ಹಲೋ ಸ್ನೇಹಿತರೇ, ಬೆಂಗಳೂರು ಸೇರಿದಂತೆ ವಿವಿದೆಡೆ ಇಂದು ಬೆಳಿಗ್ಗೆಯಿಂದಲೇ ಮಳೆ ಪ್ರಾರಂಭವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ, ಎಲ್ಲಿಲ್ಲಿ ಮಳೆಯಾಗಲಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ಲೇಖನದಲ್ಲಿ ತಿಳಿಯಿರಿ.
ಕರ್ನಾಟಕದಲ್ಲಿ ಮುಂಗಾರು ಆಗಮನಕ್ಕೂ ಮುನ್ನವೇ ಹಲವೆಡೆ ಉತ್ತಮ ಮಳೆ ಆಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ ಬಂದಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
Contents
ರಾಜ್ಯಾದ್ಯಂತ ಒಂದು ವಾರ ಭರ್ಜರಿ ಮಳೆ:
ಕರ್ನಾಟಕದಾದ್ಯಂತ ಇನ್ನೂ 1 ವಾರಗಳ ಕಾಲ ಭರ್ಜರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ಮೂಡಿದೆ. ಮೇ 18 ಬೆಳಗ್ಗೆ 8.30ವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಈ 3 ಕರಾವಳಿ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚಿನ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್:
ರಾಜ್ಯದ ದಕ್ಷಿಣ ಒಳನಾಡಿನ ಪ್ರದೇಶಗಳಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮಂಡ್ಯ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು ಹಲವೆಡೆ ಮಳೆ ಸೂಚನೆ ನೀಡಿರುವ ಐಎಂಡಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.
ಇತರೆ ವಿಷಯಗಳು
SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ! ಕನ್ನಡ ಬಂದ್ರೆ ಸಾಕು ಇಲ್ಲಿಂದ ಅಪ್ಲೈ ಮಾಡಿ
ದನದ ಕೊಟ್ಟಿಗೆ ನಿರ್ಮಾಣ ಯೋಜನೆ! 2 ಲಕ್ಷ ಒಂದೇ ದಿನದಲ್ಲಿ ಖಾತೆಗೆ ಜಮಾ