ಹಲೋ ಸ್ನೇಹಿತರೇ, ರೈತರ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ-ಕೃಷಿಯೇತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ರಾಜ್ಯ ಸರ್ಕಾರ ಆದೇಶವು ಹೊರಡಿಸಿದೆ ಎನ್ನುವುದನ್ನು ಸರ್ಕಾರವು ತಿಳಿಸಿದೆ.
ರಾಜ್ಯದ ಸಹಕಾರಿ ಸಂಸ್ಥೆಗಳ ಮೂಲಕ ಸಾಲ ಪಡೆದು 2023ರ ಡಿಸೆಂಬರ್ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದ್ದಲ್ಲಿ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದಲ್ಲಿ ಘೋಷಣೆ ಮಾಡಿದ್ದರು. ಅದರಂತೆ ಈಗ ರೈತರ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ- ಕೃಷಿಯೇತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.
ಷರತ್ತುಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ:
- ಈ ಯೋಜನೆ ಕೃಷಿಯೇತರ ಸಾಲಗಳಿಗೆ ಅನ್ವಯವಾಗುವುದಿಲ್ಲ.
- ನಿಗದಿತ ಸಹಕಾರ ಸಂಘಗಳಲ್ಲದೇ ಇತರೆ ಸಹಕಾರ ಸಂಸ್ಥೆಗಳಲ್ಲಿ ಪಡೆದ ಸಾಲಗಳಿಗೆ ಯೋಜನೆ ಅನ್ವಯಿಸದು.
- ನಬಾರ್ಡ್ ಗುರುತಿಸಿದ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅಂದರೆ ಲಘು ನೀರಾವರಿ, ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶು ಸಂಗೋಪನೆ, ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್, ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಈ ಯೋಜನೆ ಅನ್ವಯ.
- ರಾಜ್ಯ ಸರ್ಕಾರದ ಬಡ್ಡಿಯಲ್ಲಿ ರಿಯಾಯಿತಿ ಬದ್ಧತೆಯಡಿ ವಿತರಿಸಿರುವ ಕೃಷಿ/ ಕೃಷಿ ಸಂಬಂಧಿತ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳಿಗೆ ಅನ್ವಯ.
- ಮಾರಟೊರಿಯಂ ಅವಧಿಯಲ್ಲಿ ಸುಸ್ತಿಯಾಗಿರುವ ಬಡ್ಡಿಗೂ ಅನ್ವಯ.
ಇತರೆ ವಿಷಯಗಳು:
ಉಚಿತ ಗೋಬರ್ ಗ್ಯಾಸ್ ಯೋಜನೆ!! ಮರು ಅರ್ಜಿ ಆಹ್ವಾನ, ಇಲ್ಲಿ ಅಪ್ಲೇ ಮಾಡಿ
ವೃದ್ಧರಿಗೆ ಗಾಲಿ ಕುರ್ಚಿ, ವಾಕಿಂಗ್ ಸ್ಟಿಕ್ ಭಾಗ್ಯ!!