rtgh

ಮೌಲಾನಾ ಆಜಾದ್ ಉಚಿತ ವಸತಿ ಶಾಲೆ ಪ್ರವೇಶ ಆರಂಭ! ಈ ದಿನಾಂಕದೊಳಗೆ ಹೆಸರು ನೋಂದಾಯಿಸಿ

Maulana Azad Free Residential School Admissions Start
Share

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 6ನೇ ತರಗತಿಗೆ ಪ್ರವೇಶ ಪಡೆಯಲು ಕರ್ನಾಟಕ ಸರ್ಕಾರದ ಮೌಲಾನ ಆಜಾದ್ ಮಾದರಿ ಶಾಲೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಲೇಖನವನ್ನು ತಪ್ಪದೇ ಈ ಲೇಖನವನ್ನು ಕೊನೆವರೆಗೂ ಓದಿ.

Maulana Azad Free Residential School Admissions Start

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಒಟ್ಟು 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಈ ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶ ಪಡೆಯಲು ಒಟ್ಟು 12 ಸಾವಿರ ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ.

ಇದನ್ನೂ ಸಹ ಓದಿ: ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ!!

ಯಾರು ಅರ್ಜಿ ಸಲ್ಲಿಸಬಹುದು?

ಈ ಶಾಲೆಗೆ ಪ್ರವೇಶ ಪಡೆಯಲು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮೌಲಾನಾ ಆಜಾದ್ ಮಾದರಿ ಉಚಿತ ವಸತಿ ಶಾಲೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದು. ಇಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳ ವಯೋಮಿತಿಯು 09 ವರ್ಷದಿಂದ 13 ವರ್ಷದ ಒಳಗಿರಬೇಕು ಹಾಗೂ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದವರಾಗಿರಬೇಕು. ವಿದ್ಯಾರ್ಥಿಯು ಪ್ರಸ್ತುತ 5ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಕುಟುಂಬದ ವಾರ್ಷಿಕ ಆದಾಯವು ₹2,50,000 ಒಳಗಿರಬೇಕು.

ಆಯ್ಕೆ ವಿಧಾನ

ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ 100 ಅಂಕಗಳ ಪ್ರವೇಶಾತಿ ಪರೀಕ್ಷೆಯನ್ನು ನಡೆಸಲಾಗುವುದು. ಈ ಪ್ರವೇಶಾತಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಬೇಕಾಗುವ ದಾಖಲೆಗಳು

  • ವಿದ್ಯಾರ್ಥಿಯ ಭಾವಚಿತ್ರ
  • 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ SATS ಸಂಖ್ಯೆ
  • ಆದಾಯ ಪ್ರಮಾಣ ಪತ್ರ
  • ವ್ಯಾಸಂಗ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

ಅರ್ಜಿ ಸಲ್ಲಿಸುವ ಪ್ರಕ್ರಿಯೆ

ಮೊದಲು ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನಿಗದಿತ ದಿನಾಂಕದ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ, ನಿಖರವಾದ ಮಾಹಿತಿಯನ್ನು ಭರ್ತಿ ಮಾಡಿ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 15-03-2024
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 14-04-2024

ಪ್ರಮುಖ ಲಿಂಕುಗಳು

ಇತರೆ ವಿಷಯಗಳು

2nd ಪಿಯುಸಿ ಫಲಿತಾಂಶ ದಿನಾಂಕ, ಸಮಯ!! ಇಲ್ಲಿ ಚೆಕ್‌ ಮಾಡಿ

ಈ ಮಹಿಳೆಯರಿಗೆ ಮಾತ್ರ 2 ಉಚಿತ ಗ್ಯಾಸ್ ಸಿಲಿಂಡರ್‌!! ಅರ್ಜಿಯ ಪ್ರಕ್ರಿಯೆ ಮತ್ತೊಮ್ಮೆ ಪ್ರಾರಂಭ


Share

Leave a Reply

Your email address will not be published. Required fields are marked *