rtgh
Headlines

ಈ ಯೋಜನೆಯಡಿ ಇಂದು ಜಿಲ್ಲಾವಾರು ಪ್ರತಿ ರೈತರ ಖಾತೆಗೆ ಹಣ ಬಿಡುಗಡೆ

crop survey karnataka
Share

ಹಲೋ ಸ್ನೇಹಿತರೇ, ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ರಾಗಿ, ಜೋಳ & ಗ್ರಾಮ ಪಂಚಾಯಿತಿ ಮಟ್ಟಕ್ಕೆ ಭತ್ತ, ಮುಸುಕಿನ ಜೋಳ ಬೆಳೆಗಳು ಆಯ್ಕೆಯಾಗಿರುತ್ತವೆ. ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಮದ ಆಯ್ಕೆಯಾದ ಓರಿಯಂಟಲ್ ಜನರಲ್ ಇನ್ಶೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ ಅನುಷ್ಟಾನಗೊಳಿಸಲಾಗುವುದು. ರೈತರಿಗೆ ಮತ್ತೊಂದು ಸುವರ್ಣಾವಕಾಶ ಏನುದು ಎಂಬುದನ್ನು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ.

crop survey karnataka

ಶಿವಮೊಗ್ಗ: ರೈತರೇ ತಮ್ಮ ಜಮೀನುಗಳಲ್ಲಿ ಮೊಬೈಲ್ ಆಪ್ ಮೂಲಕ ರೈತರ ಸರ್ವೇ ನಂಬರ್ ವಾರು, ಹಿಸ್ಸಾವಾರು ಬೆಳೆ ವಿವರ ದಾಖಲಿಸುವ, ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರಸಹಿತ ‘ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ 2024-25’ ರಲ್ಲಿ ಅಪ್‌ಲೋಡ್ ಮಾಡಲು ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ತಿಳಿಸಿದ್ದಾರೆ.

ಜು.೨೩ ರಂದು ಜಿಲ್ಲಾದಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ೨೦೨೪ ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಬೆಳೆ ಸಮೀಕ್ಷೆ ಕಾರ್ಯಕ್ರಮದಲ್ಲಿ ಬೆಳೆ ವಿಮೆ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಬೆಳೆ ವಿಮೆಗಾಗಿ ನೋಂದಾಯಿಸಲು ಅಂತಿಮ ದಿನಾಂಕದ ಒಳಗೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವಂತೆ ರೈತರಲ್ಲಿ ಮನವಿ ಮಾಡಲಾಗಿದೆ.

ಬಿತ್ತನೆ ಅಥವಾ ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರನ್ನು ಬೆಳೆ ವಿಮೆ ಯೊಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು. ತದನಂತರ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೇ ಇದ್ದಲ್ಲಿ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕೆ ೭ ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ & ಆಧಾರ್ ಸಂಖ್ಯೆ ಸಹಿತ ತಮಗೆ ಹತ್ತಿರವಿರುವ ಬ್ಯಾಂಕ್/ಆರ್ಥಿಕ ಸಂಸ್ಥೆಗಳು, ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ, ಸಮೀಪವಿರುವ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕ ಮಾಡಿ. ವೆಬ್‌ಸೈಟ್ http://samrkshane.karnataka.gov.in ನಲ್ಲಿಯೂ ಸಹ ಮಾಹಿತಿ ಪಡೆದುಕೊಳ್ಳಬಹುದು ಎಂದು ಮಾಹಿತಿ ತಿಳಿಸಿದ್ದಾರೆ..

ಇತರೆ ವಿಷಯಗಳು

ದಿಢೀರನೇ ಚಿನ್ನದ ಬೆಲೆಯಲ್ಲಿ 6,000 ರೂ ಇಳಿಕೆ.! ಬಂಗಾರ ಕೊಳ್ಳುವವರಿಗೆ ಸುವರ್ಣಾವಕಾಶ

ಮಲೆನಾಡಿನಲ್ಲಿ ಮತ್ತೆ ಚುರುಕುಗೊಂಡ ಮಳೆ.! ಈ ಎಲ್ಲಾ ಜಿಲ್ಲೆಗಳಿಗೆ ಪ್ರವಾಹದ ಭೀತಿ


Share

Leave a Reply

Your email address will not be published. Required fields are marked *