ಬೆಂಗಳೂರು : LKG, UKG ಮತ್ತು 1ನೇ ತರಗತಿಗೆ ಮಕ್ಕಳ ಶಾಲಾ ಪ್ರವೇಶದ ದಾಖಲಾತಿಗೆ ಅರ್ಹ ಗರಿಷ್ಟ ವಯೋಮಾನವನ್ನು ಪರಿಷ್ಕರಿಸುವುದರ ಬಗ್ಗೆ ಇತ್ತೀಚೆಗೆ ಸರ್ಕಾರವು ಸುತ್ತೋಲೆಯನ್ನು ಹೊರಡಿಸಿದ್ದು, ಪೋಷಕರ ಗಮನಕ್ಕೆ ಮತ್ತೊಮ್ಮೆ ಮಾಹಿತಿಯನ್ನು ನೀಡಲಾಗಿದೆ.
ಶಿಕ್ಷಣ ಹಕ್ಕು ಕಾಯ್ದೆ-2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷ ಜೂನ್ 1ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷ ಪೂರ್ಣಗೊಂಡಿರುವಂತಹ ಮಗುವನ್ನು 1ನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗಧಿಪಡಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಸರ್ಕಾರದ ಆದೇಶದ ಸಂಖ್ಯೆ:ಇಪಿ 260 ಪಿಜಿಸಿ 2021, ದಿನಾಂಕ:26.07.2022ರ ಆದೇಶದಲ್ಲಿ ಜೂನ್ 1ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷ ಪೂರ್ಣಗೊಂಡಿರುವ ಮಗುವನ್ನು 1ನೇ ತರಗತಿಗೆ ದಾಖಲು ಮಾಡಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುವುದನ್ನು 2025-26ನೇ ಶೈಕ್ಷಣಿಕವಾದ ಸಾಲಿನಿಂದ ಅನ್ವಯವಾಗುವಂತೆ ತಿದ್ದುಪಡಿಯನ್ನು ಮಾಡಿ ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (3)ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರದಲ್ಲಿ LKG, UKG ಮತ್ತು 01ನೇ ತರಗತಿಯ ಪ್ರವೇಶಕ್ಕೆ ಈಗಾಗಲೇ ದಾಖಲಾತಿಗೆ ಕನಿಷ್ಟವಾದ ಅರ್ಹ ವಯೋಮಾನವನ್ನು ಪರಿಷ್ಕರಿಸಿ ನಿಗಧಿಪಡಿಸಲಾಗಿದೆ. ಅದರೆ ಗರಿಷ್ಟವಾದ ವಯೋಮಾನಗಳನ್ನು ಪರಿಷ್ಕರಿಸಿರುವುದಿಲ್ಲ.
ಗರಿಷ್ಠ ವಯೋಮಿತಿಯನ್ನು ಪರಿಷ್ಕರಿಸುವುದರಿಂದ ಡ್ರಾಪ್ ಔಟ್ ಮಕ್ಕಳ ಸಂಖ್ಯೆಯನ್ನು ಕೂಡ ತಗ್ಗಿಸಬಹುದಾಗಿರುವುದರಿಂದ LKG, UKG ಮತ್ತು 01ನೇ ತರಗತಿಗಳಿಗೆ ಈಗಾಗಲೇ ಮಕ್ಕಳ ದಾಖಲಾತಿಗಾಗಿ ಕನಿಷ್ಠವಾದ ವಯೋಮಿತಿಯನ್ನು ಪರಿಷ್ಕರಿಸಿ ನಿಗಧಿಯನ್ನು ಪಡಿಸಿರುವಂತೆ ಗರಿಷ್ಠವಾದ ವಯೋಮಾನದ ಮಾನದಂಡವನ್ನು ಸಡಿಲಿಸಿ ಪರಿಷ್ಕರಿಸುವ ಅಗತ್ಯವಿದ್ದು, ಈ ಕೆಳಗಿನಂತೆ ಪರಿಷ್ಕರಿಸಲು ಕೋರಿರುತ್ತಾರೆ.
ಇತರೆ ವಿಷಯಗಳು:
ಭೂಮಿಗಿಳಿದ ಬಂಗಾರದ ಬೆಲೆ..! ಖರೀದಿದಾರರ ಮುಖದಲ್ಲಿ ಮಂದಹಾಸ
ಉಚಿತವಾಗಿ ₹15,000 ಹಣ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ!