rtgh
Headlines

ಅಂಗನವಾಡಿ LKG-UKG ಟೀಚರ್ ನೇಮಕ: ಮೊದಲ ಹಂತದ ಆಯ್ಕೆ ಪ್ರಕ್ರಿಯೆ ಈ ಜಿಲ್ಲೆಯಿಂದ ಆರಂಭ

Anganwadi LKG UKG Teacher Recruitment
Share

ಹಲೋ ಸ್ನೇಹಿತರೇ, ರಾಜ್ಯದಲ್ಲಿ ಖಾಲಿ ಇರುವ 13,593 ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ ಬೆನ್ನಲ್ಲೇ ಇದೀಗ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಂಗನವಾಡಿ LKG-UKG ಟೀಚರ್ ನೇಮಕಾತಿ ಕುರಿತು ಕೆಲವು ಮಾಹಿತಿ ನೀಡಿದ್ದಾರೆ. ಎಲ್ಲಾ ಮಾಹಿತಿಯ ಬಗ್ಗೆ ಸಂಪೂರ್ಣ ತಿಳಿಯಲು ನಮ್ಮ ಲೇಖನವನ್ನು ಓದಿ.

Anganwadi LKG UKG Teacher Recruitment

ರಾಜ್ಯದಲ್ಲಿ ಒಟ್ಟು 61,876 ಅಂಗನವಾಡಿ ಕೇಂದ್ರಗಳಿದ್ದು; ಈ ಪೈಕಿ 250 ಅಂಗನವಾಡಿ ಕೇಂದ್ರಗಳಲ್ಲಿ ಇಂದಿನಿ೦ದ (ಜುಲೈ 22) ಪೂರ್ವ ಪ್ರಾಥಮಿಕ ಅಂದರೆ LKG-UKG ತರಗತಿಗಳು ಸಾಂಕೇತಿಕವಾಗಿ ಪ್ರಾರಂಭವಾಗಿವೆ. ಈ ಮೂಲಕ ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರದಲ್ಲಿ LKG-UKG ಪರಿಚಯಿಸುತ್ತಿರುವ ಹೆಗ್ಗಳಿಕೆ ಕರ್ನಾಟಕಕ್ಕೆ ಸಿಕ್ಕಿದೆ.

ಅಂಗನವಾಡಿಯಲ್ಲೇ ಸರ್ಕಾರಿ ಮಾಂಟೆಸ್ಸರಿ

ಈ ಮೊದಲು ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ LKG-UKG ತರಗತಿ ಪ್ರಾರಂಭಿಸಲು ಸರ್ಕಾರ ಸಿದ್ಧತೆ ನಡೆಸಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ LKG-UKG ಆರಂಭವಾದರೆ ಅಂಗನವಾಡಿ ಕೇಂದ್ರಗಳು ಖಾಲಿಯಾಗುತ್ತವೆ. ಕಾರ್ಯಕರ್ತೆಯರು, ಸಹಾಯಕಿಯರು, ಅಡುಗೆ ಸಹಾಯಕಿಯರು ಕೆಲಸ ಕಳೆದುಕೊಳ್ಳುತ್ತಾರೆ ಎಂದು ಪ್ರತಿಭಟನೆ ನಡೆಸಿದ್ದರು.

ಒಂದು ವೇಳೆ ಪ್ರಾಥಮಿಕ ಪೂರ್ವ ತರಗತಿ ಪ್ರಾರಂಭಿಸುವುದಿದ್ದರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಬದಲು ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಡಿಯಲ್ಲೇ ಅಂಗನವಾಡಿ ಕೇಂದ್ರದಲ್ಲಿ LKG-UKG ಆರಂಭಿಸಬೇಕೆ೦ದು ಒತ್ತಾಯಿಸಿ ಪ್ರತಿಭಟಿಸಲಾಗಿತ್ತು. ಅದರಂತೆ ಸರ್ಕಾರ ಇದೀಗ ಅಂಗನವಾಡಿಯಲ್ಲೇ ಜುಲೈ 22ರಿಂದ LKG-UKG ಆರಂಭಿಸಿದೆ.

ಎಷ್ಟು ಸರ್ಕಾರಿ ಮಾಂಟೆಸ್ಸರಿ ಆರಂಭವಾಗಲಿವೆ?

