ಹಲೋ ಸ್ನೇಹಿತರೇ, ಜುಲೈ ತಿಂಗಳ ಅಂತ್ಯದೊಳಗಾಗಿ ಕಂದಾಯ ಇಲಾಖೆಯಿಂದ ರೈತರ ಜಮೀನುಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಯೋಜನೆ ರೂಪಿಸಿದೆ, ರೈತರು ಈ ಲೇಖನದಲ್ಲಿ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.
ರೈತರು ತಮ್ಮ ಜಮೀನುಗಳಿಗೆ ಆಧಾರ್ ಕಾರ್ಡ್ ಲಿಂಕ್ ಎಲ್ಲಿ ಮಾಡಿಸಬೇಕು? ಅಗತ್ಯ ದಾಖಲೆಗಳು ಏನು?
“ಯಾರದೋ ಜಮೀನನ್ನು ಮತ್ತೊಬ್ಬರು ಲಪಟಾಯಿಸುವುದನ್ನು ತಡೆಗಟ್ಟಲು, ಬೆಳೆ ನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡುವುದು ತಪ್ಪಿಸಲು ರಾಜ್ಯದಲ್ಲಿನ ಎಲ್ಲ ಆಸ್ತಿಗಳಿಗೆ ಆಧಾರ್‌ಲಿಂಕ್ ಮಾಡುವ ಪ್ರಕ್ರಿಯೆ ಜುಲೈ ಅಂತ್ಯಕ್ಕೆ ಮುಗಿಯಲಿದೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
Contents
ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಎಲ್ಲಿ ಮಾಡಿಸಬೇಕು?
ರೈತರು ತಮ್ಮ ಜಮೀನಿಗಳ ಎಲ್ಲಾ ಸರ್ವೆ ನಂಬರಿನ ಎಲ್ಲಾ ಪಹಣಿ/RTC & ನಿಮ್ಮ ಆಧಾರ್ ಕಾರ್ಡ್ ಪ್ರತಿ, ಆಧಾರ್ ಗೆ ಲಿಂಕ್ ಇರುವ ಮೊಬೈಲ್ ಪೋನ್ ಅನ್ನು ತೆಗೆದುಕೊಂಡು ನಿಮ್ಮ ಗ್ರಾಮ/ಹಳ್ಳಿಯ ಗ್ರಾಮ ಲೆಕ್ಕಾಧಿಕಾರಿ/VA ಭೇಟಿ ಮಾಡಿ ಪಹಣಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.
ಇದಲ್ಲದೇ ನಿಮ್ಮ ಹೋಬಳಿಯ ನಾಡಕಚೇರಿಯನ್ನು ಮೇಲೆ ತಿಳಿಸಿರುವ ಅಗತ್ಯ ದಾಖಲೆ ಸಮೇತ ಹೋಗಿ ಪಹಣಿ/RTC ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಬಹುದು.
ಮೊಬೈಲ್ ನಲ್ಲೇ RTC ಗೆ ಆಧಾರ್ ಲಿಂಕ್ ಮಾಡಬಹುದು?
ರೈತರು ಈ ಕೆಳಗೆ ನೀಡಿರುವ ಕಂದಾಯ ಇಲಾಖೆಯ ಅಧಿಕೃತ ವೆಬ್ಸೈಟ್ ಪ್ರವೇಶ ಮಾಡಿ ತಮ್ಮ ಮೊಬೈಲ್ ನಲ್ಲೇ ಆನ್ಲೈನ್ ಮೂಲಕ ಪಹಣಿಗೆ ಆಧಾರ್ ಲಿಂಕ್ ಮಾಡಬಹುದು.
ಇದನ್ನೂ ಓದಿ: ರಾಜ್ಯದಲ್ಲಿ ಧಾರಾಕಾರ ಮಳೆ-ಗಾಳಿ.! ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ 3 ದಿನ ರಜೆ
Step-1: ಮೊದಲು ಈ RTC adhar card link status ಲಿಂಕ್ ಮೇಲೆ ಕ್ಲಿಕ್ ಮಾಡಿ ಕಂದಾಯ ಇಲಾಖೆಯ ಭೂಮಿ ವೆಬ್‌ಸೈಟ್ ಭೇಟಿ ನೀಡಿ. ಬಳಿಕ ಜಮೀನು ಯಾರ ಹೆಸರಿಗೆ ಇರುತ್ತದೆಯೋ ಅವರ ಮೊಬೈಲ್ ಸಂಖ್ಯೆಯನ್ನು ಹಾಕಿ ಅಲ್ಲೇ ಕೆಳಗೆ ಕಾಣುವ ಕ್ಯಾಪ್ಚ್ ಕೋಡ್ ಹಾಕಿ “SEND OTP” ಆಯ್ಕೆ ಮೇಲೆ ಕ್ಲಿಕ್ ಮಾಡಿ.
