ಹಲೋ ಸ್ನೇಹಿತರೆ, ಸಾರ್ವಜನಿಕ ಸಾರಿಗೆ ಸಂಸ್ಥೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣವನ್ನು ಘೋಷಿಸಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರಯಾಣಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಎನ್‌ಡಬ್ಲ್ಯುಕೆಆರ್‌ಟಿಸಿ ತಿಳಿಸಿದೆ. ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್ ಬಸ್‌ಗಳಲ್ಲಿ ತಮ್ಮ ಮನೆಯಿಂದ ಗೊತ್ತುಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಮತ್ತು ಹಿಂತಿರುಗಲು ಉಚಿತವಾಗಿ ಬಸ್ ಆಯೋಜಿಸಲಾಗುವುದು.
KSRTC ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ PUC ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ ಕಲ್ಪಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ KSRTCಗೆ ಮನವಿ ಸಲ್ಲಿಸಿದ್ದರು.
ಇದನ್ನು ಓದಿ: ರೈಲು ನಿಲ್ದಾಣದಲ್ಲೂ ಸಿಗುತ್ತೆ ಅಗ್ಗದ ಬೆಲೆಗೆ ಅಕ್ಕಿ, ಗೋಧಿ ಹಿಟ್ಟು: 500 ನಿಲ್ದಾಣಗಳಲ್ಲಿ ಈ ಸೌಲಭ್ಯ ಜಾರಿ
ಇದನ್ನು ಪುರಸ್ಕರಿಸಿರುವ ಕೆಎಸ್ಆರ್ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿ ಕೊಡಲಾಯಿತು ಹಾಗೆಯೇ SSLC ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪ್ರಯಾಣ ಕಲ್ಪಿಸಿ ಕೊಡಲಾಗುವುದು.
ಬೆಂಗಳೂರಿನ ಎಲ್ಲ SSLC ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಮುಚ್ಚುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. 25-03-23 ರಿಂದ 06-04-23 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸುಸೂತ್ರವಾಗಿ ಬರೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ವಿದ್ಯಾರ್ಥಿ, ಪೋಷಕರ ಸಹಾಯಕ್ಕಾಗಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹಾರ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆ ಕುರಿತಾದ ಯಾವುದೇ ಗೊಂದಲ ಮಾಹಿತಿಗೆ 080 -23310075/76 ಸಂಪರ್ಕಿಸಬಹುದಾಗಿದೆ.
ಇತರೆ ವಿಷಯಗಳು:
SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಬಸ್ ಪ್ರಯಾಣಕ್ಕೆ ಅವಕಾಶ!
ಎಲ್ಲಾ ವ್ಯಾಪಾರಸ್ಥರಿಗೆ ಮೋದಿ ಯೋಜನೆ!! ಸಿಗತ್ತೆ 3 ಲಕ್ಷ ಸಾಲ 15,000 ಆರ್ಥಿಕ ನೆರವು