ಹಲೋ ಸ್ನೇಹಿತರೇ, KSC ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನಲ್ಲಿ ಅಗತ್ಯ ಇರುವ ಬ್ಯಾಂಕ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗಾಗಿ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿದವರು ಹೆಚ್ಚಿನ ಮಾಹಿತಿಯನ್ನು ತಿಳಿದು ಅರ್ಜಿಯನ್ನು ಸಲ್ಲಿಸಿ.
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು ಇಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಒಟ್ಟು 93 ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಉದ್ಯೋಗ ಬ್ಯಾಂಕ್ : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ
ಹುದ್ದೆ ಹೆಸರು : ಬ್ಯಾಂಕ್ ಸಹಾಯಕರು
ಹುದ್ದೆಗಳ ಸಂಖ್ಯೆ : 93
ವೇತನ ಶ್ರೇಣಿ : Rs.28,425-87,125.
Contents
ಅರ್ಹತೆಗಳು
- ಅರ್ಜಿ ಸಲ್ಲಿಸಲು ಇಚ್ಛಿಸುವವರು ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಸಾಮಾನ್ಯ ವರ್ಗ, OBC ಅಭ್ಯರ್ಥಿಗಳು ಶೇಕಡ.55 ಅಂಕ ಪಡೆದು ಪಾಸ್ ಆಗಿರಬೇಕು.
- SC / ST / ಪಿಡಬ್ಲ್ಯೂಡಿ ಅಭ್ಯರ್ಥಿಗಳು ಶೇಕಡ.50 ಅಂಕ ಪಡೆದು ಪಾಸ್ ಮಾಡಿರಬೇಕು.
- ಕನ್ನಡವನ್ನು ಓದುವ ಸಾಮರ್ಥ್ಯದ ಜತೆಗೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು & ಅರ್ಥಮಾಡಿಕೊಳ್ಳಬೇಕಾಗುತ್ತದೆ.
- ಕಂಪ್ಯೂಟರ್ ಆಪರೇಷನ್ & ಅಪ್ಲಿಕೇಶನ್‌ನಲ್ಲಿ ಉತ್ತಮ ಜ್ಞಾನವನ್ನು ಹೊಂದಿರಬೇಕಾಗುತ್ತದೆ.
- ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ & ಅನುಭವವನ್ನು ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
- ಕನಿಷ್ಠ 18 ವರ್ಷ ವಯೋಮಿತಿ.
- ಸಾಮಾನ್ಯ ವರ್ಗದವರಿಗೆ 35 ವರ್ಷ, OBC ವರ್ಗದವರಿಗೆ 38 ವರ್ಷ,SE / ST ವರ್ಗದವರಿಗೆ ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ
- ಅಪೆಕ್ಸ್ ಬ್ಯಾಂಕ್‌ನ ಅಧಿಕೃತ Website ವಿಳಾಸ https://www.emsecure.in/ApexBankApplication/index.html ಕ್ಕೆ ಭೇಟಿ ಮಾಡಿ.
- ತೆರೆದ ವೆಬ್‌ಪುಟದಲ್ಲಿ ‘ನೋಂದಣಿ (ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ) ಎಂದಿರುವಲ್ಲಿ ಕ್ಲಿಕ್ ಮಾಡಿಕೊಳ್ಳಿ.
- ಮತ್ತೊಂದು ವೆಬ್‌ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ಇಮೇಲ್ ವಿಳಾಸ, ಮೊಬೈಲ್ ಸಂಖ್ಯೆ, ಇತರೆ ಮಾಹಿತಿ ನೀಡಿ ರಿಜಿಸ್ಟ್ರೇಷನ್ ಮಾಡಿಕೊಳ್ಳಿ.
- ಯೂಸರ್‌ನೇಮ್, ಪಾಸ್‌ವರ್ಡ್ ಕ್ರಿಯೇಟ್ ಮಾಡಿ.
- ನಂತರ ಮತ್ತೆ ಲಾಗಿನ್ ಆಗುವ ಮೂಲಕ ಅರ್ಜಿಯನ್ನು ಸಲ್ಲಿಸಿ.
ಅಪ್ಲಿಕೇಶನ್ ಶುಲ್ಕ ವಿವರ
ಸಾಮಾನ್ಯ ವರ್ಗ, OBC ಅಭ್ಯರ್ಥಿಗಳಿಗೆ ₹1000.
SC / ST/ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ₹500.
ಆಯ್ಕೆ ವಿಧಾನ
ಅರ್ಜಿಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ 200 ಅಂಕಗಳಿಗೆ ನಡೆಯುತ್ತದೆ. ಇದರಲ್ಲಿ ಅರ್ಹತೆ ಪಡೆದ 1:5 ಅಭ್ಯರ್ಥಿಗಳಿಗೆ 15 ಅಂಕಗಳಿಗೆ ಮೌಖಿಕ ಪರೀಕ್ಷೆ ನಡೆಯುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಆರಂಭಿಕ ದಿನಾಂಕ : 07-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-04-2024.
ಇತರೆ ವಿಷಯಗಳು
NPS ನ ಈ ನಿಯಮವು ಏಪ್ರಿಲ್ 1 ರಿಂದ ಚೇಂಜ್!! ಈ ಕೆಲಸವನ್ನು ಮಿಸ್ ಮಾಡ್ದೆ ಮಾಡಿ
ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಕೆ! ಮೊದಲು ಅರ್ಜಿ ಸಲ್ಲಿಸಿದವರಿಗೆ 80% ಸಬ್ಸಿಡಿ