ನಂತರ ನೀವು ಹಾಕಿರುವ ಮೊಬೈಲ್ ಸಂಖ್ಯೆ ಬಂದಿರುವ 6 ಅಂಕಿಯ ಒಟಿಪಿ ಅನ್ನು ನಮೂದಿಸಿ “LOGIN” ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
Step-2: ಮೇಲಿನ ವಿಧಾನ ಅನುಸರಿಸಿ ಲಾಗಿನ್ ಅದ ನಂತರ ಅರ್ಜಿದಾರರ ಆಧಾರ್ ಕಾರ್ಡ್ ಸಂಖ್ಯೆ & ಆಧಾರ್ ಕಾರ್ಡ್‌ನಲ್ಲಿ ಇದ್ದಹಾಗೆ ಹೆಸರನ್ನು ಭರ್ತಿ ಮಾಡಿ “Verify” ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ “ಆಧಾರ್ ಯಶಸ್ವಿಯಾಗಿ ಪರಿಶೀಲಿಸಲಾಗಿದೆ” ಎಂದು ಗೋಚರಿಸುತ್ತದೆ ಇದಕ್ಕೆ “OK” ಎಂದು ಕ್ಲಿಕ್ ಮಾಡಿ.
Step-3: ಈ ಮೇಲಿನ ಹಂತವನ್ನು ಮುಗಿಸಿದ ಬಳಿಕ ಅಲ್ಲೇ ಕೆಳಗೆ ಗೋಚರಿಸುವ “ಆಧಾರ್ ಪರಿಶೀಲನೆಯನ್ನು ಬಳಸಿಕೊಂಡು ಅರ್ಜಿದಾರರ ವಿವರವನ್ನು ಭರ್ತಿ ಮಾಡಿ” ಎನ್ನುವ Button ಮೇಲೆ ಕ್ಲಿಕ್ ಮಾಡಿ ಇಲ್ಲಿ ಮತ್ತೊಮ್ಮೆ ಅರ್ಜಿದಾರರ ಆಧಾರ್ ಕಾರ್ಡ್ ನಂಬರ್ ಅನ್ನು ಹಾಕಿ OTP ಬಟನ್ ಮೇಲೆ ಟಿಕ್ ಮಾಡಿ OTP ಪಡೆಯಿರಿ/Generate OTP ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಅನ್ನು ಹಾಕಿ “ಸಲ್ಲಿಸು/Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-4: ಈ ಪೇಜ್ ನ ಮುಖಪುಟದ ಎಡಬದಿಯಲ್ಲಿ ಕಾಣುವ “ಲಿಂಕ್ ಆಧಾರ್/Link Aadhar” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಕೆಳಗಡೆ ಕಾಣುವ ನಿಮ್ಮ ಸರ್ವೆ ನಂಬರ್ ಒಂದೊಂದನ್ನು ಟಿಕ್ ಮಾಡಿಕೊಂಡು ಅದರ ಮುಂದೆ ಕಾಣುವ “Link” ಬಟನ್ ಮೇಲೆ ಕ್ಲಿಕ್ ಮಾಡಬೇಕು ನಂತರ ಮತ್ತೆ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ನಮೂದಿಸಿ “Verify OTP” ಬಟನ್ ಮೇಲೆ ಕ್ಲಿಕ್ ಮಾಡಬೇಕು ಅಗ “ಪಹಣಿಯೊಂದಿಗೆ ನಿಮ್ಮ ಆಧಾರ್ ಅನ್ನು ಲಿಂಕ್ ಮಾಡಲು ನೀವು ಬಯಸುವಿರಾ?” ಎಂದು ಪ್ರಶ್ನೆ ತೋರಿಸುತ್ತದೆ ಅದಕ್ಕೆ ಹೌದು/Yes ಎಂದು ಕ್ಲಿಕ್ ಮಾಡಿದರೆ ಈ ಸರ್ವೆ ನಂಬರ್ ಈಗಾಗಲೇ ಲಿಂಕ್ ಆಗಿದೆ/Survey No. already linked” ಎನ್ನುವ ಸಂದೇಶ ತೋರಿಸಿದರೆ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಆಗಿದೆ ಎಂದು ನೀವು ತಿಳಿದುಕೊಳ್ಳಬೇಕು.
ಲಿಂಕ್ ಮಾಡುವ ವಿಧಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ: Click here
ಕೆಳಗೆ ನೀಡಿರುವ ಸೌಲಭ್ಯ ಪಡೆಯಲು ಪಹಣಿಗೆ ಅಧಾರ್ ಲಿಂಕ್ ಕಡ್ಡಾಯ:
1) ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ಪಡೆದುಕೊಳ್ಳಲು.
2) ಬರ ಪರಿಹಾರ, ಬೆಳೆ ನಷ್ಟ ಪರಿಹಾರ & ಬೆಳೆ ವಿಮೆ ಪರಿಹಾರ ಇತರೆ ಬಗ್ಗೆಯ ಹಾನಿ ಪರಿಹಾರಗಳನ್ನು ಪಡೆದುಕೊಳ್ಳಲು.
3) ಸಹಾಯಧನದಲ್ಲಿ ಕೃಷಿ ಯಂತ್ರೋಪಕರಣ ಪಡೆಯಲು ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.
ತೋಟಗಾರಿಕೆ, ಕೃಷಿ, ಪಶುಸಂಗೋಪನೆ, ಅರಣ್ಯ, ರೇಷ್ಮೆ ಇಲಾಖೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸಹಾಯಧನ ಯೋಜನೆಗಳ ಸೌಲಭ್ಯ ಪಡೆಯಲು RTC ಗೆ ಆಧಾರ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ.
ಇತರೆ ವಿಷಯಗಳು
ಹೊಸ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್!
7 ನೇ ವೇತನ ಆಯೋಗ ಜಾರಿಗೆ ಸಿಎಂ ಗ್ರೀನ್ ಸಿಗ್ನಲ್! ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್