ಹಲೋ ಸ್ನೇಹಿತರೆ, ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡುತ್ತಿದ್ದೂ, ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ನೀವೂ ಲಾಭ ಪಡೆಯಲು ಏನು ಮಾಡಬೇಕು? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ.
ಪ್ರಸಕ್ತ 2024-25 ಸಾಲಿನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರೈತ ಮಹಿಳೆಯನ್ನು ಹೈನುಗಾರಿಕೆ ಕ್ಷೇತ್ರದಲ್ಲಿ ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ 6% ರ ಬಡ್ಡಿಯಲ್ಲಿ ಸಹಾಯಧನ ನೀಡಲಾಗುತ್ತದೆ.
ಈ ವರ್ಷದ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್‍ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುಭವಿಗಳಿಗೆ ಗರಿಷ್ಠ 65,000 ರೂ. ಸಾಲದ ಮೊತ್ತಕ್ಕೆ ಶೇ.6 ಬಡ್ಡಿಯಲ್ಲಿ ಸಹಾಯಧನ 3625 ರೂ. ನೀಡಲಾಗುತ್ತದೆ. ಪ್ರತಿ ಹಸು/ಎಮ್ಮೆ ಘಟಕದ ಮೊತ್ತ ರೂ. 65000, ಶೇ.6 ವಾರ್ಷಿಕ ಬಡ್ಡಿ ಸಹಾಯಧನದ ಪ್ರತಿ ಫಲಾನುಭವಿಗೆ ಸಿಗತ್ತೆ ಗರಿಷ್ಟ ರೂ.3624.50/-(3625),
ಆಸಕ್ತ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ಇನ್ನಿತರ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಅಥವಾ ಸಂಬಂಧಪಟ್ಟ ಪಶು ಆಸ್ಪತ್ರೆಗಳನ್ನು ಸಂರ್ಪಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಇತರೆ ವಿಷಯಗಳು:
ಯುವನಿಧಿ ಫಲಾನುಭವಿಗಳು ತಕ್ಷಣ ಈ ಕೆಲಸ ಮಾಡುವಂತೆ ಸೂಚನೆ!
ಮಳೆ ಅಬ್ಬರದ ಮಧ್ಯೆ ಆಭರಣ ಪ್ರಿಯರಿಗೆ ಶುಭ ಸುದ್ದಿ! ಇಳಿಕೆಯಾಯ್ತು ಚಿನ್ನದ ಬೆಲೆ