rtgh
Headlines

ಹೊಸ ಆಸ್ತಿ ತೆರಿಗೆ ಪದ್ದತಿ ಆರಂಭ .! ಹೊಲ, ಸ್ವಂತ ಮನೆ ಇದ್ದವರು ತಕ್ಷಣ ಗಮನಹರಿಸಿ

bbmp property tax system
Share

ಹಲೋ ಸ್ನೇಹಿತರೇ, ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸ ಆಸ್ತಿ ತೆರಿಗೆ ಪದ್ಧತಿ ಜಾರಿಗೆ ಬಂದಿದೆ. ಈ ಪದ್ಧತಿಯಡಿ, ಮನೆ ಕಟ್ಟುವವರಿಗೆ ಕೆಲವು ರಿಯಾಯಿತಿಗಳನ್ನು ನೀಡಲಾಗಿದೆ. ಈ ಹೊಸ ಆಸ್ತಿ ತೆರಿಗೆ ಪದ್ಧತಿ ಹಾಗೂ ಖಾತಾ ವ್ಯವಸ್ಥೆ ಹೇಗಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

bbmp property tax system

Contents

ಹೊಸ ಆಸ್ತಿ ತೆರಿಗೆ ಪದ್ಧತಿ ಜಾರಿಗೆ:

ಬೆಂಗಳೂರಿನಲ್ಲಿ 50×80 ಅಡಿ ಅಳತೆಯ ಕಟ್ಟಡಗಳ ಕಟ್ಟಡ ನಕ್ಷೆ ಅನುಮೋದನೆಗಾಗಿ ಸ್ವಯಂಚಾಲಿತಗೊಳಿಸಲಾಗಿದೆ. ಈ ಹೊಸ ವ್ಯವಸ್ಥೆಯಡಿ, ಅರ್ಜಿದಾರರು ಆನ್‌ಲೈನ್‌(Online)ನಲ್ಲಿ ಅರ್ಜಿ ಸಲ್ಲಿಸಬಹುದು & ಅನುಮೋದನೆಯನ್ನು ಇಂಜಿನಿಯರ್‌ಗಳಿಂದ ಪಡೆಯಬಹುದು.

“ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ಕಟ್ಟುವವರಿಗೆ ನಕ್ಷೆ ಮಂಜೂರಾತಿ ಒಂದು ಕ್ರಾಂತಿಕಾರಕ ವ್ಯವಸ್ಥೆಯಾದ ʼನಂಬಿಕೆ ನಕ್ಷೆʼಯನ್ನು ವಿಧಾನಸೌಧದಲ್ಲಿ ಇಂದು ಉದ್ಘಾಟಿಸಲಾಗಿದೆ. ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಈ ಹೊಸ ವ್ಯವಸ್ಥೆ ಜಾರಿಗೆ ಬರುತ್ತಿದೆ 50×80 ಅಡಿವರೆಗಿನ 4 ಯೂನಿಟ್‌ ವರೆಗಿನ ಮನೆಗಳ ನಕ್ಷೆಯನ್ನು ಮನೆ ಬಾಗಿಲಿಗೆ ತಲುಪಿಸುವ ದೊಡ್ಡ ವ್ಯವಸ್ಥೆ ಇದಾಗಿದೆ.

ಮನೆ ಕಟ್ಟಲು ಬಯಸುವವರು ಆನ್‌ಲೈನ್‌ ಮೂಲಕ ತಮ್ಮ ದಾಖಲೆಗಳನ್ನು ಸಲ್ಲಿಸಿ ಸರ್ಕಾರವೇ ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಿ, ಎಂ ಪ್ಯಾನಲ್‌ ಮೂಲಕ ನೋಂದಣಿಯಾದ ಎಂಜಿನಿಯರ್‌ ದಾಖಲೆಯನ್ನು ಪರಿಶೀಲಿಸಿ ನಕ್ಷೆಯನ್ನು ಅರ್ಜಿದಾರರ ಮನೆಬಾಗಿಲಿಗೆ ತಲುಪಿಸಲಿದ್ದಾರೆ. ಸದ್ಯ BBMP ವ್ಯಾಪ್ತಿಯಲ್ಲಿ ಮಾತ್ರ ಇದು ಜಾರಿಯಾಗಲಿದ್ದು ಮುಂಬರುವ ದಿನಗಳಲ್ಲಿ ಬಿಡಿಎ ವ್ಯಾಪ್ತಿಗು ಬರಲಿದೆ.

ಕಟ್ಟಡ ನಕ್ಷೆ ಅನುಮತಿ: ಇನ್ನು ಪಾಲಿಕೆ ಕಚೇರಿ ಅಲೆದಾಡುವ ಅಗತ್ಯವಿಲ್ಲ

ಬೆಂಗಳೂರಿನಲ್ಲಿ ಮನೆ ಕಟ್ಟುವುದು ಈಗ ಹಿಂದಿಗಿಂತಲೂ ಸುಲಭವಾಗಿದೆ. ಈಗ 50X80 ವಿಸ್ತೀರ್ಣದಲ್ಲಿ ನಿವೇಶನ ಹೊಂದಿರುವವರು & 4 ಯುನಿಟ್ ಮನೆ ಕಟ್ಟಿಕೊಳ್ಳುವವರು ಸರ್ಕಾರ ನೋಂದಾಯಿತ ವಾಸ್ತುಶಿಲ್ಪಿ / ಇಂಜಿನಿಯರ್ ಮೂಲಕ ಆನ್‌ಲೈನ್‌ನಲ್ಲಿ ಕಟ್ಟಡದ ನಕ್ಷೆಗೆ ಸ್ವಯಂ ಅನುಮತಿಯನ್ನು ಪಡೆಯಬಹುದು. ಕಳೆದ ವರ್ಷ 9,000 ಕಟ್ಟಡ ನಕ್ಷೆಗೆ ಅನುಮತಿ ನೀಡಲಾಗಿತ್ತು , ಈ ಬಾರಿ 10,000 ನಕ್ಷೆ ಸಿಗಬಹುದು ಎಂದು ಅಂದಾಜು ಮಾಡಲಾಗಿದೆ.

