ಹಲೋ ಸ್ನೇಹಿತರೇ, ಲೋಕಸಭಾ ಚುನಾವಣೆ ಘೋಷಣೆಗೆ ಕ್ಷಣಗಣನೆ ಶುರು ಹೊತ್ತಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ದೊಡ್ಡ ಸುದ್ದಿ ನೀಡಿದೆ. ತುಟ್ಟಿಭತ್ಯೆ ಏರಿಕೆಯ ಬಗ್ಗೆ ಮಹತ್ವ ಮಾಹಿತಿಯನ್ನು ನೀಡಲಾಗಿದೆ. ಸಿದ್ದರಾಮಯ್ಯ ಸರ್ಕಾರ ಏನು ಮಾಹಿತಿ ನೀಡಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.
ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.3.75ರಷ್ಟು ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಅದಲ್ಲದೇ ಜನವರಿ 1 ರಿಂದಲೇ ಈ ಆದೇಶ ಅನ್ವಯವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರ DA ಅನ್ನು ಶೇ.4ರಷ್ಟು ಏರಿಕೆ ಮಾಡಿ ಆದೇಶವನ್ನು ಹೊರಡಿಸಿದೆ.
ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳ್ಳೆ ಸುದ್ದಿ ನೀಡಿದೆ. ಇನ್ನು, ಕೇಂದ್ರ ವೇತನ ನೀತಿಯಂತೆ ವೇತನ ಪಡೆದುಕೊಳ್ಳಲು ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ವರ್ಷ 1792.71 ಕೋಟಿ ರೂ. ಹೆಚ್ಚುವರಿ ಹೊರೆ ಬೀಳುತ್ತದೆ ಎಂದು ತಿಳಿಸಲಾಗಿದೆ.
ಸದ್ಯ ರಾಜ್ಯ ಸರ್ಕಾರಿ ನೌಕರರಿಗೆ ಶೇ.38.75ರಷ್ಟು ತುಟ್ಟಿ ಭತ್ಯೆ ನೀಡುತ್ತಿದ್ದು. ಅದನ್ನು ಈಗ ಶೇ.42.5ಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧಾರ ಮಾಡಿದೆ. ಅದರಂತೆ ಕೇಂದ್ರ ವೇತನ ನೀತಿಯಂತೆ ವೇತನ ಪಡೆಯುವವರ ತುಟ್ಟಿ ಭತ್ಯೆಯನ್ನು ಶೇ.46 ರಿಂದ ಶೇ.50ಕ್ಕೆ ಹೆಚ್ಚಿಸುವುದಾಗಿ ಸರ್ಕಾರ ತಿಳಿಸಿದೆ. ಜನವರಿ 1 ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಪೂರ್ವಾನ್ವಯ ಆಗಲಿದೆ ಎಂದು ಸರ್ಕಾರ ಆದೇಶವನ್ನು ಹೊರಡಿಸಿದೆ.
Contents
ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಬೇಡಿಕೆ!
ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರದ ಮುಂದೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಏರಿಸಿ, ಜನವರಿ 1 ರಂತೆ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿದೆ. ಅದೇ ರೀತಿ ಕರ್ನಾಟಕದಲ್ಲೂ ತುಟ್ಟಿ ಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ನೌಕರರ ಸಂಘ ಪತ್ರವನ್ನು ಬರೆದು ಮನವಿ ಸಲ್ಲಿಕೆ ಮಾಡಿದೆ.
ಕೇಂದ್ರದಿಂದಲೂ ತುಟ್ಟಿ ಭತ್ಯೆ ಹೆಚ್ಚಳ
ಕಳೆದ ವಾರವಷ್ಟೇ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯು ನಡೆದಿತ್ತು. ಸಭೆಯಲ್ಲಿ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಕೇಂದ್ರ ಸರ್ಕಾರ ಶೇ.4ರಷ್ಟು ಹೆಚ್ಚಳ ಮಾಡಲು ಅನುಮೋದನೇ ನೀಡಿ ಕೇಂದ್ರ ಸರ್ಕಾರವೂ DA ಹೆಚ್ಚಳ ಮಾಡಿದ ಬಳಿಕ ರಾಜ್ಯ ಸರ್ಕಾರವು ಡಿಎ ಹೆಚ್ಚಳ ಮಾಡಲಿದೆ. ಅದರಂತೆ ಈಗ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಏರಿಕೆ ಮಾಡಿದೆ.
ಇತರೆ ವಿಷಯಗಳು
7 ನೇ ಕಂತಿನ 2,000 ರೂ. ಹಣ ಜಮಾ ಯಾವಾಗ? ಇಲ್ಲಿದೆ DBT ಸ್ಟೇಟಸ್ ಚೆಕ್ ಮಾಡುವ ಲಿಂಕ್
ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ.! ಮಾರ್ಚ್ 15 ಕೊನೆ ದಿನಾಂಕ ಬೇಗ ಅರ್ಜಿ ಹಾಕಿ