rtgh
Headlines

ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ

anganavadi requirement
Share

ಹಲೋ ಸ್ನೇಹಿತರೇ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

anganavadi requirement

ಈ ಪೈಕಿ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆಯರು ಮತ್ತು 26 ಅಂಗನವಾಡಿ ಸಹಾಯಕಿಯರು ಹಾಗೂ ಬೆಳಗಾವಿ ಜಿಲ್ಲೆಯ 13 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ

  • ಅಂಗನವಾಡಿ ಕಾರ್ಯಕರ್ತೆ ಹುದ್ದೆ : ಪಿಯುಸಿ ಪಾಸ್
  • ಅಂಗನವಾಡಿ ಸಹಾಯಕಿ ಹುದ್ದೆ : 10ನೇ ತರಗತಿ ಪಾಸ್

ವಯಸ್ಸಿನ ಮಿತಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಟ 19 ವರ್ಷ ಹಾಗೂ ಗರಿಷ್ಟ 35 ವರ್ಷ ನಿಗದಿಪಡಿಸಲಾಗಿದೆ. ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳು

  • ಅರ್ಜಿ ನಿಗದಿತ ನಮೂನೆ (ಆನ್‌ಲೈನ್)
  • ಜನನ ಪ್ರಮಾಣ ಪತ್ರ
  • ಜನ್ಮ ದಿನಾಂಕ ಇರುವ SSLC / PUC ಅಂಕಪಟ್ಟಿ
  • ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
  • ವಾಸಸ್ಥಳ ದೃಢೀಕರಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್
  • ವಿಕಲಚೇತನರು, ವಿಧವೆಯರು, ವಿಚ್ಛೇದಿತೆಯರು, ಯೋಜನಾ ನಿರಾಶ್ರಿತರು, ಲಿಂಗತ್ವ ಅಲ್ಪಸಂಖ್ಯಾತರು ಸಂಬಂಧಿಸಿದ ಪ್ರಮಾಣ ಪತ್ರ

ಇದನ್ನೂ ಸಹ ಓದಿ : BPL ಕಾರ್ಡ್‌ ರದ್ದು.! ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

ಅರ್ಜಿ ಸಲ್ಲಿಕೆ ಹೇಗೆ?

ಅಂಗನವಾಡಿ ಹುದ್ದೆಗಳಿಗೆ ನಾವು ಕೆಳಗೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್ ಲಿಂಕ್ ಬಳಸಿಕೊಂಡು ಅರ್ಹ ಮಹಿಳೆಯರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅಂಗನವಾಡಿ ಹುದ್ದೆಗಳ ಅರ್ಜಿ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಜಿಲ್ಲೆ, ತಾಲ್ಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆಗಳ ಆಯ್ಕೆ ಮಾಡಿ ಕ್ಲಿಕ್ ಮಾಡಿದರೆ ಅಪ್ಲಿಕೇಶನ್ ಫಾರ್ಮ್ ತೆರೆಯುತ್ತದೆ. ಅಲ್ಲಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಅಗತ್ಯ ಪ್ರಮಾಣ ಪತ್ರಗಳನ್ನು ಅಪ್‌ಲೋಡ್ ಮಾಡಬೇಕು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು

  • ಬೆಳಗಾವಿ ಗ್ರಾಮೀಣ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆಗಸ್ಟ್ 08, 2024 ಕೊನೆಯ ದಿನವಾಗಿರುತ್ತದೆ.
  • ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 04, 2024 ಕೊನೆಯ ದಿನವಾಗಿದೆ.

ಇದೇ ರೀತಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಆಯಾ ಜಿಲ್ಲೆಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ : ಇಲ್ಲಿ ಒತ್ತಿ

ಇತರೆ ವಿಷಯಗಳು:

ಬಂದ್‌ ಆಗಲಿದ್ಯಾ ಉಚಿತ ಗ್ಯಾಸ್‌ ಕನೆಕ್ಷನ್..! LPG KYC ಬಗ್ಗೆ ಕೇಂದ್ರ ಸಚಿವರ ದೊಡ್ಡ ಘೋಷಣೆ

ಸರ್ಕಾರಿ ನೌಕರರಿಗೂ ಸಿಕ್ತು ಗ್ಯಾರೆಂಟಿ.! ಈ ವ್ಯಾಪ್ತಿಗೆ ಸೇರಿದವರಿಗೆ ಶೇ.50ರಷ್ಟು ಪಿಂಚಣಿ

ಇನ್ಮುಂದೆ ಈ ಯೋಜನೆಯಡಿ ಸಿಗಲಿದೆ 10 ಸಾವಿರ ರೂ. ಪಿಂಚಣಿ!


Share

Leave a Reply

Your email address will not be published. Required fields are marked *