rtgh

ಬಸ್‌ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್‌ ನ್ಯೂಸ್‌!

KSRTC Bus Ticket Price
Share

ಹಲೋ ಸ್ನೇಹಿತರೆ, ಕೆಎಸ್‌ಆರ್‌ಟಿಸಿ ಸೇರಿ ಎಲ್ಲ ನಾಲ್ಕು ನಿಗಮಗಳಲ್ಲಿ ಬಸ್‌ ಪ್ರಯಾಣ ದರ ಏರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹಲವು ದಿನಗಳಿಂದ ಚರ್ಚೆ ನಡೆಯುತ್ತಿತ್ತು. ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಸಹಿತ ನಾಲ್ಕು ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ಸ್ಪಷ್ಟ ಮಾಹಿತಿ ನೀಡುವ ಮೂಲಕ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.

KSRTC Bus Ticket Price

ಕೆಎಸ್ಆರ್‌ಟಿಸಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಶ್ರೀನಿವಾಸ್ ಕೆಎಸ್ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಅಂತ ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ತಿಳಿಸಿದರು.

ರಾಜ್ಯ ಸರ್ಕಾರಕ್ಕೆ ಯಾವುದೇ ಸಾರಿಗೆ ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಸಂಬಂಧ ಇನ್ನೂ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಇದಲ್ಲದೇ ಟಿಕೆಟ್ ದರ ಏರಿಸುವಂತ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸುತ್ತಿಲ್ಲ ಎಂದು ಸ್ಪಷ್ಟ ಪಡಿಸಿದರು.

ಇದನ್ನು ಓದಿ: ಶತಕ ಬಾರಿಸಿದ ಟೊಮೆಟೊ ಬೆಲೆ! ಭಾರೀ ಮಳೆಯಿಂದ ತರಕಾರಿ ಬೆಲೆ ಹೆಚ್ಚಳ

ಗ್ಯಾರಂಟಿ ಯೋಜನೆ ಜಾರಿಗೆ ಬಂದ ನಂತರದಲ್ಲಿ ರಾಜ್ಯದ ಬೊಕ್ಕಸ ಖಾಲಿಯಾಗಿದೆ. ಕೆ ಎಸ್ ಆರ್ ಟಿಸಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ನೀಡಿದಂತ ಟಿಕೆಟ್ ದರವನ್ನು ಸರ್ಕಾರ ಈವರೆಗೆ ಹಣ ಪಾವತಿಸಿಲ್ಲ. ಈ ಎಲ್ಲಾ ಕಾರಣಗಳಿಂದ ಕೆ ಎಸ್ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿದೆ. ಇದಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಸಲಾಗಿದೆ ಎನ್ನಲಾಗಿತ್ತು.

ಇತರೆ ವಿಷಯಗಳು:

‘ಗೃಹಲಕ್ಷ್ಮಿ’ ಹಣ ಜಮೆಯ ದಿನಾಂಕ ಬದಲಾವಣೆ!

ಮುಂದಿನ ಈ ದಿನದಿಂದಲೇ ಜಾರಿ: NEET ಗೆ ಸರ್ಕಾರದಿಂದ ಉಚಿತ ತರಬೇತಿ!


Share

Leave a Reply

Your email address will not be published. Required fields are marked *