ಹಲೋ ಸ್ನೇಹಿತರೇ, ಗುಪ್ತಚರ ಇಲಾಖೆಯಲ್ಲಿ ಹಲವು ವಿಭಾಗಗಳಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ. ಆಸಕ್ತರು ಅರ್ಜಿ ಹೇಗೆ ಸಲ್ಲಿಸುವುದು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.
ಭಾರತೀಯ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಪ್ಲೇ ಮಾಡಲು ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 660 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.
Contents
ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆ :
ಭಾರತೀಯ ಗುಪ್ತಚರ ಇಲಾಖೆಯ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ಅನುಸಾರ SSLC, PUC, ಪದವಿ & ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ :
ಗುಪ್ತಚರ ಇಲಾಖೆಯ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಯ ಅನುಸರವಾಗಿ ಮಾಸಿಕ ವೇತನವನ್ನು 21,700/- ರಿಂದ 69,100/- ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಯನ್ನು ತಿಳಿಯಲು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ತಿಳಿದುಕೊಳ್ಳಿ.
ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ವಯೋಮಿತಿ
ಗರಿಷ್ಠ ವಯೋಮಿತಿ 56 ವರ್ಷ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ ಉಚಿತವಾಗಿ ಅಪ್ಲೇ ಮಾಡಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 13 ಮಾರ್ಚ್ 2024 ಆರಂಭವಾಗುವ ದಿನಾಂಕ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12 ಮೇ 2024
ಆಫ್ ಲೈನ್ ಮುಕಾಂತರ ಅರ್ಜಿ ಸಲ್ಲಿಸುವ ವಿಳಾಸ :
ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಕೂಡ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು, ಕೆಳಗೆ ನೀಡಲಾದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಜಂಟಿ ಉಪ ನಿರ್ದೇಶಕ/ಜಿ-3, ಗುಪ್ತಚರ ಬ್ಯೂರೋ, ಗೃಹ ವ್ಯವಹಾರಗಳ ಸಚಿವಾಲಯ, 35 ಎಸ್ಪಿ ಮಾರ್ಗ, ಬಾಪು ಧಾಮ್, ನವದೆಹಲಿ-110021
ಅರ್ಜಿ ನಮೂನೆ & ಅಧಿಕೃತ ಅಧಿಸೂಚನೆ : Download Now
ಇತರೆ ವಿಷಯಗಳು
8ನೇ ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಮತ್ತೆ ಬದಲಾವಣೆ!
2nd ಪಿಯುಸಿ ಪರೀಕ್ಷೆಯ ಕೀ ಉತ್ತರ ಬಿಡುಗಡೆ.! ಯಾವುದೇ ಮರುಮೌಲ್ಯಮಾಪನಕ್ಕೆ ದಿನಾಂಕ ನಿಗದಿ