ಹಲೋ ಸ್ನೇಹಿತರೇ, ಬಡತನ ರೇಖೆಗಿಂತ ಕೆಳಗಿರುವವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಉಚಿತವಾಗಿ ರೇಷನ್ ಪಡೆಯಬಹುದು. ಅದರ ಜೊತೆಗೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುವುದಾಗಿ ಹೇಳಿತ್ತು ಆದರೆ ಇದುವರೆಗೆ ಅಕ್ಕಿ ಹೊಂದಿಸಲು ಸಾಧ್ಯವಾಗಿಲ್ಲ. ಅದಕ್ಕಾಗಿ ರಾಜ್ಯ ಸರ್ಕಾರ ಈಗ ಫಲಾನುಭವಿಗಳಿಗೆ ಅಕ್ಕಿಯ ಬದಲು ಹಣವನ್ನು ಜಮಾ ಮಾಡುತ್ತಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದ ನಂತರ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಂತೆ, 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದು. ಹೌದು, ಕಳೆದ ಏಳು ತಿಂಗಳುಗಳಿಂದ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತಿದೆ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ 170 ರೂಪಾಯಿಗಳನ್ನು ಮನೆಯ ಪ್ರತಿಯೊಂದು ಸದಸ್ಯರಿಗೂ ಸೇರಿಸಿ ಮನೆಯ ಯಜಮಾನನ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.
Contents
ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ:
ಒಂದು ವೇಳೆ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇಲ್ಲದೆ ಇದ್ದರೆ ಇದೀಗ ಹೊಸದಾಗಿ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಮಾಡಿಕೊಡುತ್ತದೆ. ರೇಷನ್ ಕಾರ್ಡ್ ಒಂದಿದ್ರೆ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳುವುದರ ಜೊತೆಗೆ ಪ್ರಮುಖ ಗುರುತಿನ ಚೀಟಿಯಾಗಿ ಬಳಸಿಕೊಳ್ಳಬಹುದಾಗಿದೆ. ಇದೀಗ ವೈದ್ಯಕೀಯ ಎಮರ್ಜೆನ್ಸಿ ಇರುವ ಜನರು ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದರೆ ಶೀಘ್ರವೇ ಸರ್ಕಾರ ಮಂಜೂರು ಮಾಡುತ್ತದೆ.
ಇದನ್ನೂ ಸಹ ಓದಿ : ಕೇವಲ 4% ಬಡ್ಡಿ ದರದಲ್ಲಿ 3 ಲಕ್ಷ ಸಾಲ! KCC ಯೋಜನೆಯಲ್ಲಿ ಇಂದೇ ಹೆಸರು ನೋಂದಾಯಿಸಿ
ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದ್ಯಾ ಚೆಕ್ ಮಾಡಿ:
ಆನ್ಲೈನಲ್ಲಿ ನೀವು ನಿಮ್ಮ DBT ಸ್ಟೇಟಸ್ ಚೆಕ್ ಮಾಡಬಹುದು. ಇದಕ್ಕಾಗಿ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ https://ahara.kar.nic.in/lpg/ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ಈಗ ನಿಮಗೆ ಮೂರು ಲಿಂಕ್ಗಳು ಕಾಣಿಸುತ್ತವೆ. ಆದರೆ ಕೆಳಭಾಗದಲ್ಲಿರುವ ನಿಮ್ಮ ಜಿಲ್ಲೆ ಯಾವುದು ಎಂಬುದನ್ನು ಆಯ್ಕೆ ಮಾಡಿ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈಗ ಡಿಬಿಟಿ ಸ್ಟೇಟಸ್ ಎನ್ನುವ ಆಯ್ಕೆಯನ್ನು ಮಾಡಿ. ಬಳಿಕ ವರ್ಷ ತಿಂಗಳು, ರೇಷನ್ ಕಾರ್ಡ್ ಸಂಖ್ಯೆ, ಕ್ಯಾಪ್ಟನ್ ನಂಬರ್ ಇವುಗಳನ್ನು ನಮೂದಿಸಿ ಗೋ ಎಂದು ಕೊಟ್ಟರೆ ನೀವು ಯಾವ ತಿಂಗಳನ್ನು ಆಯ್ಕೆ ಮಾಡಿದ್ದೀರೋ, ಆ ತಿಂಗಳಿನಲ್ಲಿ ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಬಿಡುಗಡೆ ಆಗಿದೆಯೋ ಇಲ್ಲವೋ ಎಂದು ತಿಳಿಯುತ್ತದೆ.
ಇತರೆ ವಿಷಯಗಳು:
ಗೃಹಲಕ್ಷ್ಮಿ 8 & 9ನೇ ಕಂತಿನ ಹಣ ಬಿಡುಗಡೆ ಬಗ್ಗೆ ಹೊಸ ಅಪ್ಡೇಟ್!
ಸರ್ಕಾರದಿಂದ ಉಚಿತ ಸೈಕಲ್ ಭಾಗ್ಯ! ಈ ಕಾರ್ಡ್ ಇದ್ದವರು ಬೇಗ ಅಪ್ಲೇ ಮಾಡಿ