ಹಲೋ ಸ್ನೇಹಿತರೆ, ಕರ್ನಾಟಕ ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿ ಆರಂಭವಾಗಿದ್ದು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವ ಉದ್ದೇಶದಿಂದ ಸರ್ಕಾರ ದ್ವಿಭಾಷಾ ಬೋಧನಾ ವಿಧಾನವನ್ನು ಅಳವಡಿಸಲು ನಿರ್ಧರಿಸಿದ್ದು ಶಿಕ್ಷಣ ಕ್ಷೇತ್ರದಲ್ಲಿ ಇದೊಂದು ಐತಿಹಾಸಿಕ ಹೆಜ್ಜೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ 872 ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಕನ್ನಡ ಮತ್ತು ಆಂಗ್ಲ ಮಾಧ್ಯಮ ಎರಡು ತರಗತಿಗಳನ್ನು ಆರಂಭಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಭದ್ರಬುನಾದಿ ಹಾಕಲಿದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಈ ದ್ವಿಭಾಷಾ ಬೋಧನಾ ವ್ಯವಸ್ಥೆಯು ಹೆಚ್ಚಿನ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಕಲ್ಯಾಣ ಭಾಗದಲ್ಲಿ ಕಲಿಕಾ ಸೌಲಭ್ಯ ವಂಚಿತ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಆದ್ಯತೆ ನೀಡುವುದರ ಮೂಲಕ, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ತಿಳಿಸಲಾಗಿದೆ.
ಇತರೆ ವಿಷಯಗಳು:
ನಕಲಿ ರೇಷನ್ ಕಾರ್ಡುಗಳಿಗೆ ಬ್ರೇಕ್! ಖಡಕ್ ವಾರ್ನಿಂಗ್ ಕೊಟ್ಟ ಸರ್ಕಾರ
ಮದ್ಯ ಪ್ರಿಯರಿಗೆ ಕಾದಿದೆ ಬಿಗ್ ಶಾಕ್.! ಒಂದೊಂದು ಬ್ರಾಂಡ್ ದರ ಕೇಳಿದ್ರೆ ತಕ್ಷಣ ಇಳಿಯತ್ತೆ ಕಿಕ್