ಹೊಸ ಆಸ್ತಿ ತೆರಿಗೆ ಪದ್ಧತಿ:

ಡಿಕೆ ಶಿವಕುಮಾರ್ ಅವರ ಪ್ರಕಾರ 2008 ರಲ್ಲಿ ಜಾರಿಗೆ ತಂದ ಆಸ್ತಿ ತೆರಿಗೆ ಪದ್ಧತಿಯನ್ನು ಸುಲಭಗೊಳಿಸಲಾಗಿದೆ & ಹೊಸ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ . ಈ ಹೊಸ ಪದ್ಧತಿಯಲ್ಲಿ ಏನೆಲ್ಲಾ ಬದಲಾವಣೆಗಳಿವೆ?

2008ರಲ್ಲಿ ಜಾರಿ ಮಾಡಲಾಗಿದ್ದ ಆಸ್ತಿ ತೆರಿಗೆ ಪದ್ಧತಿಯಲ್ಲಿ ಆಸ್ತಿಗಳನ್ನು ಒಟ್ಟು 18 ವರ್ಗೀಕರಣ ಮಾಡಲಾಗುತ್ತಿದ್ದು, ಇದರಿಂದ ತೆರಿಗೆ ಪಾವತಿಯಲ್ಲಿ ಸಮಸ್ಯೆ ಉಂಟಾಗುತ್ತಿತ್ತು. ಆದರೆ ಇದೀಗ ತೆರಿಗೆ ಪದ್ಧತಿಯನ್ನು ಸರಳೀಕರಣ ಮಾಡಿ 6 ವರ್ಗೀಕರಣಗಳನ್ನಾಗಿ ಮಾಡಲಾಗಿದೆ. ವಸತಿ (ಸ್ವಂತ ಬಳಕೆ ಮತ್ತು ಬಾಡಿಗೆದಾರರ ಬಳಕೆ), ವಾಣಿಜ್ಯ, ಕೈಗಾರಿಕಾ ಮತ್ತು ಸ್ಟಾರ್ ಹೊಟೇಲ್, ವಿನಾಯಿತಿ ನೀಡಲಾದ ಮತ್ತು ಸಂಪೂರ್ಣ ಖಾಲಿ ಜಮೀನುಗಳು ಎಂದು ವರ್ಗೀಕರಣ ಮಾಡಲಾಗಿದೆ. ಈ ಹೊಸ ಆಸ್ತಿ ತೆರಿಗೆ ಪದ್ಧತಿ ಇದೇ ಏಪ್ರಿಲ್‌ನಿಂದ ಜಾರಿಗೆ ತರಲಾಗುವುದು ಎಂದು ತಿಳಿಸಲಾಗಿದೆ.

ಬಿಬಿಎಂಪಿ ಖಾತಾ ವಿತರಣೆ:

ಈಗ ನಿಮ್ಮ ಆಸ್ತಿಯನ್ನು ಸ್ವಯಂ ಘೋಷಣೆ ಮಾಡಿಕೊಂಡು, ಖಾತಾ ಪಡೆಯಬಹುದು. ಹೌದು, ಆಸ್ತಿ ತೆರಿಗೆ ಪಾವತಿಗೆ ತಮ್ಮನ್ನು ತಾವು ಘೋಷಣೆ ಮಾಡಿಕೊಳ್ಳದ ನಾಗರಿಕರು ಈಗ ತಮ್ಮ ಆಸ್ತಿಯನ್ನು ಸ್ವಯಂ ಘೋಷಣೆ ಮಾಡಿಕೊಳ್ಳಬೇಕಾಗುತ್ತದೆ. ಇಂತಹವರಿಗೆ ಆಸ್ತಿ ತೆರಿಗೆ ಸಂಖ್ಯೆ & ಬಿಬಿಎಂಪಿ ಖಾತಾ ನೀಡಲಾಗುತ್ತದೆ. ಬಿಬಿಎಂಪಿಯಿಂದ ದಾಖಲೆ ಸರಿಯಾಗಿ ಇರುವರಿಗೆ ಎ ಖಾತಾ ನೀಡಲಾಗುವುದು. ಕನ್ವರ್ಷನ್ ಮಾಡಿಕೊಳ್ಳದೇ, ಯೋಜನೆ ಇಲ್ಲದವರಿಗೆ ಬಿ ಖಾತಾ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಇತರೆ ವಿಷಯಗಳು

ಎಲ್ಲಾ ಹೆಣ್ಣು ಮಗುವಿಗೆ ಬರುತ್ತೆ ಬರೋಬ್ಬರಿ 1 ಲಕ್ಷ ರೂಪಾಯಿ!! ಭಾಗ್ಯಲಕ್ಷ್ಮಿ ಬಾಂಡ್

ಕೋಟಕ್ ಸುರಕ್ಷಾ ವಿದ್ಯಾರ್ಥಿವೇತನ 2024! ಅರ್ಜಿ ಹಾಕಿ 1 ಲಕ್ಷದ ವರೆಗೆ ಸ್ಕಾಲರ್ಶಿಪ್ ಪಡೆಯಿರಿ


Share

Leave a Reply

Your email address will not be published. Required fields are marked *