ಹಲೋ ಸ್ನೇಹಿತರೇ, ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ M.Sc ಪೂರ್ಣಗೊಳಿಸಿರಬೇಕು. ಈ ಕೆಲಸದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಲೇಖನವನ್ನು ಸಂಪೂರ್ಣ ಓದಿ.
ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಸಿನಲ್ & ಆರೊಮ್ಯಾಟಿಕ್ ಪ್ಲಾಂಟ್ಸ್ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 2 ಪ್ರಾಜೆಕ್ಟ್ ಅಸೋಸಿಯೇಟ್ I/II ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಮಾರ್ಚ್ 27ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯುತ್ತದೆ, ಆಸಕ್ತರು ಈ ಸಂದರ್ಶನಕ್ಕೆ ಪಾಲ್ಗೊಳ್ಳಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಸುವರ್ಣ ಅವಕಾಶದ ಪ್ರಯೋಜನ ಪಡೆದುಕೊಳ್ಳಿ.
Contents
ವಿದ್ಯಾರ್ಹತೆ
ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದಾದರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ M.Sc ಪದವಿ ಮುಗಿಸಿರಬೇಕು.
ವಯೋಮಿತಿ
ಅಭ್ಯರ್ಥಿಯ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಹುದ್ದೆಯ ಮಾಹಿತಿ
ಒಂದು ಪ್ರಾಜೆಕ್ಟ್ ಅಸೋಸಿಯೇಟ್ I/II & ಒಂದು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ ಖಾಲಿಯಿದೆ.
ಆಯ್ಕೆ ಪ್ರಕ್ರಿಯೆ ಹೇಗೆ
ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು.
ವೇತನ
ಪ್ರಾಜೆಕ್ಟ್ ಅಸೋಸಿಯೇಟ್ I/IIಗೆ ಮಾಸಿಕ ₹25,000-₹31,000 & ಪ್ರಾಜೆಕ್ಟ್ ಅಸೋಸಿಯೇಟ್ಗೆ ಮಾಸಿಕ ₹28,000-₹35,000 ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನ ನಡೆಯುವ ಸ್ಥಳ: CSIR-CIMAP ಸಂಶೋಧನಾ ಕೇಂದ್ರ, ಬೆಂಗಳೂರು, ಕರ್ನಾಟಕ
ಇತರೆ ವಿಷಯಗಳು
ನೇರ ವಿದ್ಯಾರ್ಥಿಗಳ ಖಾತೆಗೆ ಬರಲಿದೆ 1 ಲಕ್ಷ! ಅಪ್ಲೇ ಮಾಡಲು ಇನ್ನು ಕೆಲವೇ ದಿನ ಮಾತ್ರ ಬಾಕಿ
ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ! ಇಂತವರ ಖಾತೆಗೆ ಮಾತ್ರ ಜಮಾ