ಬೆಂಗಳೂರು : ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ನ ವಿಭಾಗೀಯ ಪೀಠ ತೀರ್ಪು ಅನ್ನು ಪ್ರಕಟಿಸಿದೆ. ರಾಜ್ಯದ 5, 8, 9,11 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ನಡೆಸಲು ಹೈಕೋರ್ಟ್ ಅಸ್ತು ಎಂದಿದೆ. ಸ್ಥಗಿತಗೊಂಡಿದ್ದ ಪರೀಕ್ಷೆಯನ್ನು ಮುಂದುವರೆಸಲು ಹೈಕೋರ್ಟ್ ಆದೇಶವನ್ನು ಹೊರಡಿಸಿದೆ
ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿಯನ್ನು ನೀಡಿ ಆದೇಶವನ್ನು ಹೊರಡಿಸಿದೆ. ಹಾಗೂ, ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆಗೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದೆ.
ರಾಜ್ಯದ 5, 8, 9, 11ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಮೇಲ್ಮನವಿಯ ಸಂಬಂಧ ಹೈಕೋರ್ಟ್ ವಿಚಾರಣೆಯನ್ನು ನಡೆಸಿ ತೀರ್ಪು ಅನ್ನು ಕಾಯ್ದಿರಿಸಿತ್ತು. ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ನಡೆ ನೀಡಿತ್ತು.
ಇದನ್ನೂ ಸಹ ಓದಿ: 2nd ಪಿಯುಸಿ ಪರೀಕ್ಷೆಯ ಕೀ ಉತ್ತರ ಬಿಡುಗಡೆ.! ಯಾವುದೇ ಮರುಮೌಲ್ಯಮಾಪನಕ್ಕೆ ದಿನಾಂಕ ನಿಗದಿ
ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆಯನ್ನು ನೀಡಲಾಗಿತ್ತು. ಮೇಲ್ಮನವಿ ವಿಚಾರಣೆಯನ್ನು ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚನೆಯನ್ನು ನೀಡಿತ್ತು. ವಾದ ಪ್ರತಿವಾದಗಳನ್ನು ಆಲಿಸಿದ ವಿಭಾಗೀಯ ಪೀಠದ ತೀರ್ಪು ಅನ್ನು ಕಾಯ್ದಿರಿಸಿತ್ತು.
ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನರಹಿತ, ಅನುದಾನಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಯನ್ನು ನಡೆಸುವ ವಿಚಾರದ ಕುರಿತಂತೆ ಅನಿಶ್ಚಿತತೆಯು ಮುಂದುವರೆದಿತ್ತು. ಪರೀಕ್ಷೆಯು ನಡೆಯುತ್ತದೆಯೇ ಅಥವಾ ರದ್ದಾಗುತ್ತದೆಯೇ ಎಂಬುದರ ಕುರಿತಾಗಿ ಗೊಂದಲವು ಮುಂದುವರೆದಿದ್ದು, ಮಕ್ಕಳು ಹಾಗೂ ಪೋಷಕರ ಸ್ಥಿತಿಯು ಅಯೋಮಯವಾಗಿತ್ತು. ಇದೀಗ ಹೈಕೋರ್ಟ್ ಮಹತ್ವದ ತೀರ್ಪು ಅನ್ನು ಪ್ರಕಟಿಸಿದೆ.
ಇತರೆ ವಿಷಯಗಳು:
500 ರೂ.ಗೆ ಗ್ಯಾಸ್, 75 ರೂ.ಗೆ ಪೆಟ್ರೋಲ್: ಚುನಾವಣೆಗೂ ಮುನ್ನ ಹೊರ ಬಿತ್ತು ದೊಡ್ಡ ಘೋಷಣೆ
8ನೇ ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಮತ್ತೆ ಬದಲಾವಣೆ!