ಹಲೋ ಸ್ನೇಹಿತರೇ, ಶಾಲೆ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ಹುದ್ದೆಗಳ ನೇಮಕಾತಿ ಮತ್ತು ಅರ್ಜಿ ಸಲ್ಲಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.
ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35,000 ಪ್ರೌಢಶಾಲೆಗಳಲ್ಲಿ 10,000 ಸೇರಿ 45,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ನೀಡಲಾಗಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 10,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತು ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.
ಈಗಾಗಲೇ ಶಿಕ್ಷಣ ಇಲಾಖೆ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆ ಪ್ರಾರಂಭಿಸಿದ್ದು, ಹಣಕಾಸು ಇಲಾಖೆ ಅನುಮತಿ ನೀಡಿದ ಕೂಡಲೇ ಅಧಿಕೃತ ಅಧಿಸೂಚನೆ ಹೊರಬೀಳುತ್ತದೆ.
ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35,000 ಪ್ರೌಢಶಾಲೆಗಳಲ್ಲಿ 10,000 ಸೇರಿ 45,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ನೀಡಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿದುಬಂದಿದೆ.
ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಕನಿಷ್ಠ 50,000, ಪ್ರೌಢಶಾಲೆಗಳಲ್ಲಿ ಕನಿಷ್ಠ 5,000 ಶಿಕ್ಷಕರ ಕೊರತೆ ಇದೆ. ಶಿಕ್ಷಣ ಇಲಾಖೆ ಹೊಸದಾಗಿ 10 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಿದೆ.
ಇತರೆ ವಿಷಯಗಳು
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆ ಬ್ಯಾನ್!!
ಈ ದಿನದಿಂದ UPI ವಹಿವಾಟುಗಳು ಬಂದ್..!