಿಸಲಾಗಿದೆ?
3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.