rtgh
Headlines

32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ.! ರಾಜ್ಯ ಸರ್ಕಾರದಿಂದ ಬಿಡುಗಡೆ

crop compensation
Share

ಹಲೋ ಸ್ನೇಹಿತರೇ, NDRF ಹಣ ಬಿಡುಗಡೆ ಆದ ತಕ್ಷಣ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿ ಮಾಡಲಾಗಿದೆ. ಈ ವರೆಗೂ 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ ಎಂದು ಸಿಎಂ ಹೇಳಿದ್ದಾರೆ. ಈಗಾಗಲೇ ಯಾರಿಗೆಲ್ಲಾ ಹಣ ಸಿಕ್ಕಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ.

crop compensation

NDRF ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿ ಮಾಡಲಾಗಿದೆ. ಇಂದಿನ ವರೆಗೂ 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರವನ್ನು ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ನಡೆಯುತ್ತಿದೆ.

ಹಲವು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೆ ಇದ್ದ ಮಳೆ ಆಧಾರಿತ ಬೆಳೆಗಳಿಗೆ ಪರಿಹಾರ ಧನ ವಿತರಿಸಲು & 2 ಲಕ್ಷ ಹೆಕ್ಟೇರ್‌ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಸಣ್ಣ & ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆದ ಜೀವನೋಪಾಯದ ನಷ್ಟಕ್ಕೆ ಪರಿಹಾರ ತಲಾ 3,000 ರೂ. ಪರಿಹಾರ ನೀಡಲೂ ತೀರ್ಮಾನಿಸಲಾಗಿದೆ.

ನೀರು & ಮೇವಿನ ನಿರ್ವಹಣೆಗಾಗಿ ಇಲ್ಲಿಯವರೆಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ 202 ಸಭೆಗಳನ್ನು ನಡೆಸಿದೆ & 462 ತಾಲೂಕು ಮಟ್ಟದ ಟಾಸ್ಕ್‌ಪೋರ್ಸ್‌ ಸಭೆಯನ್ನು ನಡೆಸಿದೆ. ನೀರಿನ ಸಮಸ್ಯೆಯಿರುವ 270 ಗ್ರಾಮಗಳಿಗೆ ಟ್ಯಾಂಕರ್ ಮುಖಾಂತರ & 594 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗಿದೆ. 153 ನಗರ ಪ್ರದೇಶದ ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ & 35 ವಾರ್ಡ್‌ಗಳಿಗೆ ಖಾಸಗಿ ಬೋರ್‌ವೆಲ್‌ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗಿದೆ.

ರಾಜ್ಯದ ಅವಶ್ಯಕತೆಯಿರುವ ವಿವಿಧ ಭಾಗಗಳಲ್ಲಿ 47 ಮೇವಿನ ಬ್ಯಾಂಕ್‌ಗಳನ್ನು & 28 ಕಡೆಗಳಲ್ಲಿ ಗೋಶಾಲೆಗಳನ್ನು ತೆರೆದು ಮೇವಿನ ಕೊರತೆ ನಿವಾರಿಸಲಾಗುತ್ತಿದೆ. ಈ ವೆಚ್ಚವನ್ನು ಭರಿಸಲು ಜಿಲ್ಲಾಧಿಕಾರಿಗಳು & ತಹಶೀಲ್ದಾರಗಳ ಖಾತೆಯಲ್ಲಿ ರೂ. 836 ಕೋಟಿ ಅನುದಾನ ಲಭ್ಯವಿದೆ ಎಂದು ಹೇಳಿದರು.

ಇತರೆ ವಿಷಯಗಳು

ರೈಲ್ವೆ ಪ್ರಯಾಣ ಸಮಯದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪು ಮಾಡ್ಬೇಡಿ.! ಬೀಳುತ್ತೆ ಭಾರೀ ದಂಡ

ದಿಢೀರನೆ ಪಿಯು ಕಾಲೇಜುಗಳು ಆರಂಭ!


Share

Leave a Reply

Your email address will not be published. Required fields are marked *