rtgh

ಕುರಿ ಸಾಕುವವರಿಗೆ ಸಿಎಂ ಕೊಟ್ರು ಸಿಹಿ ಸುದ್ದಿ! 1 ಕುರಿಗೆ ₹5,000 ಪರಿಹಾರ

Anugraha yojane
Share

ಹಲೋ ಸ್ನೇಹಿತರೆ, ಕುರಿಗಾಹಿಗಳ ರಕ್ಷಣೆ ಮಾಡುವುದು ಸರ್ಕಾರದ ಕೆಲಸ. ಈಗಾಗಲೇ ಕುರಿಗಳು ಸತ್ತರೆ ಒಂದು ಕುರಿಗೆ 5 ಸಾವಿರ ರೂಪಾಯಂತೆ ಪರಿಹಾರ ನೀಡುವಂತ ಅನುಗ್ರಹ ಯೋಜನೆ ಜಾರಿಯಲ್ಲಿದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಕುರಿತು ಪರಿಶೀಲನೆ ನೆಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Anugraha yojane

ಸಂಚಾರಿ ಕುರಿ ಸಾಕುವವರಿಗೆ ಗುರುತಿನ ಚೀಟಿ ನೀಡಲಾಗುವುದು. ಗುರುತಿನ ಚೀಟಿ ಇದ್ದರೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಗೆ ನೀಡಲು ಸಹಾಯವಾಗುತ್ತದೆ. ಕುರಿಗಳ ಕಳ್ಳತನವನ್ನು ತಡೆಯಲು ಅಗತ್ಯವಿದ್ದರಿಗೆ ಬಂದೂಕಿನ ಲೈಸೆನ್ಸ್ ಕೊಡಿಸಲು ಸಹ ಸೂಚಿಸಲಾಗುವುದು. ಕುರಿ ಕಳ್ಳತನ ಪ್ರಕರಣಗಳ ಕುರಿತು ಯಾವುದೇ ದೂರು ಠಾಣೆಗೆ ಬಂದ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಸಂಚಾರಿ ಕುರಿ ಸಾಕುವವರಿಗೆ ಹಾಗೂ ಕುರಿಗಳಿಗೆ ಅಗತ್ಯ ಭದ್ರತೆ ಒದಗಿಸಲು ಸೂಚಿಸಲಾಗುವುದು ಎಂದು ಹೇಳಿದರು.

ಇದನ್ನು ಓದಿ: ಸರ್ಕಾರಿ ನೌಕರರ ಆಫೀಸ್‌ ಟೈಮ್ ನಿಯಮ ಬದಲು!

ಅನುಗ್ರಹ ಕಾರ್ಯಕ್ರಮದಲ್ಲಿ ಬಾಕಿ ಇರುವ ಪರಿಹಾರ ನೀಡುವ ಬಗ್ಗೆ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು. ಕುರಿಗಳ ಅಭಿವೃದ್ಧಿ, ಕುರಿಗಾಹಿಗಳ ಭದ್ರತೆ, ಕುರಿ ವ್ಯಾಪಾರಕ್ಕೆ ನೆರವು, ಮಾರುಕಟ್ಟೆ ವಿಸ್ತರಣೆ ಮಾಡಲು ನೆರವು, ಗೋಮಾಳಗಳನ್ನು ಯಾರಿಗೂ ವಶ ಮಾಡದಂತೆ ರಕ್ಷಿಸಲು, ಹಾಗೂ ಒತ್ತುವರಿ ಮಾಡಿಕೊಂಡರೆ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ ಎಂದರು.

ರಾಜ್ಯದಲ್ಲಿನ ವಲಸೆ ಕುರಿ ಸಾಕುವವರು ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯವನ್ನು ತಡೆಯುವ ಕಾಯ್ದೆ ರೂಪಿಸುವುದು, ಕುರಿಗಳಿಗೆ ಉಚಿತ ಲಸಿಕೆ ನೀಡಲೂ ಅಗತ್ಯ ಸೂಚನೆಯನ್ನು ಸಹ ನೀಡಲಾಗುವುದು. ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ ನೀಡಲು ವ್ಯವಸ್ಥೆ ಕೈಗೊಳ್ಳಲಾಗುವುದು. ಈ ಗುರುತಿನ ಚೀಟಿ ಆಧಾರದ ಮೇಲೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಂದೂಕು ಪರವಾನಗಿ ನೀಡಲು ಅನುಮತಿ, ಕುರಿ ಸಾಕುವವರ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಆದ್ಯತೆ ಮೇರೆಗೆ ಪ್ರವೇಶ ನೀಡುವ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಲಿದ್ದು ಇವುಗಳಿಗೆ ಸರ್ಕಾರಿ ಆದೇಶ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಪ್ರಸ್ತುತ ಪಶುಸಂಗೋಪನಾ ಇಲಾಖೆಯಲ್ಲಿ 1300 ಖಾಲಿ ಹುದ್ದೆಗಳಿದ್ದು, ಸದ್ಯಕ್ಕೆ 400 ವೈದ್ಯರನ್ನು ನೇಮಕ ಮಾಡಲಾಗುತ್ತಿದೆ. ಮುಂದಿನ ವರ್ಷ ಬಾಕಿ ವೈದ್ಯರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದರು.

ಪಶು ವೈದ್ಯರು ಕುರಿಗಾರರು ಕ್ಯಾಂಪ್ ಮಾಡಿರುವ ಕಡೆಗಳಲ್ಲೇ ಬಂದು ಚಿಕಿತ್ಸೆ ನೀಡಬೇಕು ಎಂದು ಆದೇಶಿಸಲಾಗಿದೆ. ಕುರಿಗಾರರ ಕುರಿ ಕಳ್ಳತನವಾದರೆ ಕೂಡಲೇ ತನಿಖೆ ಮಾಡಬೇಕು, ಹಾಗು ರಕ್ಷಣೆ ನೀಡುವ ವ್ಯವಸ್ಥೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು. ಹಿಂದಿನ ಸರ್ಕಾರ ಸತ್ತ ಕುರಿಗಳಿಗೆ ನೀಡುವ ಅನುಗ್ರಹ ಯೋಜನೆಯನ್ನು ಬಂದ್‌ ಮಾಡಿದ್ದು, ಈ ಕುರಿತು ಪರಿಹಾರ ನೀಡುವ ಬಗ್ಗೆ ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಲಾಗುವುದು ಎಂದು ಸ್ಪಷ್ಟೀಪಡಿಸಿದರು.

ಇತರೆ ವಿಷಯಗಳು:

ರಾಜ್ಯದ್ಯಾಂತ ಕಲರ್‌ಫುಲ್‌ ಕಬಾಬ್ ಮಾರಾಟ ಬ್ಯಾನ್‌! ಆರೋಗ್ಯ ಇಲಾಖೆ ಆದೇಶ

ಜುಲೈ 1 ರಿಂದ ಬದಲಾಗಲಿದೆ ಮೊಬೈಲ್ ಸಂಖ್ಯೆ ಪೋರ್ಟೆಬಿಲಿಟಿ ರೂಲ್ಸ್!


Share

Leave a Reply

Your email address will not be published. Required fields are marked *