ಹಲೋ ಸ್ನೇಹಿತರೆ, ಸರ್ಕಾರ ಎಲ್ಲರೂ ಒಂದೇ ಎಂಬ ಸಮಾನತೆ ಭಾವವನ್ನು ಸಣ್ಣ ವಯಸ್ಸಿನಲ್ಲೇ ಮೂಡಿಸಲು ಈಗ ಅಂಗನವಾಡಿ ಮಕ್ಕಳಿಗೂ ಸಹ ಬ್ಯಾಗ್, ಸಮವಸ್ತ್ರ ನೀಡಲಾಗುವುದು ಎಂದು ತಿಳಿಸಲಾಗಿದೆ. ಅಂಗನವಾಡಿ ಹೆಸರು ಬದಲಾವಣಗೆ ಚಿಂತನೆಯೂ ನಡೆದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಯಾವಾಗ ವಿತರಣೆ ಕಾರ್ಯ ಆರಂಭವಾಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರು, ಫೆಡರೇಶನ್ ಕಾರ್ಯಕರ್ತರು ತಮ್ಮ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಿದ್ದರು. ಮನವಿಯನ್ನು ಸ್ವೀಕರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ, ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ ಕೊಡುವ ವಿಷಯದ ಬಗ್ಗೆ ತೀರ್ಮಾನಿಸಲಾಗಿದೆ. ಮಾಂಟೆಸ್ಸರಿ ತರಗತಿಗಳು ಆರಂಭವಾದ ನಂತರ ಅಂಗನವಾಡಿ ಹೆಸರನ್ನು ಬದಲಾಯಿಸಲು ಸರ್ಕಾರ ಸಹ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಈ ದಿನದಿಂದ UPI ವಹಿವಾಟುಗಳು ಬಂದ್..!
ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ಅಂಗನವಾಡಿ ಕೇಂದ್ರಗಳಲ್ಲಿಯೂ ಕೂಡ ಪೂರ್ವ ಹಾಗೂ ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಪ್ಪಿಗೆ ಸೂಚಿಸಿದ್ದಾರೆ. ಈಗಾಗಲೇ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದ್ದೂ. ಕಾರ್ಯಕರ್ತೆಯರಿಗೆ ಯಾವುದೇ ಆತಂಕ ಬೇಡ. ಹಾಗೆಯೇ ಅವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಕರ್ನಾಟಕ ಪಬ್ಲಿಕ್ ಸ್ಕೂಲ್ಗಳು, ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನ ಮಾಡಿದ್ದು, ಇದರಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ.
ಇತರೆ ವಿಷಯಗಳು:
ಅನ್ನದಾತರಿಗೆ ಸಿಹಿ ಸುದ್ದಿ: ಪಿಎಂ ಕಿಸಾನ್ ಹಣದಲ್ಲಿ ದಿಢೀರ್ ಜಿಗಿತ!
ಶಾಲಾ ಮಕ್ಕಳ ʻಬ್ಯಾಗ್ ಹೊರೆʼ ತಗ್ಗಿಸಿದ ಸರ್ಕಾರ! ಶಿಕ್ಷಣ ಇಲಾಖೆಯ ಮಹತ್ವದ ಕ್ರಮ