ಹಲೋ ಸ್ನೇಹಿತರೆ, ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರೆದಿದ್ದು, ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಎಷು ದಿನ ರಜೆ ಇರಲಿದೆ? ಯಾವ ಯಾವ ಜಿಲ್ಲೆಗಳಲ್ಲಿ ರಜೆ ರಲಿದೆ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಈ ಲೇಖನವನ್ನು ಓದಿ.
ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸುತ್ತ ಮುತ್ತಲಿನ ಹತ್ತು ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾದ ಲಕ್ಷ್ಮೀಪ್ರಿಯ ಅವರು ಆದೇಶ ಹೊರಡಿಸಿದ್ದು, ಸೋಮವಾರ ಭಾರೀ ಮಳೆಯ ಕಾರಣ ಜಿಲ್ಲೆಯಾದ್ಯಂತ ಈಗಾಗಲೇ ಮಳೆಯ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಿದ್ದೂ ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೊಡಗು ಜಿಲ್ಲೆ
ಇನ್ನೂ ಕೊಡಗು ಜಿಲ್ಲೆಯಲ್ಲೂ ಮಳೆಯ ಜೋರಾಗಿ ಮುಂದುವರೆದಿದ್ದು, ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಕೊಡಗಿನ ಎಲ್ಲಾ ಶಾಲಾ-ಕಾಲೇಜುಗಳಿಗೆ, ಪದವಿ ಪೂರ್ವ ಕಾಲೇಜುಗಳಿಗೆ ಸಹ ಇಂದು ರಜೆ ಘೋಷಿಸಲಾಗಿದೆ.
ಇದನ್ನು ಓದಿ: ವಿದ್ಯಾರ್ಥಿಗಳಿಗಾಗಿ ಕೇಂದ್ರ ವಲಯದ ವಿದ್ಯಾರ್ಥಿವೇತನ! ಪ್ರತೀ ವರ್ಷ ಸಿಗತ್ತೆ 20 ಸಾವಿರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸರ್ಕಾರದ ಮುನ್ಸೂಚನೆಯಂತೆ, ದಿನಾಂಕ 15-07-2024 ರಂದು ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ಇತರೆ ವಿಷಯಗಳು:
ಈ ನೌಕರರ ಮೂಲ ವೇತನ 15000 ದಿಂದ 25000 ಕ್ಕೆ ಹೆಚ್ಚಳ..!
ರಾಜ್ಯದ ಜನತೆಗೆ ಮತ್ತೊಂದು ಶಾಕ್! ಇಂದಿನಿಂದಲೇ ಬಸ್ ಟಿಕೆಟ್ ದರ ಹೆಚ್ಚಳ