ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಆಂಧ್ರಪ್ರದೇಶ ಸರ್ಕಾರದ ಮಾದರಿಯನ್ನು ಅನುಸರಿಸಲು ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್ ಎಸ್ ಎಲ್ ಸಿ), ಸೆಕೆಂಡ್ ಪ್ರಿ-ಯೂನಿವರ್ಸಿಟಿ ಕೋರ್ಸ್ (ಪಿಯುಸಿ) ಆಂಧ್ರ ಮಾದರಿಯ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಹೊಸ ಹುರುಪು ನೀಡಿದೆ.
ಕರ್ನಾಟಕದ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮುಂದೇನು ಮಾಡಬೇಕು ಎಂಬ ಗೊಂದಲಕ್ಕೆ ಸಿಲುಕಿದ್ದರು. ಕಳೆದ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿತ್ತು. ಆದರೆ, ಫಲಿತಾಂಶದಲ್ಲಿ ಅಂತಹ ವ್ಯತ್ಯಾಸ ಕಂಡುಬಂದಿಲ್ಲ. ಈ ಕಾರಣದಿಂದ ಮಕ್ಕಳು ಶಿಕ್ಷಣದಿಂದ ದೂರ ಉಳಿಯಬಾರದು ಎಂದು ರಾಜ್ಯ ಶಿಕ್ಷಣ ಇಲಾಖೆ ಹೊಸ ಯೋಜನೆ ರೂಪಿಸಿದೆ. ಇದರಲ್ಲಿ ಅನುತ್ತೀರ್ಣರಾದವರು ಸಹ ಶಾಲೆಗೆ ಹೋಗಬಹುದು.
ಇದನ್ನೂ ಸಹ ಓದಿ: ಸೆ. 1 ರಿಂದ ದೇಶದ್ಯಾಂತ ಹೊಸ ಬದಲಾವಣೆ! 6 ಹೊಸ ನಿಯಮಗಳು ಜಾರಿ
ಈ ವರ್ಷದಿಂದ ಎಸ್ ಎಸ್ ಎಲ್ ಸಿ ಸೇರಿದಂತೆ ಪ್ರೌಢ ಶಿಕ್ಷಣದವರೆಗೆ ಅನುತ್ತೀರ್ಣರಾದರೂ ಮುಂದಿನ ತರಗತಿಗೆ ಹೋಗಲು ಅವಕಾಶ ಕಲ್ಪಿಸಲು ಇಲಾಖೆ ಸಿದ್ಧವಾಗಿದೆ. ಈ ಮೂಲಕ ಆಂಧ್ರಪ್ರದೇಶದ ಮಾದರಿಯನ್ನು ಅನುಸರಿಸಲು ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಪ್ರವೇಶ ಪಡೆಯಲು ಶಾಲಾ ಶಿಕ್ಷಣ ಇಲಾಖೆ ಮೊದಲ ಬಾರಿಗೆ ವಿನೂತನ ಪ್ರಯತ್ನವಾಗಿದೆ.
ಪ್ರತಿ ವರ್ಷ ಕನಿಷ್ಠ ಒಂದು ಲಕ್ಷ ವಿದ್ಯಾರ್ಥಿಗಳು ಬಿಡುತ್ತಾರೆ. ವಿದ್ಯಾರ್ಥಿಗಳು ಹೊರಗುಳಿಯದಂತೆ ಈ ವಿಶೇಷ ಮಾದರಿಯನ್ನು ಜಾರಿಗೆ ತರಲು ಚಿಂತಿಸಲಾಗಿದೆ. ಇದರೊಂದಿಗೆ ಸಾಕ್ಷರತೆ ಪ್ರಮಾಣ ಹೆಚ್ಚಿಸಲು ಶಿಕ್ಷಣ ಇಲಾಖೆ ಮಾಸ್ಟರ್ ಪ್ಲಾನ್ ಮಾಡಿದೆ. ನೀವು ಅನುತ್ತೀರ್ಣರಾದರೂ, ಮತ್ತೆ ಪ್ರವೇಶ ಪಡೆಯಲು ನಿಮಗೆ ಅವಕಾಶ ನೀಡಲಾಗುತ್ತದೆ. ಶಾಲೆಯು ವಿಫಲವಾದ ವಿಷಯಕ್ಕೆ ಮಾತ್ರ ಹಾಜರಾಗಬಹುದು ಅಥವಾ ಪರೀಕ್ಷೆಯನ್ನು ಸಂಪೂರ್ಣವಾಗಿ ಮರುಪಡೆಯಬಹುದು.
ಇದು ವಿದ್ಯಾರ್ಥಿಯ ಆಯ್ಕೆಯಾಗಿದೆ. ಸಾಮಾನ್ಯ ವಿದ್ಯಾರ್ಥಿಗಳಿಗೆ ಸಿಗುವ ಎಲ್ಲಾ ಸೌಲಭ್ಯಗಳು ಈ ವಿದ್ಯಾರ್ಥಿಗಳಿಗೆ ಸಿಗುತ್ತವೆ. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ದಾಖಲಾಗಿ ಪಾಠ ಮಾಡಲು ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ. ಆಂಧ್ರಪ್ರದೇಶದಲ್ಲಿ ಈಗಾಗಲೇ ಇಂತಹ ನಿಯಮವಿದ್ದು, ಇದೀಗ ಕರ್ನಾಟಕದಲ್ಲೂ ಪ್ರಥಮ ಬಾರಿಗೆ ಇಲಾಖೆ ಜಾರಿಗೊಳಿಸಿದೆ.
ಈ ರೀತಿಯ ನಿಯಮಗಳಿಂದ ಹೊರಗುಳಿದ ವಿದ್ಯಾರ್ಥಿಗಳು ಮತ್ತೆ ಶಿಕ್ಷಣದಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುತ್ತದೆ. ಮಕ್ಕಳು ಶಾಲೆಯಿಂದ ಹೊರಗುಳಿಯಬಾರದು ಎಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಈ ಹೊಸ ಪ್ರಯೋಗ ಮಾಡುತ್ತಿದೆ. ಕೋಚಿಂಗ್ ಸೆಂಟರ್ ಗಳ ಸೌಲಭ್ಯವೇ ಇಲ್ಲದ ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗುವ ನಿಯಮವಾದರೂ ಜಾರಿಯಾಗುವುದೇ ಕಾದು ನೋಡಬೇಕಿದೆ.
ಇತರೆ ವಿಷಯಗಳು
ʻHSRPʼ ನಂಬರ್ ಪ್ಲೇಟ್ ಅಳವಡಿಸಲು ಸೆ.15 ಕೊನೆಯ ದಿನ! ಇಲ್ಲದಿದ್ದರೆ ದಂಡ ಫಿಕ್ಸ್
ಮಹಿಳೆಯರಿಗೆ ಸಿಹಿ ಸುದ್ದಿ! 50 ಸಾವಿರ ರೂ. ಸಾಲದ ಜೊತೆ 25 ಸಾವಿರ ಸಬ್ಸಿಡಿ