rtgh
Headlines

8ನೇ ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಮತ್ತೆ ಬದಲಾವಣೆ!

Change in Board Exam
Share

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯದಲ್ಲಿ ಸರ್ಕಾರಿ ಶಾಲೆ, ಅನುದಾನಿತ ಶಾಲೆ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 8 ಮತ್ತು 9ನೇ ತರಗತಿಯ ಮಕ್ಕಳಿಗೆ ಬೋರ್ಡ್‌ ಪರೀಕ್ಷೆ (Board Exam) ನಡೆಸಬೇಕಾ..? ಅಥವಾ ಬೇಡ್ವಾ..? ಎಂಬುಬುದರ ಬಗ್ಗೆ ವಿಚಾರಣೆ ನಡೆಸಿ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ತೀರ್ಪು ಕಾಯ್ದಿರಿಸಿದೆ.

Change in Board Exam

ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸುವ ಬಗ್ಗೆ ನಿರ್ಧಾರ ಮಾಡಿತ್ತು. ಆದರೆ ಸರ್ಕಾರದ ನಿರ್ಧಾರವನ್ನು ರದ್ದುಪಡಿಸಿ ಏಕಸದಸ್ಯಪೀಠ ಆದೇಶ ಮಾಡಿತ್ತು. ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಹೋಗಿದ್ದ ಸರ್ಕಾರ, ವಿಭಾಗೀಯ ಪೀಠದಲ್ಲಿ ತಡೆಯಾಜ್ಞೆ ತಂದು ಪರೀಕ್ಷೆ ಆರಂಭ ಮಾಡಿತ್ತು.

ಇದನ್ನೂ ಸಹ ಓದಿ: ಉಚಿತ ವಿದ್ಯುತ್‌ ನೀಡಲು ಕೇಂದ್ರದಿಂದ ಹೊಸ ಯೋಜನೆ; ಹೀಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ಈ ವಿಷಯಕ್ಕೆ ಕುರಿತಂತೆ ದ್ವಿಸದಸ್ಯ ಪೀಠದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ (Supreme court) ರುಪ್ಸಾ ಸಂಸ್ಥೆ ಅರ್ಜಿ ಸಲ್ಲಿಸಿತ್ತು. ಅಷ್ಟರೊಳಗೆ ಸರ್ಕಾರ 2 ವಿಷಯಗಳಿಗೆ ಪರೀಕ್ಷೆಯನ್ನು ನಡೆಸಿತ್ತು. ರುಪ್ಸಾ ಸಂಸ್ಥೆ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್, ವಿಚಾರಣೆ ಪೂರ್ಣ ಆಗುವ ತನಕ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ಕಾಯುವುದಕ್ಕೆ ಸೂಚಿಸಿತ್ತು.

ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಮೇಲ್ಮನವಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದೆ. ಬೋರ್ಡ್‌ ಎಕ್ಸಾಂ ಸೂಕ್ತವಲ್ಲ ಎಂದು ಏಕಸದಸ್ಯ ಪೀಠ ಆದೇಶ ಮಾಡಿತ್ತು. ಇದೀಗ ಬೋರ್ಡ್‌ ಪರೀಕ್ಷೆ ಸೂಕ್ತವೋ..? ಅಲ್ಲವೋ ಅನ್ನೋ ಬಗ್ಗೆ ವಿಭಾಗೀಯ ಪೀಠ ನಿರ್ಧಾರ ಪ್ರಕಟ ಮಾಡಲಿದೆ. ಆ ತೀರ್ಪಿನ ಬಳಿಕ ಪರೀಕ್ಷೆ ಭವಿಷ್ಯ ನಿರ್ಧಾರ ಆಗಲಿದೆ.

ಇತರೆ ವಿಷಯಗಳು

ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಕೆ! ಮೊದಲು ಅರ್ಜಿ ಸಲ್ಲಿಸಿದವರಿಗೆ 80% ಸಬ್ಸಿಡಿ

ನವೋದಯ ವಿದ್ಯಾಲಯದಲ್ಲಿ 1377 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ.! SSLC ಪಾಸಾಗಿದ್ರೆ ಸಾಕು ಅಪ್ಲೇ ಮಾಡಿ


Share

Leave a Reply

Your email address will not be published. Required fields are marked *