rtgh

ಡೆಂಗ್ಯೂ ಮುಂಜಾಗ್ರತೆ ರೀಲ್ಸ್ ಮಾಡಿದ್ರೆ ಸಿಗತ್ತೆ ಲಕ್ಷ ರೂಪಾಯಿ ಬಹುಮಾನ! BBMP ಆಫರ್

BBMP Offer For Dengue Awareness Reels
Share

ಹಲೋ ಸ್ನೇಹಿತರೆ, ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದೂ. ಇತ್ತ ಡೆಂಗ್ಯೂ ಪ್ರಕರಣಗಳಿಗೆ ಕಡಿವಾಣ ಹಾಕುವ ಬದಲು ನಗರ ಪಾಲಿಕೆ, ಜಾಗೃತಿ ಮೂಡಿಸುವ ನೆಪದಲ್ಲಿ ದುಂದುವೆಚ್ಚಕ್ಕೆ ಕೈ ಹಾಕಿದೆ. ಇದಕ್ಕೆ ಜನರ ವಿರೋಧ ವ್ಯಕ್ತವಾಗುತ್ತಿದೆ. ಡೆಂಗ್ಯೂ ಬಗ್ಗೆ ಅರಿವು ಮೂಡಿಸಲು ಹೊರಟಿರುವ ಪಾಲಿಕೆ, ರೀಲ್ಸ್ ಮಾಡಿದವರಿಗೆ ಲಕ್ಷ ಲಕ್ಷ ಬಹುಮಾನ ನೀಡುವುದಾಗಿ ಹೇಳಿದೆ.

BBMP Offer For Dengue Awareness Reels

ಗುರುವಾರ ಒಂದೇ ದಿನ ಬೆಂಗಳೂರಿನಲ್ಲಿ 524 ಪ್ರಕರಣಗಳು ವರದಿಯಾಗಿವೆ. ಇತ್ತ ಡೆಂಗ್ಯೂಗೆ ಕಡಿವಾಣ ಹಾಕಲು ಮನೆ ಮನೆ ಸರ್ವೇ ಮಾಡುತ್ತೇವೆ ಎಂದು ಹೇಳಿದ್ದ ಬಿಬಿಎಂಪಿ, ಇದೀಗ ಇದರ ಜೊತೆಗೆ ಅರಿವು ಮೂಡಿಸುವ ಕಾರ್ಯಕ್ರಮ ಮಾಡಲು ಇಲಾಖೆ ಮುಂದಾಗಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವಂತಹ ರೀಲ್ಸ್ ಮಾಡಿದವರಿಗೆ ಬಂಪರ್ ಬಹುಮಾನ ಘೋಷಿಸಿರುವ ಪಾಲಿಕೆ, ಈ ವಿಧಾನದ ಮೂಲಕ ಜಾಗೃತಿ ಮೂಡಿಸಲು ಹೊರಟಿದೆ.

ಸೋಷಿಯಲ್ ಮೀಡಿಯಾಗಳಲ್ಲಿ ಡೆಂಗ್ಯೂ ಕುರಿತ ರೀಲ್ಸ್​ಗಳನ್ನು ಮಾಡಲು ಆಹ್ವಾನಿಸಿರುವ ಪಾಲಿಕೆ, ಮೊದಲ ಐದು ಉತ್ತಮ ರೀಲ್ಸ್​ಗಳಿಗೆ ತಲಾ 25 ಸಾವಿರ ರೂಪಾಯಿ ಬಹುಮಾನ ಹಾಗೂ ಇನ್ನು ದ್ವೀತಿಯ ಬಹುಮಾನವಾಗಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಮಾಡಿದ್ದು, ಯಾವ ಶಾಲೆಗಳು ಹೆಚ್ಚು ವಿದ್ಯಾರ್ಥಿಗಳ ಬಳಿ ರೀಲ್ಸ್ ಮಾಡಿಸುತ್ತದೆಯೋ ಆ ಶಾಲೆಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವಿಡಿಯೋ ಮಾಡಲು ಉತ್ತೇಜಿಸೋ ಶಿಕ್ಷಕಿಯರಿಗೂ 35 ಸಾವಿರ ರೂಪಾಯಿ ಬಹುಮಾನದ ಆಫರ್ ನೀಡಿದೆ.

ಇದನ್ನು ಓದಿ: ರಾಜ್ಯದ ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌! ವಾರವಿಡೀ ಹೊಸ ಸೌಲಭ್ಯಕ್ಕೆ ಚಾಲನೆ

ಇತ್ತ ಬಿಬಿಎಂಪಿಯ ಈ ರೀಲ್ಸ್ ಸ್ಪರ್ಧೆಗೆ ಸಾರ್ವಜನಿಕರಿಂದ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಮಹಾನಗರ ಪಾಲಿಕೆ ಡೆಂಗ್ಯೂ ಬಗ್ಗೆ ಅರಿವು ಮೂಡಿಸಲು ಹೊರಟಿರೋದೇನೋ ಸರಿ. ಆದ್ರೆ ನಗರದಲ್ಲಿ ಸರಿಯಾಗಿ ಸ್ವಚ್ಛತೆ ಕಾಪಾಡಬೇಕು, ಸೊಳ್ಳೆಗಳ ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಮಕ್ಕಳಿಗೆ ಈ ರೀತಿ ರೀಲ್ಸ್ ಮಾಡಿಸುತ್ತಿರುವುದರಿಂದ ಏನೂ ಪ್ರಯೋಜನ ಆಗುವುದಿಲ್ಲ ಅಂತಾ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಇಲಾಖೆ ಮುಂದಾಗಿರೋದು ಸರಿ, ಆದ್ರೆ ಈ ಕೆಲಸ ಬರೀ ರೀಲ್ಸ್​​ಗೆ ಸೀಮಿತವಾಗಬಾರದು. ಲಕ್ಷ ಲಕ್ಷ ಹಣವನ್ನ ರೀಲ್ಸ್ ಗೆ ಕೊಡುವ ಬದಲು ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜನರು ಸಲಹೆ ನೀಡುತ್ತಿದ್ದು, ಪಾಲಿಕೆಯ ಈ ರೀಲ್ಸ್ ಸ್ಪರ್ಧೆ ಡೆಂಗ್ಯೂ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆಯಾ ಪರಿಣಾಮಕಾರಿಯಾಗಲಿದೆಯಾ? ಅಥವಾ ಪಾಲಿಕೆ ಬೊಕ್ಕಸದ ಹಣ ಖಾಲಿ ಮಾಡಲು ದಾರಿಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಇತರೆ ವಿಷಯಗಳು:

ಸರ್ಕಾರಿ ನೌಕರರ ಕನಿಷ್ಠ ವೇತನ 25,000 ಏರಿಕೆ.! ಕೇಂದ್ರದ ಆದೇಶ

ಮಹಿಳೆಯರಿಗೆ ಗುಡ್ ನ್ಯೂಸ್: ಹೈನುಗಾರಿಕೆ ಸಹಾಯಧನಕ್ಕೆ ಅರ್ಜಿ ಆಹ್ವಾನ!


Share

Leave a Reply

Your email address will not be published. Required fields are marked *