rtgh

5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಪರೀಕ್ಷೆ ರದ್ದು

assessment test for 5th 8th and 9th class
Share

ಹಲೋ ಸ್ನೇಹಿತರೇ, 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ & ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ & ಶೈಕ್ಷಣಿಕ ಮಾರ್ಗದರ್ಶಿಯ ಉಲ್ಲೇಖಗಳ ಅನ್ವಯ ಈ ವರ್ಷ 5, 8, 9ನೇ ಕ್ಲಾಸ್‌ಗೆ ಅಸೆಸ್ಮೆಂಟ್‌ ಪರೀಕ್ಷೆ ಇರುವುದಿಲ್ಲ ಎಂದಿದೆ. ಬದಲಿಗೆ ಈ ಹಿಂದಿನಂತೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ.

assessment test for 5th 8th and 9th class

ಕರ್ನಾಟಕ ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9ನೇ ತರಗತಿ ಮಕ್ಕಳಿಗೆ ನಡೆಸಿದ ಮೌಲ್ಯಾಂಕನ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವ ಕಾರಣದಿಂದ, 2024-25 ನೇ ಸಾಲಿನಲ್ಲಿ ಈ ಹಿಂದೆ ಇದ್ದಂತ ಮಾದರಿಯಲ್ಲಿ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆಸಲು ಶಿಕ್ಷಣ ಇಲಾಖೆ ಸೂಚಿಸಿದೆ.

ಈ ಸಂಬಂಧ ಎಲ್ಲ ಶಾಲೆಗಳಿಗೂ ನಿರ್ದೇಶನ ನೀಡಿರುವ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳು 1 ರಿಂದ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಭಾಗ 1 & ಭಾಗ 2 ರ ಆಧಾರದಲ್ಲಿ ರೂಪಣಾತ್ಮಕ & ಸಂಕಲನಾತ್ಮಕ ಮೌಲ್ಯಾಂಕನ ಪೂರ್ಣಗೊಳಿಸಬೇಕು. ಅಂತಿಮವಾಗಿ ಫಲಿತಾಂಶ ನಿರ್ಧರಿಸಲು ಆಂತರಿಕ ಮೌಲ್ಯಾಂಕನ ಅಂಕಗಳು & ಲಿಖಿತ ಪರೀಕ್ಷೆಯ ಎಸ್‌ಎ-2 ಅಂಕಗಳನ್ನು ಪರಿಗಣಿಸಬೇಕು ಎಂದಿದೆ. 10ನೇ ತರಗತಿಗೆ ಮಾತ್ರ ಆಂತರಿಕ ಮೌಲ್ಯಾಂಕನ ಅಂಕಗಳು ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ನಡೆಸುವ ವಾರ್ಷಿಕ ಪರೀಕ್ಷೆಯ ಅಂಕಗಳನ್ನು ಫಲಿತಾಂಶವಾಗಿ ಪ್ರಕಟಿಸಬೇಕೆಂದು ಸೂಚಿಸಿದೆ.

2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯ ಪಠ್ಯಕ್ರಮದ 1 ರಿಂದ 10ನೇ ತರಗತಿಗೆ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಶೈಕ್ಷಣಿಕ ಮಾರ್ಗದರ್ಶಿಯ ಉಲ್ಲೇಖಗಳನ್ವಯ ಈ ನಿರ್ದೇಶನ ಹೊರಡಿಸಲಾಗಿದ್ದು, ಇದನ್ನು ಆಧರಿಸಿ ಶಾಲೆಗಳಲ್ಲಿ ಪಠ್ಯವಸ್ತು ಬೋಧನೆ ಹಾಗೂ ಮೌಲ್ಯಾಂಕನ ಕುರಿತು ವಹಿಸಬೇಕಾದ ಕ್ರಮಗಳನ್ನು ನಿರ್ದೇಶಿಸಿದೆ.

