ಹಲೋ ಸ್ನೇಹಿತರೇ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಪ್ರವೇಶಾತಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು. ಪ್ರಸ್ತುತ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು.
Contents
ಎಲ್ಲಿ ಅರ್ಜಿ ಸಲ್ಲಿಸಬೇಕು?
ಎಲ್ಲಾ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ನಿರ್ದೇಶನಾಲಯದ ಅಧಿಕೃತ ಜಾಲತಾಣದಲ್ಲಿ ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದು / ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೌಲಾನಾ ಆಜಾದ್ ಮಾದರಿ ಶಾಲೆಗಳು, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳು & ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿಯೂ ಕೂಡ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕ: 15 ಮಾರ್ಚ 2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14 ಎಪ್ರಿಲ್ 2024
12000 ಸೀಟುಗಳು ಲಭ್ಯ
ಸದರಿ ಶಾಲೆಯಲ್ಲಿ 6ನೇ ತರಗತಿಯ ಪ್ರವೇಶಕ್ಕೆ ಸುಮಾರು 12,000 ಸೀಟುಗಳು ಲಭ್ಯವಿದೆ, ಸದರಿ ಸೀಟುಗಳಿಗೆ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಲು ಅನುಸರಿಸಬೇಕಾದ ಪ್ರವೇಶ ಪರೀಕ್ಷೆಗಳು, ವಿದ್ಯಾರ್ಥಿಗಳ ಸಂಖ್ಯೆ, ವರ್ಗವಾರು ಮೀಸಲಾತಿ, ವಿಶೇಷ ವರ್ಗಗಳಿಗೆ ಮೀಸಲಾತಿ ಮತ್ತು ಪರೀಕ್ಷೆ ನಿಬಂಧನೆ, ಷರತ್ತು, ಮಾರ್ಗಸೂಚಿಯನ್ನು ಅನುಸರಿಸಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿಸಲ್ಲಿಸಲು ಬೇಕಾದ ಅರ್ಹತೆಗಳು
- ಅಭ್ಯರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿಯಲ್ಲಿ ವ್ಯಾಸಂಗ. ಮಾಡುತ್ತಿರಬೇಕು/ಉತ್ತೀರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು..
- ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು…
- 09 ರಿಂದ 13 ವಿದ್ಯಾರ್ಥಿಗಳಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
- ವಿದ್ಯಾರ್ಥಿಯ ಎಸ್.ಎ.ಟಿ.ಎಸ್ ಸಂಖ್ಯೆ.
- ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ.
- ಜಾತಿ & ಆದಾಯ ಪ್ರಮಾಣ ಪತ್ರ.
- ವಿದ್ಯಾರ್ಥಿಯ ಅಂಗವಿಕಲ ಪ್ರಮಾಣ ಪತ್ರ.
ಪ್ರವೇಶ ಪರೀಕ್ಷೆ ವಿಧಾನ
- ಮೌಲಾನಾ ಆಜಾದ್ ಮಾದರಿ ಶಾಲೆಗಳ ಮಂಜೂರಾತಿ ವಿದ್ಯಾರ್ಥಿಗಳ ಸಂಖ್ಯೆಗಿಂತ ಹೆಚ್ಚು ಅರ್ಜಿಗಳು ಬಂದಲ್ಲಿ ಮಾತ್ರ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು ಇಲ್ಲದಿದ್ದಲ್ಲಿ ನಿಯಮಾನುಸಾರ ಮೆರಿಟ್ & ರೋಸ್ಟರ್ ಪದ್ಧತಿ ಅನುಸಾರ ದಾಖಾಲಾತಿ ಪ್ರಕ್ರಿಯೆಯನ್ನು ಕೈಗೊಳ್ಳುವುದು.
- ಆಯ್ಕೆಗೆ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳೇ ನೇರ ಮಾನದಂಡವಾಗಿರಲಿದೆ.
- ಪ್ರವೇಶ ಪರೀಕ್ಷೆಯು 100 ಅಂಕಗಳ ಬಹು ಆಯ್ಕೆ ಮಾದರಿಯಲ್ಲಿರಲಿದೆ.
- ಪ್ರಶ್ನೆ ಪತ್ರಿಕೆಯು ಕನ್ನಡ, ಉರ್ದು & ಇಂಗ್ಲೀಷ್ ಭಾಷೆಯಲ್ಲಿದ್ದು, 100 ಅಂಕದ 100 ಪ್ರಶ್ನೆಯನ್ನು ಒಳಗೊಂಡಿದ್ದು, ಸದರಿ ಪ್ರಶ್ನೆಗಳನ್ನು ಉತ್ತರಿಸಲು 120 ನಿಮಿಷ ಕಾಲಾವಕಾಶ ನೀಡುವುದು.
- ಶೇ.90% ಪ್ರಶ್ನೆಗಳು 4 & 5 ನೇ ತರಗತಿಯ ಪಠ್ಯಾಧಾರಿತವಾಗಿರುತ್ತದೆ.
- ನಿಗಧಿ ಪಡಿಸಿದ ಮಂಜೂರಾತಿ ಸಂಖ್ಯೆಗಿಂತ ಹೆಚ್ಚಿನ ಅರ್ಜಿಗಳು ಸ್ವೀಕೃತವಾದರೆ ಮಾತ್ರ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ಲಿಂಕ್: Apply Now
ಅಲ್ಪಸಂಖ್ಯಾತರ ನಿರ್ದೇಶನಾಲಯ ಅಧಿಕೃತ ವೆಬ್ಸೈಟ್: Click here
ಇತರೆ ವಿಷಯಗಳು
ಸ್ವಯಂ ಉದ್ಯೋಗಕ್ಕೆ ಎಲ್ಲಾ ವರ್ಗದವರಿಗೂ ಸಿಗುತ್ತೆ 10 ಲಕ್ಷ.! ಪ್ರಧಾನ ಮಂತ್ರಿ ಮುದ್ರಾ ಯೋಜನೆ
KEA ಹುದ್ದೆಗಳಿಗೆ ಅರ್ಜಿ ಆಹ್ವಾನ.! 97,100 ರೂ. ವೇತನ ಪಡೆಯಲು ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