rtgh
Headlines

ಆಕಸ್ಮಿಕವಾಗಿ ಜಾನುವಾರು ಮರಣ ಹೊಂದಿದ್ರೆ ಸರ್ಕಾರದ ಈ ಯೋಜನೆಯಡಿ ಸಿಗಲಿದೆ ರೂ.10,000!

Anugraha Yojana
Share

ಹಲೋ ಸ್ನೇಹಿತರೇ, 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು & ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ & ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ ಸರ್ಕಾರವು ಘೋಷಣೆ ಮಾಡಿದೆ.

Anugraha Yojana

ಇದರ ಅನ್ವಯ ಪಶುಪಾಲನಾ & ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರೈತರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಪ್ರಕಟಣೆ ಬಿಡುಗಡೆ ಮಾಡಲಾಗಿದೆ.
ಪ್ರಕಟಣೆಯಲ್ಲಿ ಅರ್ಜಿ ಸಲ್ಲಿಕೆ ವಿಧಾನ & ಯೋಜನೆಯ ಮಾರ್ಗಸೂಚಿಯನ್ನು ತಿಳಿಸಲಾಗಿದೆ.

ಪಶುಪಾಲನಾ & ಪಶುವೈದ್ಯಕೀಯ ಸೇವಾ ಇಲಾಖೆ ಪ್ರಕಟಣೆ ವಿವರ ಹೀಗಿದೆ

ಜಾನುವಾರು ಮಾಲೀಕರಿಗೆ ತಿಳಿಸುವುದೇನೆಂದರೆ 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಹೊಂದಿದ ಆಡು & ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ & ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರ ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.

ಜಾನುವಾರು ಮಾಲೀಕರು ಸದರಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಮೃತಪಟ್ಟ ಜಾನುವಾರುವಿನ ಮರಣೋತ್ತರ ಪರೀಕ್ಷೆಯನ್ನು ನಡೆಸಿ ಸ್ಥಳೀಯ ಪಶುವೈದ್ಯರಿಂದ ದೃಢೀಕರಿಸಿದ ನಂತರವೇ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದೆಂದು ಈ ಮೂಲಕ ಸೂಚನೆ ಹೊರಡಿಸಲಾಗಿದೆ.

ಪಶುಸಖಿಯರು ಮೃತ ಪಟ್ಟ ಜಾನುವಾರುವಿನ ಮಾಲೀಕರಿಗೆ ಈ ಲಾಭವನ್ನು ಪಡೆದುಕೊಳ್ಳಲು ಅನುಕೂಲ ಮಾಡಿಕೊಡುವಂತೆ ಕೋರಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಮ್ಮ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಎಲ್ಲಿ ಅರ್ಜಿ ಸಲ್ಲಿಸಬೇಕು & ಅಗತ್ಯ ದಾಖಲಾತಿಗಳೇನು?

ರೈತರು ಜಾನುವಾರುಗಳು ಮರಣ ಹೊಂದಿದ್ದ ತಕ್ಷಣ ಸ್ಥಳೀಯ ಪಶು ಆಸ್ಪತ್ರೆಗೆ ಭೇಟಿ ಮಾಡಿ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳೀಯ ಪಶುವೈದ್ಯರಿಂದ ದೃಢೀಕರಣ ಪತ್ರ ಪಡೆದುಕೊಳ್ಳಬೇಕು ನಂತರ ಅರ್ಜಿದಾರರ ಅಧಾರ್ ಕಾರ್ಡ್ & ಬ್ಯಾಂಕ್ ಪಾಸ್ ಬುಕ್ ಸಮೇತ ನಿಮ್ಮ ತಾಲೂಕಿನ ಪಶುಪಾಲನಾ & ಪಶುವೈದ್ಯಕೀಯ ಸೇವಾ ಇಲಾಖೆಯ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಇನ್ನು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ: 8277100200

ಈ ಸಹಾಯವಾಣಿಯು 24/7 ಗಂಟೆಯ ವರೆಗೂ ಕಾರ್ಯ ನಿರ್ವಹಿಸುತ್ತದೆ. ರೈತರು ಯಾವ ಸಮಯದಲ್ಲಿ ಬೇಕಾದರು ಕರೆ ಮಾಡಿ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ.

