ಶಿವಮೊಗ್ಗ: ಮುಂದಿನ ವರ್ಷದಿಂದ ರಾಜ್ಯ ಸರ್ಕಾರವೇ NEET ತರಬೇತಿಯನ್ನು ಉಚಿತವಾಗಿ ನೀಡಲಿದೆ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ SSLC ಪರೀಕ್ಷೆಯಲ್ಲಿ ಹೆಚ್ಚು ಅಂಕವನ್ನು ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ, ಶೇಕಡ 100% ಫಲಿತಾಂಶವನ್ನು ಪಡೆದ ಶಾಲೆಗಳ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮುಂದಿನ ವರ್ಷದಿಂದ ರಾಜ್ಯ ಸರ್ಕಾರವೇ 20 ಸಾವಿರ ವಿಧ್ಯಾರ್ಥಿಗಳಿಗೆ ಉಚಿತ ನೀಡ್ ತರಬೇತಿಯನ್ನು ನೀಡಲಿದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಅವರನ್ನು ಆಯ್ಕೆ ಮಾಡಿ ನೀಟ್ ತರಬೇತಿಯನ್ನು ನೀಡಲಾಗುತ್ತದೆ. ಮಕ್ಕಳಿಗೆ ನೀಟ್ ತರಬೇತಿಯನ್ನು ಕೊಡಿಸುವುದು ಹೆಚ್ಚಿನ ಪೋಷಕರಿಗೆ ಇದು ಸಾಧ್ಯವಾಗುತ್ತಿಲ್ಲ. ನೀಟ್ ತರಬೇತಿಯನ್ನು ಕೊಡಿಸುವುದು ಅತಿ ದುಬಾರಿಯಾಗಿದ್ದು, ಹೀಗಾಗಿ ಸರ್ಕಾರವೇ ಮಕ್ಕಳಿಗೆ ತರಬೇತಿಯನ್ನು ಕೊಡಿಸಲಿದೆ ಎಂದು ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
ಇತರೆ ವಿಷಯಗಳು:
ಕರ್ನಾಟಕ ಲೈನ್ಮೆನ್ ಹುದ್ದೆಗಳಿಗೆ ನೇಮಕ.! 30 ಸಾವಿರ ಸಂಬಳ ಪಡೆಯಲು ಇಂದೇ ಅಪ್ಲೇ ಮಾಡಿ
ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್..!