ಹಲೋ ಸ್ನೇಹಿತರೇ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ ಎಲ್ಲಾ ಮಕ್ಕಳಿಗೂ ಮುಂದಿನ ಮೂರು ವರ್ಷಗಳವರೆಗೆ ವಾರದ ನಾಲ್ಕು ದಿನಗಳ ಕಾಲ ಉಚಿತ ಮೊಟ್ಟೆ ನೀಡಲು ಅಜೀಂಪ್ರೇಮ್‍ಜಿ ಫೌಂಡೇಶನ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಲಾಗಿದ್ದ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯಸರ್ಕಾರ ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸುವ ಉದ್ದೇಶದಿಂದ ಆರಂಭದಲ್ಲಿ ಒಂದು ದಿನ ಅನಂತರ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎರಡು ದಿನ ಉಚಿತವಾಗಿ ಮೊಟ್ಟೆ ನೀಡಲಾಗುತ್ತಿತ್ತು.
ಅಜೀಂಪ್ರೇಮ್‍ಜಿ ಯವರು ದೊಡ್ಡ ಮನಸ್ಸು ಮಾಡಿ 1,500 ಕೋಟಿ ರೂ. ವೆಚ್ಚದಲ್ಲಿ ಉಳಿದ ನಾಲ್ಕು ದಿನಗಳ ಕಾಲವೂ ಮಕ್ಕಳಿಗೆ ಉಚಿತವಾಗಿ ಮೊಟ್ಟೆ ನೀಡಲು ಮುಂದೆ ಬಂದಿದ್ದಾರೆ. ಇದರಿಂದ ರಾಜ್ಯದ 55 ಲಕ್ಷ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಅಜೀಂಪ್ರೇಮ್‍ಜಿ ಕುಟುಂಬ ಅನೇಕ ದಾನಧರ್ಮಗಳನ್ನು ಮಾಡಿದೆ. ಅವರ ದೊಡ್ಡತನದಿಂದಾಗಿ ಮಕ್ಕಳಿಗೆ ಪುಷ್ಕಳ ಆಹಾರ ದೊರೆಯುವಂತಾಗಿದೆ ಎಂದರು. ಮಕ್ಕಳು ಆರೋಗ್ಯವಂತರಾಗಿರಬೇಕು. ದೈಹಿಕ ಸದೃಢತೆ ಇದ್ದಾಗ ಜ್ಞಾನವಿಕಾಸವಾಗುತ್ತದೆ. ಬಡವರು, ಶ್ರೀಮಂತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಎಲ್ಲಾ ಮಕ್ಕಳಿಗೂ ಗುಣಮಟ್ಟದ ಸಮಾನ ಶಿಕ್ಷಣ ಸಿಗುವಂತಾಗಬೇಕು.
ಇದನ್ನೂ ಸಹ ಓದಿ : ಈ ಬ್ಯಾಂಕಿನಲ್ಲಿ ಖಾತೆಯಿದ್ದ ರೈತರಿಗೆ ಗುಡ್‌ನ್ಯೂಸ್.! ಇಂದೇ ಬ್ಯಾಂಕ್‌ಗೆ ಭೇಟಿ ನೀಡಿ
ಈ ನಿಟ್ಟಿನಲ್ಲಿ ಈ ಹಿಂದೆ ತಮ್ಮ ಮೊದಲ ಸರ್ಕಾರದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಹಾಗೂ ಸಾಕ್ಸ್‍ಗಳನ್ನ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಶ್ರೀಮಂತರ ಮಕ್ಕಳು ಸಮವಸ್ತ್ರ, ಶೂ, ಸಾಕ್ಸ್ ಧರಿಸಿ ಶಾಲೆಗೆ ಬರುತ್ತಾರೆ. ಬಡವರ ಮಕ್ಕಳಲ್ಲಿ ಬೇಧಭಾವ ಸೃಷ್ಟಿಸಬಾರದು, ಜಾತಿಯ ಸೋಂಕು ಇರಬಾರದು, ಜಾತ್ಯಾತೀತರಾಗಿ ಬೆಳೆಯುವಂತ ವಾತಾವರಣ ನಿರ್ಮಾಣವಾಗಬೇಕು ಎಂದು ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.
ಉಪಹಾರ, ಊಟ ಇಲ್ಲದೇ ಎಷ್ಟೋ ಮಕ್ಕಳು ಶಾಲೆಗೆ ಬರುವ ಪರಿಸ್ಥಿತಿ ಇತ್ತು. ಅದಕ್ಕಾಗಿ ಹಾಲು, ಮಧ್ಯಾಹ್ನದ ಬಿಸಿಯೂಟ ಜಾರಿಗೆ ತರಲಾಯಿತು. ಮೊಟ್ಟೆ ನೀಡುವ ಕಾರ್ಯಕ್ರಮವೂ ಕೂಡ ಹಂತಹಂತವಾಗಿ ಜಾರಿಗೆ ಬಂದಿತು ಎಂದು ವಿವರಿಸಿದರು.
ಇತರೆ ವಿಷಯಗಳು:
ಅಂಚೆ ಇಲಾಖೆಯಲ್ಲಿ 44200 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ..! 10th ಪಾಸ್ ಆಗಿದ್ರೆ ಸಾಕು
ʻಡಿಗ್ರಿʼ ಪಾಸಾದವರಿಗೆ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ! 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