ರಾಜ್ಯದಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲೂ ಸರ್ಕಾರಿ ಮಾಂಟೆಸ್ಸರಿ ಆರಂಭವಾಗುವುದಿಲ್ಲ. ಆಯ್ದ 5,000 ಅಂಗನವಾಡಿ ಕೇಂದ್ರಗಳಲ್ಲಿ LKG-UKG ತರಗತಿ ಆರಂಭವಾಗಲಿವೆ. ಅತೀ ಹೆಚ್ಚು ಮಕ್ಕಳಿರುವ ಹಾಗೂ ದೀರ್ಘ ಕಾಲದಿಂದ ನಡೆದುಕೊಂಡು ಬರುತ್ತಿರುವ ಅಂಗನವಾಡಿ ಕೇಂದ್ರಗಳನ್ನು ಮಾತ್ರ ಉನ್ನತೀಕರಣ ಮಾಡಲಾಗುವುದು.

ಮೊದಲ ಭಾಗವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಸರ್ಕಾರಿ ಮಾಂಟೆಸ್ಸರಿಗೆ ಚಾಲನೆ ನೀಡಿದ್ದು, ಇನ್ಮುಂದೆ ಪುಟಾಣಿಗಳು ಅಂಗನವಾಡಿಯಲ್ಲೇ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮದಲ್ಲಿ ಪಾಠ ಕಲಿಯಲಿದ್ದಾರೆ. ಜುಲೈ 22ರಿಂದ ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಹಾಗೂ ರಾಜ್ಯಾದ್ಯಂತ 5,000 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಮಾಂಟೆಸ್ಸರಿ ಟೀಚರ್ ನೇಮಕ ಹೇಗೆ?

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ನೀಡಿದ ಮಾಹಿತಿ ಪ್ರಕಾರ ಸರ್ಕಾರಿ ಮಾಂಟೆಸ್ಸರಿಗಳಲ್ಲಿ ಸದ್ಯಕ್ಕೆ PUC, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಹಾಗೂ ಈಗಾಗಲೇ ಅಗತ್ಯ ತರಬೇತಿ ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಮಾತ್ರ ಬೋಧನೆ ಮಾಡಲು ಅವಕಾಶ ನೀಡಲಾಗುವುದು.

ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳು, ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತೆಯರ ವಿದ್ಯಾರ್ಹತೆ ಕುರಿತು ಸಚಿವರು ನೀಡಿದ ಮಾಹಿತಿ ಈ ಕೆಳಗಿನಂತಿದೆ:

  • ಒಟ್ಟು ಅಂಗನವಾಡಿ ಕೇಂದ್ರಗಳು : 61,876
  • ಉನ್ನತ ಶಿಕ್ಷಣ ಪಡೆದ ಕಾರ್ಯಕರ್ತೆಯರು : 1,682
  • ಪದವಿ ಶಿಕ್ಷಣ ಪಡೆದ ಕಾರ್ಯಕರ್ತೆಯರು : 6,363
  • PUC ವಿದ್ಯಾರ್ಹತೆ ಕಾರ್ಯಕರ್ತೆಯರು : 15,217
  • SSLC ವಿದ್ಯಾರ್ಹತೆ ಕಾರ್ಯಕರ್ತೆಯರು : 38,614

ಮೇಲ್ಕಾಣಿಸಿದ ಕಾರ್ಯಕರ್ತೆಯರ ಪೈಕಿ PUC, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದವರನ್ನು ಭೋದನೆಗೆ ನೇಮಕ ಮಾಡಲಾಗುತ್ತದೆ. ಉಳಿದ ಮಾಂಟೆಸ್ಸರಿಗಳಿಗೆ ಹೊಸ ನೇಮಕಾತಿ ಮಾಡಲಾಗುವುದು. ಸರ್ಕಾರಿ ಮಾಂಟೆಸ್ಸರಿಗಳಲ್ಲಿ ಕನ್ನಡ, ಇಂಗ್ಲೀಷ್ 2 ಮಾಧ್ಯಮಗಳಲ್ಲೂ ಶಿಕ್ಷಣ ನೀಡಲಾಗುವುದು. ಮಾಂಟೆಸ್ಸರಿ ಟೀಚರ್ ನೇಮಕಾತಿ ಕುರಿತು ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಇತರೆ ವಿಷಯಗಳು

ಇನ್ಮುಂದೆ ಕಳ್ಳಾಟ ನಡೆಯಲ್ಲ.! ಮೊಬೈಲ್ ನಂಬರ್ ಪೋರ್ಟಿಂಗ್​ಗೆ TRAI ಹೊಸ ನಿಯಮ

ಉನ್ನತ ಶಿಕ್ಷಣಕ್ಕೆ ಪ್ರತಿ ವಿದ್ಯಾರ್ಥಿಗೆ 10 ಲಕ್ಷ.! ಬಜೆಟ್‌ನಲ್ಲಿ ಘೋಷಣೆ


Share

Leave a Reply

Your email address will not be published. Required fields are marked *