rtgh

ಅಂಗನವಾಡಿ ಶಿಕ್ಷಕಿ & ಸಹಾಯಕಿ ಹುದ್ದೆಗೆ ನೇಮಕಾತಿ.! 29 ರೊಳಗೆ ಅರ್ಜಿ ಸಲ್ಲಿಸಿದವರಿಗೆ ಕೆಲಸ

anganawadi Worker and helper recruitment
Share

ಹಲೋ ಸ್ನೇಹಿತರೇ, ರಾಜ್ಯದ ವಿವಿಧ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ 10ನೇ ತರಗತಿ ಹಾಗೂ puc ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅಪ್ಲೇ ಮಾಡುವ ಬಗ್ಗೆ ಸಂಪೂರ್ಣ ಮಾಹಿತಿ ಲೇಖನದಲ್ಲಿ ತಿಳಿಯಿರಿ.

anganawadi Worker and helper recruitment

ಈಗಾಗಲೇ ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ ಮತ್ತು ಹಾವೇರಿ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕ ಪ್ರಕ್ರಿಯೆ ಆರಂಭವಾಗಿದೆ. ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿವಮೊಗ್ಗ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ನೇಮಕಾತಿ ಸಂಕ್ಷಿಪ್ತ ವಿವರ

  • ನೇಮಕಾತಿ ಇಲಾಖೆ : ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ
  • ಹುದ್ದೆಗಳ ಸಂಖ್ಯೆ : 575 ಹುದ್ದೆಗಳು
  • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
  • ಉದ್ಯೋಗ ಸ್ಥಳ : ಶಿವಮೊಗ್ಗ ಜಿಲ್ಲೆ

ಖಾಲಿ ಇರುವ ಹುದ್ದೆಗಳ ವಿವರ

ಶಿವಮೊಗ್ಗ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 575 ಹುದ್ದೆಗಳು ಖಾಲಿ ಇದ್ದು ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿದೆ.

  • ಅಂಗನವಾಡಿ ಸಹಾಯಕಿ : 448 ಹುದ್ದೆಗಳು
  • ಅಂಗನವಾಡಿ ಕಾರ್ಯಕರ್ತೆ : 127 ಹುದ್ದೆಗಳು

ಎಲ್ಲೆಲ್ಲಿ ಖಾಲಿ ಇದೆ ಹುದ್ದೆಗಳು?

  • ಶಿವಮೊಗ್ಗ: ಕಾರ್ಯಕರ್ತೆಯರು 34, ಸಹಾಯಕಿಯರು 118
  • ಭದ್ರಾವತಿ: ಕಾರ್ಯಕರ್ತೆಯರು 10, ಸಹಾಯಕಿಯರು 72
  • ಹೊಸನಗರ: ಕಾರ್ಯಕರ್ತೆಯರು 07, ಸಹಾಯಕಿಯರು 35
  • ಸಾಗರ: ಕಾರ್ಯಕರ್ತೆಯರು 21, ಸಹಾಯಕಿಯರು 62
  • ಶಿಕಾರಿಪುರ: ಕಾರ್ಯಕರ್ತೆಯರು 08, ಸಹಾಯಕಿಯರು 55
  • ಸೊರಬ: ಕಾರ್ಯಕರ್ತೆಯರು 38, ಸಹಾಯಕಿಯರು 65
  • ತೀರ್ಥಹಳ್ಳಿ: ಕಾರ್ಯಕರ್ತೆಯರು 09, ಸಹಾಯಕಿಯರು 41

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

19 ರಿಂದ 35 ವರ್ಷ ವಯೋಮಿತಿ ಮಹಿಳೆಯರು ಹಾಗೂ ಅಲ್ಪಸಂಖ್ಯಾತರು ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ.