ರೈತರು ಈ ಸಹಾಯವಾಣಿಯ ಮೂಲಕ ಯಾವೆಲ್ಲಾ ಮಾಹಿತಿ ಪಡೆಯಬವುದು:

  1. ಇಲಾಖೆಯು ಅನುಷ್ಠಾನ ಗೊಳಿಸುವ ಯೋಜನೆಗಳ ಬಗ್ಗೆ ಮಾಹಿತಿ.
  2. ಹೈನುಗಾರಿಕೆ, ಕುರಿ & ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರದಲ್ಲಿ ನಡೆಯುವ ತರಬೇತಿ ಯಾವ ದಿನ ನಡೆಯುತ್ತದೆ ಇತ್ಯಾದಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
  3. ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಮತ್ತು ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ವಿವರಣೆ.
  4. ದೇಶಿ ಹಾಗೂ ವಿದೇಶಿ ಜಾನವಾರು ತಳಿಯ ಬಗ್ಗೆ ಮಾಹಿತಿ.
  5. ಜಾನುವಾರುಗಳಿಗೆ ನಿಯಮಿತವಾಗಿ ನೀಡಬೇಕಾಗಿರುವ ಲಸಿಕೆಗಳ ಕುರಿತು ವಿವರಣೆ.
  6. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯುವ ಸಾಲ ಸೌಲಭ್ಯದ ಕುರಿತು ಮಾಹಿತಿ.
  7. ಮಿಶ‍್ರತಳಿ ಹಸು, ಕುರಿ & ಮೇಕೆ, ಹಂದಿಗಳ ಅಂದಾಜು ಬೆಲೆ ಮತ್ತು ಅವುಗಳ ಲಭ್ಯತೆ ಕುರಿತಂತೆ ಸೂಕ್ತ ಸ್ಥಳಗಳ ವಿವರ.
  8. ಯಶಸ್ವಿ ಹೈನುಗಾರಿಕೆಗೆ ಅಗತ್ಯವಿರುವ ಮೇವಿನ ಬೆಳೆಯ ಬಗ್ಗೆ ಮಾಹಿತಿ.
  9. ತುರ್ತು ಪಶುವೈದ್ಯ ಸೇವೆಗಾಗಿ ಒಳಬರುವ ಕರೆಯನ್ನು ಹತ್ತಿರದ ಇಲಾಖಾ ತಾಂತ್ರಿಕ ಸಿಬ್ಬಂದಿ/ಅಧಿಕಾರಿಗಳಿಗೆ ವರ್ಗಾಯಿಸಿ, ಅಗತ್ಯ ಸೇವೆ ಸೌಲಭ್ಯಗಳು ದೊರೆಯುವಂತೆ ಸಹಕರಿಸುವುದು.

ಪಶುಪಾಲನಾ & ಪಶುವೈದ್ಯಕೀಯ ಸೇವಾ ಇಲಾಖೆಯ ವೆಬ್ಸೈಟ್ ಭೇಟಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇತರೆ ವಿಷಯಗಳು

ಮಾರ್ಚ್‌ 25 ರಿಂದ SSLC ಪರೀಕ್ಷೆ ಆರಂಭ.! ಎಕ್ಸಾಮ್ ಹಾಲ್‌ಗೆ ಶಿಕ್ಷಣ ಮಂಡಳಿಯ ಹೊಸ ರೂಲ್ಸ್

ರಾಜ್ಯ ಸರ್ಕಾರಿ ನೌಕರರಿಗೂ ಸಿಕ್ತು ಸಿಹಿ ಸುದ್ದಿ.! ತುಟ್ಟಿಭತ್ಯೆಯಲ್ಲಿ ಶೇ.4 ರಷ್ಟು ಹೆಚ್ಚಳ


Share

Leave a Reply

Your email address will not be published. Required fields are marked *