ಬೆಂಗಳೂರು: ಅನ್ನಭಾಗ್ಯ ಯೋಜನೆ ಅಕ್ಕಿ ಬದಲಾಗಿ ಹಣವನ್ನು ಹಾಕಲಾಗುತ್ತಿದ್ದು, ನಿಮ್ಮ ಖಾತೆಗೆ ಹಣ ಬಂದಿದೆಯೇ? ಯಾರ ಖಾತೆಗೆ ಜಮೆಯಾಗಿದೆ? ಎಷ್ಟು ಹಣ ಜಮೆಯಾಗಿದೆ? ಎನ್ನುವ ಇತ್ಯಾದಿ ಮಾಹಿತಿಗಳನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಆಹಾರ ಇಲಾಖೆ ವೆಬ್‌ಸೈಟ್ ಲಿಂಕ್ ಬಿಡುಗಡೆಯನ್ನು ಮಾಡಿದೆ. ಅಕ್ಕಿ ದಾಸ್ತಾನಿನ ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣವನ್ನು ಜಮೆ ಮಾಡಲು ಸರ್ಕಾರವು ನಿರ್ಧಾರವನ್ನು ಕೈಗೊಂಡಿತ್ತು.
ನಿಮ್ಮ ಮೊಬೈಲ್ ಫೋನ್‌ನಲ್ಲಿ ಪಡಿತರ ಚೀಟಿ ಸ್ಟೇಟಸ್ ಅನ್ನು ನೀವು ಸುಲಭವಾಗಿ ಚೆಕ್ ಮಾಡಬಹುದು.
ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ನೇರವಾಗಿ ಲಾಭ ವರ್ಗಾವಣೆ (ಡಿಬಿಟಿ) ಮೂಲಕ BPL ಕಾರ್ಡುದಾರರಿಗೆ ಹೆಚ್ಚುವರಿಯ 5 ಕೆಜಿ ಅಕ್ಕಿ ಹಣವನ್ನು ಖಾತೆಗೆ ಜಮೆ ಮಾಡುತ್ತಿದೆ. ಈ ಹಣವನ್ನು ಫಲಾನುಭವಿಯ ಆಧಾರ್ ಸಂಖ್ಯೆಗೆ ಲಿಂಕ್ ಮಾಡಿದ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ.
ನಿಮ್ಮ ರೇಷನ್ ಕಾರ್ಡ್ ಹಣವು ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನಲ್ಲೇ ಮೂಲಕವೇ ಚೆಕ್ ಮಾಡಬಹುದು. ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣವು ಯಾರ್ಯಾರಿಗೆ ಬಂದಿಲ್ಲವೋ ಅವರು ಕೆಳಗೆ ನೀಡಿರುವಂತಹ ಸಮಸ್ಯೆಗಳಿಗೆ ಪರಿಹಾರಗಳನ್ನು ಹುಡುಕಿಕೊಂಡು ಮತ್ತು ಬಗೆಹರಿಸಿಕೊಂಡು ಅನ್ನಭಾಗ್ಯ ಅಕ್ಕಿಯ ಹಣವನ್ನು ಪಡೆದುಕೊಳ್ಳಬಹುದಾಗಿದೆ.
ಅನ್ನಭಾಗ್ಯ ಯೋಜನೆಯ ಬಾರದಿರಲು ಕಾರಣಗಳು
- ಪಡಿತರ ಚೀಟಿಯ ಈಕೆ ವೈಸಿ ಆಗದೆ ಇರುವುದು
- ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್ ಅಪ್ಡೇಟ್ ಆಗದೇ ಇರುವುದು
- ಇದರ ಜೊತೆಗೆ ತಾಂತ್ರಿಕ ದೋಷವು ಕೂಡ ಒಂದಾಗಿದೆ
- ಈ ಮೇಲಿನ ಎಲ್ಲ ಸಮಸ್ಯೆಗಳನ್ನು ನೀವು ಪರಿಹರಿಸಿಕೊಂಡರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಸಿಗುವುದು ಸುಲಭ
- ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಯ ಈ ಕೆವೈಸಿ ಆಗದೆ ಇರುವುದು
- ಪಡಿತರ ಚೀಟಿ ಅಪ್ಡೇಟ್ ಆಗದಿರುವುದು.
ಇದನ್ನೂ ಸಹ ಓದಿ: ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ! 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
• ಮೊದಲಿಗೆ ಕರ್ನಾಟಕ ಸರ್ಕಾರದ ವೆಬ್‌ಸೈಟ್ https://www.karnataka.gov.in/ ಗೆ ಭೇಟಿ ನೀಡಿ.
• E-services ಟ್ಯಾಬ್ ಮೇಲೆ ಕ್ಲಿಕ್ ಮಾಡಿ
• ನಂತರ DBT status ಲಿಂಕ್ ಅನ್ನು ಕ್ಲಿಕ್ ಮಾಡಿಕೊಳ್ಳಿ
• ನಿಮ್ಮ ಪಡಿತರ ಚೀಟಿಯಲ್ಲಿ ಯಾವ ಸಮಯದ ಸ್ಟೇಟಸ್ ಅನ್ನು ಚೆಕ್ ಮಾಡಲು ಬಯಸುತ್ತೀರಿ ಎನ್ನುವುದನ್ನು ಆಯ್ಕೆಮಾಡಿ
• ನಿಮ್ಮ ಪಡಿತರ ಸಂಖ್ಯೆಯನ್ನು ನಮೂದಿಸಿ ನಂತರ Continue ಬಟನ್ ಅನ್ನು ಕ್ಲಿಕ್ ಮಾಡಿ.
• ಅನ್ನಭಾಗ್ಯ ಯೋಜನೆಯಲ್ಲಿ ನಿಮ್ಮ ಸ್ಟೇಟಸ್ ಅನ್ನು ಸ್ಕ್ರೀನ್‌ನಲ್ಲಿ ತೋರಿಸಲಾಗುತ್ತದೆ.
ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ನೀವು ಸರ್ಕಾರದ ಸಹಾಯವಾಣಿ 1800-425-5889 ಅನ್ನು ಸಂಪರ್ಕಿಸಬಹುದು.
ಇತರೆ ವಿಷಯಗಳು:
ದೇಶದಾದ್ಯಂತ ಹೆಣ್ಣು ಮಕ್ಕಳಿಗಾಗಿ ಇರುವ ಯೋಜನೆ!! ನೀವು ಪಡೆಯಬಹುದು 74 ಲಕ್ಷ
ಚಿನ್ನ-ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ! ಚಿನ್ನ ಕೊಳ್ಳೋರಿಗೆ ಸಂಕಷ್ಟ