ದೈಹಿಕ ಅಂಗವಿಕಲತೆ ಪ್ರಮಾಣ ಶೇ.40ಕ್ಕಿಂತ ಕಡಿಮೆ ಇರುವ ಅಂಗವಿಕಲ ಅಭ್ಯರ್ಥಿಗಳು ಕೂಡ ಅಂಗನವಾಡಿ ಕಾರ್ಯಕರ್ತೆಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು; ಇವರಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ನೀಡಲಾಗಿದೆ.

ವಿದ್ಯಾರ್ಹತೆ ಏನಿರಬೇಕು?

10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ / ದ್ವಿತೀಯ ಭಾಷೆಯಾಗಿ ಓದಿದ ಅರ್ಹ ಮಹಿಳೆಯರು ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಅಂಗನವಾಡಿ ಕಾರ್ಯಕರ್ತೆ & ಸಹಾಯಕಿಯರು 2 ಹುದ್ದೆಗಳ ವಿದ್ಯಾರ್ಹತೆ ಈ ಕೆಳಗಿನಂತಿದೆ:

  • ಅಂಗನವಾಡಿ ಕಾರ್ಯಕರ್ತೆ : 2nd PUC ಪಾಸ್
  • ಅಂಗನವಾಡಿ ಸಹಾಯಕಿ : SSLC ಪಾಸ್

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ ಮೂಲಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 29 ಒಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ಹಾಗೂ ಸಂಬ೦ಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಕೆ ಬೇಕಾಗುವ ದಾಖಲಾತಿಗಳು

  • ವಿದ್ಯಾರ್ಹತೆ ಪ್ರಮಾಣ ಪತ್ರ
  • ವಾಸಸ್ಥಳ ದೃಢೀಕರಣ ಪತ್ರ
  • ಜನನ ಪ್ರಮಾಣ ಪತ್ರ ಅಥವಾ ವಯಸ್ಸಿನ ದೃಢೀಕರಣಕ್ಕಾಗಿ ಎಸ್‌ಎಲ್‌ಸಿ/ಪಿಯುಸಿ ಅಂಕಪಟ್ಟಿ
  • ಮೀಸಲಾತಿಗಾಗಿ ಜಾತಿ ಪ್ರಮಾಣ ಪತ್ರ
  • ಆತ್ಮಹತ್ಯೆ ಮಾಡಿಕೊಂಡ ರೈತರ ಹೆಂಡತಿ ಆಗಿದ್ದಲ್ಲಿ ಸ್ಥಳೀಯ ಎಸಿ ಅವರಿಂದ ಪಡೆದ ಪ್ರಮಾಣ ಪತ್ರ
  • ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ
  • ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ

ಈ ಎಲ್ಲ ಅಗತ್ಯ ದಾಖಲೆ ಪತ್ರಗಳನ್ನು ಹೊಂದಿರುವ ಅಭ್ಯರ್ಥಿಗಳು ಅವುಗಳನ್ನು ಸ್ಕ್ಯಾನ್ ಮಾಡಿದ ಸಾಫ್ಟ್ ಕಾಫಿ ರೆಡಿ ಮಾಡಿಟ್ಟುಕೊಂಡರೆ ಆಗ ಆರ್ಜಿ ಸಲ್ಲಿಕೆ ಸುಲಭವಾಗುತ್ತದೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ
29-08-2024

ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ : Apply Now

ಇತರೆ ವಿಷಯಗಳು

ಡಿಎ ಹೆಚ್ಚಳ, ವೇತನದಲ್ಲಿ ಕ್ರಮಬದ್ದ ಏರಿಕೆ.! ಸರ್ಕಾರಿ ನೌಕರರಿಗೆ ಹೊಸ ವೇತನ ಪಟ್ಟಿ ಬಿಡುಗಡೆ

ಫೇಲಾದ್ರೆ ಚಿಂತೆ ಬಿಡಿ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಮರು ದಾಖಲಾತಿ!


Share

Leave a Reply

Your email address will not be published. Required fields are marked *