ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಬೆಂಗಳೂರು ನಗರದಲ್ಲಿ ವಾಹನ ಸವಾರರು ಪ್ರತಿ ಸಿಗ್ನಲ್ನಲ್ಲಿಯೂ 10-12 ನಿಮಿಷ ಕಾಯುವ ಸ್ಥಿತಿ ಶೀಘ್ರದಲ್ಲಿ ಬರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಆದರೆ ಈಗಿನಿಂದಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿನೆ ನೀಡಿದರು.
ಬೆಂಗಳೂರು ನಗರ ಸಂಚಾರ ವಿಭಾಗದಿಂದ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ದಟ್ಟಣೆಯನ್ನು ತಿಳಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಅತಿ ಹೆಚ್ಚು ವಾಹನ ಸಂಚಾರಿಸುವ ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಸಿಗ್ನಲ್ ಫ್ರೀ ಕಾರಿಡಾರ್ ವ್ಯವಸ್ಥೆ, ಮುಕ್ತ ಎಡ ತಿರುವು ವ್ಯವಸ್ಥೆ ಮಾಡಲಾಗಿದೆ. ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದನ್ನೂ ಸಹ ಓದಿ: ನಿಮಗೂ ಈ ಸಂಖ್ಯೆಯಿಂದ ಕರೆ ಬರುತ್ತಾ? ನಿರ್ಲಕ್ಷಿಸದೇ ಕೂಡಲೇ ಈ ಕೆಲಸ ಮಾಡಿ..!
ಇನ್ನು ಹಲವು ಕಡೆಗಳಲ್ಲಿ ಸಂಚಾರ ಸೂಚನಾ ಫಲಕಗಳ ಅಳವಡಿಕೆ, ಪೆಲಿಕಾನ್ ಸಿಗ್ನಲ್ ಲೈಟ್ ಅಳವಡಿಕೆ ಹಾಗೂ ಸಂಚಾರ ನಿರ್ವಹಣೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಅವೈಜ್ಞಾನಿಕ ರಸ್ತೆ ಉಬ್ಬುಗಳ ತೆರವು ಮಾಡಲಾಗಿದ್ದು, ವೈಜ್ಞಾನಿಕ ರಸ್ತೆ ಉಬ್ಬುಗಳನ್ನು ನಿರ್ಮಾಣ ಮಾಡಲಾಗಿದೆ. ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯನ್ನು ನಿಯಂತ್ರಣಕ್ಕೆ ತರಲಾಗಿದೆ. ಮದ್ಯಪಾನ ಮಾಡಿ, ಅಪಾಯಕಾರಿಯಾಗಿ ವಾಹನ ಚಲಾಯಿಸುವ ವಾಹನ ಸವಾರರ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುತ್ತಿದೆ.
ಇತರೆ ವಿಷಯಗಳು
ಸರ್ಕಾರದ ಬಂಪರ್ ಯೋಜನೆ..! ವಾರ್ಷಿಕ ಪಡೆಯಬಹುದು ₹60,000
ಕೇಂದ್ರದಿಂದ 8ನೇ ವೇತನ ಆಯೋಗಕ್ಕೆ ಸಜ್ಜು! ಸಂಬಳದಲ್ಲಿ ಇಷ್ಟು ಹೆಚ್ಚಳ