ಅಲ್ಲದೇ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ನಿಟ್ಟಿನಲ್ಲಿ 2024-25ನೇ ಸಾಲಿನಲ್ಲಿ ಪಠ್ಯಪುಸ್ತಕಗಳನ್ನು ಭಾಗ-1 ಮತ್ತು ಭಾಗ-2 ರಂತೆ ಪ್ರತ್ಯೇಕವಾಗಿ ಮುದ್ರಿಸಲಾಗಿದೆ. ಭಾಗ-1 ರ ಪಠ್ಯ ಶೇಕಡ.50 ಹಾಗೂ ಭಾಗ-2 ರ ಪಠ್ಯ ಶೇಕಡ.50 ಒಟ್ಟು ಸೇರಿ ಶೇಕಡ.100 ರಷ್ಟು ಪಠ್ಯವನ್ನು ಮೌಲ್ಯಾಂಕನಕ್ಕೆ ಒಳಪಡಿಸುವ ವಿಧಾನವನ್ನು ನೀಡಲಾಗಿದ್ದು, ಅದರಂತೆ ಕ್ರಮವಹಿಸಲು ಶಾಲೆಗಳಿಗೆ ಸೂಚಿಸಿದೆ. ಹಾಗೂ ಯಾವ ತರಗತಿಗಳಿಗೆ ರೂಪಣಾತ್ಮಕ, ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆಗಳು ಹೇಗಿರಬೇಕು ಎಂದು ತಿಳಿಸಿದೆ.

ಶಾಲಾ ಹಂತದಲ್ಲಿ ಮೌಲ್ಯಾಂಕನ ಪ್ರಕ್ರಿಯೆಗಳನ್ನು ನಡೆಸಿ, ವಿದ್ಯಾರ್ಥಿಗಳು ಗುಣಾತ್ಮಕ ಪ್ರಗತಿಯನ್ನು ಸಾಧಿಸಲು ಜಿಲ್ಲೆಯ ಉಪನಿರ್ದೇಶಕರು, ಆಡಳಿತ ಹಾಗೂ ಉಪನಿರ್ದೇಶಕರು, ಅಭಿವೃದ್ಧಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಮೇಲ್ವಿಚಾರಣಾ ಅಧಿಕಾರಿಗಳು, ಜಿಲ್ಲೆ, ಬ್ಲಾಕ್‌ ಮತ್ತು ಕ್ಲಸ್ಟರ್ ಹಂತದ ಮಾಸಿಕ ಸಭೆಗಳಲ್ಲಿ ಶೈಕ್ಷಣಿಕವಾಗಿ ಅಗತ್ಯ ಮಾರ್ಗದರ್ಶನ ನೀಡಲು ಇಲಾಖೆ ನಿರ್ದೇಶನ ನೀಡಿದೆ. ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಆಗಿಂದ್ದಾಗೆ ಇಲಾಖೆಯಿಂದ ಹೊರಡಿಸುವ ಜ್ಞಾಪನ / ಸುತ್ತೋಲೆಗಳನ್ನು ಅನುಸರಿಸಬೇಕು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬ್ಯಾಗ್ ಹೊರೆ ತಪ್ಪಿಸಲು ಕ್ರಮ

ಶಾಲಾ ಬ್ಯಾಗ್ ಹೊರೆ ತಗ್ಗಿಸುವ ನಿಟ್ಟಿನಲ್ಲಿ 2024-25ನೇ ಸಾಲಿನಲ್ಲಿ ಪಠ್ಯಪುಸ್ತಕಗಳನ್ನು ಭಾಗ-1 & ಭಾಗ-2 ರಂತೆ ಪ್ರತ್ಯೇಕವಾಗಿ ಮುದ್ರಿಸಲಾಗಿದೆ. ಭಾಗ-1 ರ ಪಠ್ಯ ಶೇಕಡ 50 ಹಾಗೂ ಭಾಗ-2 ರ ಪಠ್ಯ ಶೇಕಡ 50 ಒಟ್ಟು ಸೇರಿ ಶೇಕಡ 100 ರಷ್ಟು ಪಠ್ಯವನ್ನು ಮೌಲ್ಯಾಂಕನಕ್ಕೆ ಒಳಪಡಿಸುವ ವಿಧಾನವನ್ನು ನೀಡಲಾಗಿದ್ದು, ಅದರಂತೆಯೇ ಕ್ರಮವಹಿಸುವುದು ಎಂದು ಹೇಳಿದೆ.

ಇತರೆ ವಿಷಯಗಳು

ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್.!‌ ಹಣ ಪಡೆಯಲು ಈ ಗುರುತಿನ ಚೀಟಿ ಕಡ್ಡಾಯಗೊಳಿಸದ ಸರ್ಕಾರ

ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ.44 ಹೆಚ್ಚಳ! ಹಣಕಾಸು ಇಲಾಖೆ ನಿರ್ಧಾರ


Share

Leave a Reply

Your email address will not be published. Required fields are marked *