ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ನೀಡುತ್ತಿದ್ದಾರೆ. ರೇಷನ್ ಕಾರ್ಡ್ ಇಲ್ಲದವರು ಅರ್ಜಿ ಸಲ್ಲಿಸಬಹುದು. ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸಿದರೆ ನಮ್ಮ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.
Contents
ಹೊಸ ರೇಷನ್ ಕಾರ್ಡ್ ಅರ್ಜಿ
ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪನವರು ಗುಡ್ ನ್ಯೂಸ್ ನೀಡಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಹೊಸ ಕಾರ್ಡ್ ಗಳನ್ನು ಮಾರ್ಚ್ 31ರ ಒಳಗಾಗಿ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ, ಇನ್ನೂ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು.
ಹಳೆಯ ಅರ್ಜಿಗಳ ಪರಿಶೀಲನೆ
ಇಲ್ಲಿಯವರೆಗೂ ಮೂರು ಲಕ್ಷಕ್ಕೂ ಹೆಚ್ಚಿನ ಹೊಸ ರೇಷನ್ ಕಾರ್ಡ್ ಪರಿಶೀಲನೆ ಮಾಡುವ ಬಾಕಿ ಇದೆ. ಉಳ್ಳವರು ಸಹ ಬಿಪಿಎಲ್ ರೇಷನ್ ಕಾರ್ಡಿಗೆ (BPL Ration card) ಅರ್ಜಿ ಸಲ್ಲಿಸಿದ್ದಾರೆ ಅಂತವರ ರೇಷನ್ ಕಾರ್ಡ್ಗಳ ಪರಿಶೀಲನೆ ಮಾಡುವುದು ಬಹಳ ಮುಖ್ಯವಾಗಿದೆ. ಇದೊಂದು ಸುದೀರ್ಘವಾದ ಪರಿಶೀಲನೆ ಎಂದು ಹೇಳಬಹುದು ಇದರ ಪರಿಶೀಲನೆ ಮಾರ್ಚ್ 31ರ ಒಳಗಾಗಿ ಮುಗಿಯುತ್ತದೆ ನಂತರ ಹೊಸ ಪಡಿತರ ಕಾರ್ಡ್ ಗಳನ್ನು ವಿತರಣೆ ಮಾಡುವುದರ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಹೆಚ್ ಮುನಿಯಪ್ಪನವರು ಭರವಸೆ ನೀಡಿದ್ದಾರೆ.
ಬೇಕಾಗುವ ದಾಖಲೆಗಳು
- ಮನೆಯ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್
- ವಿಳಾಸದ ಪುರಾವೆ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ಗೆ ahara.kar.nic.in ಭೇಟಿ ನೀಡಿ ಅಲ್ಲಿ ಅರ್ಜಿ ಫಾರಂ ಭರ್ತಿ ಮಾಡಿ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಹಲವಾರು ಬಾರಿ ಸರ್ವರ್ ಪ್ರಾಬ್ಲಮ್ ಇರುವುದರಿಂದ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ ಸರ್ವರ್ ಪ್ರಾಬ್ಲಮ್ ಇರಬಾರದು ಎಂದರೆ ನೀವು ಸೇವ ಕೇಂದ್ರ ಮತ್ತು ನ್ಯಾಯಬೆಲೆ ಅಂಗಡಿಯಲ್ಲಿ ಅರ್ಜಿ ಸಲ್ಲುವುದು ಸೂಕ್ತ.
ಇತರೆ ವಿಷಯಗಳು
ನವೋದಯ ವಿದ್ಯಾಲಯದಲ್ಲಿ 1377 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ.! SSLC ಪಾಸಾಗಿದ್ರೆ ಸಾಕು ಅಪ್ಲೇ ಮಾಡಿ
ಉಚಿತ ವಿದ್ಯುತ್ ನೀಡಲು ಕೇಂದ್ರದಿಂದ ಹೊಸ ಯೋಜನೆ; ಹೀಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