rtgh

ಕೆಫೆ ಸಂಜೀವಿನಿ: ಮಹಿಳೆಯರ ಸ್ವಾವಲಂಬನೆಗಾಗಿ ಗ್ರಾಮೀಣ ಭಾಗದಲ್ಲಿ ಹೊಸ ಯೋಜನೆ ಜಾರಿ

cafe sanjeevini karnataka
Share

ಹಲೋ ಸ್ನೇಹಿತರೇ, ಗ್ರಾಮೀಣ ಪ್ರದೇಶದಲ್ಲಿ  ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟುಕುವ ಬೆಲೆಗೆ ಒದಗಿಸುವ ಸದುದ್ದೇಶದಿಂದ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್‍ಗಳನ್ನು ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಎಲ್ಲೆಲ್ಲಿ ನಿರ್ಮಾಣವಾಗಲಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

cafe sanjeevini karnataka

ಈ ಘೋಷಣೆ ಮಾಡಿರುವುದಕ್ಕೆ  ವೈದ್ಯಕೀಯ ಶಿಕ್ಷಣ ಜೀವನೋಪಾಯ ಮತ್ತು ಕೌಶಲ್ಯಾಭಿವೃಧಿ & ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ ತಿಳಿಸಿದ್ದಾರೆ. 

ಕೆಫೆಸಂಜೀವಿನಿ ಸ್ಥಾಪನೆ

ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರ ಸ್ವಾವಲಂಬನೆ & ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 7.50 ಕೋಟಿ ರೂ. ವೆಚ್ಚಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಆಶ್ವಾಸನೆಯನ್ನು ನೀಡಿದರು. 
 
ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳ ಸದಸ್ಯರಾಗಿರುವ 1 ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುತ್ತದೆ. 2,500 ಕಾಫಿಕಿಯೋಕ್ಸ್‍ಗಳನ್ನ 25 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಿ ಇದರ ಸಂಪೂರ್ಣ ನಿರ್ವಹಣೆಯನ್ನು ಮಹಿಳೆಯರೇ ಮಾಡುತ್ತಾರೆ ಎಂದಿದ್ದಾರೆ. 

ವಸತಿ ವ್ಯವಸ್ಥೆ

ವಿದ್ಯಾರ್ಥಿನಿಯರು & ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು 5 ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವಸಹಾಯ ಗುಂಪುಗಳು & ನಗರ ಸ್ಥಳೀಯ ಸಂಸ್ಥೆಗಳಸಹಭಾಗಿತ್ವದಲ್ಲಿ ನಿರ್ವಹಣೆ ಮಾಡಲಾಗುತ್ತದೆ. 
  
ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆಉದ್ಯೋಗ ಆಕಾಂಕ್ಷಿಗಳನ್ನು & ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರಲು ಯುವ ಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಕಡೆಗಳಲ್ಲಿ ಆಯೋಜಿಸಲಾಗುತ್ತದೆ ಎಂದು ಸಿಎಂ ಘೋಷಿಸಿದ್ದಾರೆ.  
 
ಬಳ್ಳಾರಿ &  ಚಿತ್ರದುರ್ಗದಲ್ಲಿ ಜಿಲ್ಲೆಗಳಲ್ಲಿ ಖನಿಜ ನಿಧಿಯ ಮೂಲಕಗದಗ ಜಿಲ್ಲೆಯ ರೋಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ 150  ಕೋಟಿ ವೆಚ್ಚದಲ್ಲಿ ಜಿಟಿಟಿಸಿ ಆರಂಭ ಮಾಡುವುದಾಗಿ ಹೇಳಿದ್ದಾರೆ. 

ಎಲೆಕ್ಟ್ರಾನಿಕ್ಸ್ & ಕಮುನಿಕೇಷನ್, ಮೆಕ್ಯಾಟ್ರಾನಿಕ್ಸ್‍, ಎಂಜನಿಯರಿಂಗ್, ಎಲೆಕ್ಟ್ರಿಕಲ್ಸ್, ಎಲೆಕ್ಟ್ರಾನಿಕ್ಸ್‍, ರೋಬೊಟೆಕ್ಸ್‍ಘಿ ಇತ್ಯಾದಿಹೆಚ್ಚುವರಿ ಡಿಪ್ಲೊಮಾ ಕೋರ್ಸ್‍ಗಳನ್ನು ಜಿಟಿಟಿಸಿ ಮಾದರಿಯಲ್ಲಿ ಹಂತ ಹಂತವಾಗಿ ಆರಂಭಿಸಲಾಗುವುದು. ಇದರಿಂದ 15000 ವಿದ್ಯಾರ್ಥಿಗಳಿಗೆ ಅನುಕೂಲವಾಗುವುದು ಎಂದು ತಿಳಿಸಿದ್ದಾರೆ.

ಇತರೆ ವಿಷಯಗಳು

1st, 2nd ಪಿಯುಸಿ ವಿದ್ಯಾರ್ಥಿಗಳಿಗೆ ಗ್ಯಾರೆಂಟಿ ಸಿಗುವ ಸ್ಕಾಲರ್‌ಶಿಪ್‌.! ಅಪ್ಲಿಕೇಶನ್‌ ಓಪನ್‌ ಆಗಿದೆ ಬೇಗ ಅಪ್ಲೇ ಮಾಡಿ

ರೈತರಿಗಾಗಿ ಇಂದಿನಿಂದ ಆರಂಭವಾಯ್ತು ಕೃಷಿ ಸಂಪದಾ ಯೋಜನೆ!!

FAQ

1.ಎಷ್ಟು ಕೆಫೆ ಸಂಜೀವಿನಿಗಳನ್ನು ಸ್ಥಾಪಿಸಲಾಗುವುದು?

50 ಕೆಫೆ ಸಂಜೀವಿನಿಗಳನ್ನು ಸ್ಥಾಪಿಸಲಾಗುವುದು.

1.ಎಷ್ಟು ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುತ್ತದೆ?

1 ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುತ್ತದೆ.


Share

Leave a Reply

Your email address will not be published. Required fields are marked *