rtgh

ಇಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’! ಏರಿಕೆಯಾಗಲಿದೆಯಾ ಮೂಲ ವೇತನ?

Cabinet meeting
Share

ಹಲೋ ಸ್ನೇಹಿತರೆ, ಲೋಕಸಭೆ ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ 3 ತಿಂಗಳ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದ ಸಚಿವ ಸಂಪುಟ ಸಭೆ ಇಂದು ನಡೆಯುತ್ತಿದೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್‌ ಅವರ ನೇತೃತ್ವದ ವೇತನ ಆಯೋಗವನ್ನು ಕಳೆದ ಮಾರ್ಚ್ 16 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ತನ್ನ ಅಂತಿಮ ವರದಿ ಸಲ್ಲಿಸಿತ್ತು.

Cabinet meeting

ರಾಜ್ಯ ಸಚಿವ ಸಂಪುಟದ 2024ನೇ ಸಾಲಿನ 9ನೇ ಸಭೆಯನ್ನು ಜೂನ್ 13ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ.

ಇದನ್ನು ಓದಿ: ಪ್ರತಿ ತಿಂಗಳು 3000 ಬರುವ ಕೇಂದ್ರ ಸರ್ಕಾರದ ಹೊಸ ಯೋಜನೆ!

ಈ ಮಹತ್ವದ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಜಾರಿ, ವರ್ಗಾವಣೆಯ ಕುರಿತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಚುನಾವಣೆ ಬಳಿಕ ನಡೆಯುತ್ತಿರುವ ಈ ಸಭೆ ಹೆಚ್ಚು ಮಹತ್ವ ಪಡೆದಿದ್ದು, ವಿಶೇಷವಾಗಿ ಗ್ಯಾರಂಟಿ ಯೋಜನೆ ಸೇರಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಹೆಚ್ಚಿದೆ.

ಪ್ರಮುಖವಾಗಿ ಶೇ. 31ರಷ್ಟು ತುಟ್ಟಿಭತ್ಯೆ ವಿಲೀನಗೊಳಿಸಿ, ಶೇ .27.50 ಫಿಟ್‌ಮೆಂಟ್‌ ಅಂಶವನ್ನು ನೀಡುವ ಮೂಲಕ ನೌಕರರ ಕನಿಷ್ಠ ಮೂಲ ವೇತನವನ್ನು ಪ್ರಸ್ತುತ 17,000 ರೂ.ಗಳಿಂದ 27,000 ರೂ.ಗೆ ಏರಿಕೆ ಮಾಡಲು ಸುಧಾಕರರಾವ್‌ ಅವರ ಆಯೋಗ ಶಿಫಾರಸು ಮಾಡಿತ್ತು. ಆಯೋಗದ ಅಂತಿಮ ವರದಿಯನ್ನು ನಿರೀಕ್ಷಿಸಿ ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರ ವಿಧಾನಸಭೆ ಚುನಾವಣೆಗೂ ಮುನ್ನ ಶೇ. 17ರಷ್ಟು ಮಧ್ಯಂತರ ವೇತನ ಹೆಚ್ಚಳ ಮಾಡಿತ್ತು. ಇಂದು ಅಂತಿಮವಾಗಿ ಎಷ್ಟು ಪರಿಷ್ಕರಣೆ ಆಗಲಿದೆ ಎಂಬುದು ಕಾದು ನೋಡಬೇಕಿದೆ.

ಇತರೆ ವಿಷಯಗಳು:

ಗೃಹಲಕ್ಷ್ಮಿ 11ನೇ ಕಂತಿನ ಹಣ ಈ ದಿನ ಬಿಡುಗಡೆ! ಮಹಿಳೆಯರೇ ಖಾತೆ ಚೆಕ್ ಮಾಡಿಕೊಳ್ಳಿ

ಆಧಾರ್ ಕಾರ್ಡ್ ಇದ್ದರೆ ಸಾಕು ಉಚಿತವಾಗಿ ಸಿಗತ್ತೆ ಹೊಲಿಗೆ ಯಂತ್ರ! ಇಂದೇ ಅರ್ಜಿ ಸಲ್ಲಿಸಿ


Share

Leave a Reply

Your email address will not be published. Required fields are marked *