rtgh
Headlines

ಸ್ಪರ್ಧಾತ್ಮಕ ಪರೀಕ್ಷೆಗೆ ಸರ್ಕಾರದಿಂದ ಉಚಿತ ತರಬೇತಿ.! ವಿದ್ಯಾರ್ಥಿಗಳಿಗೆ ಅಪ್ಲೇ ಮಾಡುವಂತೆ ಸೂಚನೆ

free coaching for students
Share

ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಕರ್ನಾಟಕ ಸರ್ಕಾರವು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

free coaching for students

ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ನಿರ್ದೇಶನಲಯವು, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ ಮಾಡಲಾಗಿದೆ.

ಆಯ್ಕೆಯಾದವರಿಗೆ ಸಿಗುವ ಸವಲತ್ತುಗಳೇನು?

ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಆರ್ಥಿಕ ಹೊರೆಯನ್ನು ತಪ್ಪಿಸಲು ಹಾಗೂ ಕಲಿಕಾ ಪೂರಕ ವಾತಾವರಣವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲು ಬೆಂಗಳೂರು ನಗರದಲ್ಲಿರುವಂತಹ ಹಜ್ ಭವನದಲ್ಲಿ 10 ತಿಂಗಳ ವಸತಿ ಸಹಿತ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತದೆ.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಈ ಯೋಜನೆಯನ್ನು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಸಹಾಯವಾಗುವಂತೆ ಜಾರಿಗೆ ತಂದಿದ್ದು, ಇದರಲ್ಲಿ ಆಯ್ಕೆ ಆದವರಿಗೆ 10 ತಿಂಗಳ ವಸತಿ ಸಹಿತ UPSC /KPSC ಪರೀಕ್ಷೆಗಳಿಗೆ ಉಚಿತ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳಿಂದ ನೀಡಲಾಗುತ್ತದೆ.

ಯಾರು ಅರ್ಜಿ ಸಲ್ಲಿಸಬಹುದು?

 • ಕರ್ನಾಟಕದ ಕಾಯಂ ನಿವಾಸಿಯಾಗಿದ್ದು, ಯೋಜನೆಗೆ ಅರ್ಜಿ ಸಲ್ಲಿಸಲು ಅಲ್ಪಸಂಖ್ಯಾತ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳು ಉಚಿತ ಪರೀಕ್ಷಾ ಪೂರ್ವ ತರಬೇತಿಗಳಿಗೆ ಆನ್ಲೈನ್ ಮೂಲಕ ಅಪ್ಲೇ ಮಾಡಬಹುದು. 
• ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ವಯಸ್ಸು 21 ವರ್ಷ ಗರಿಷ್ಠ ವಯಸ್ಸು 35 .
• ಸರ್ಕಾರದಿ ಕೆಲಸದಲ್ಲಿರುವವರು ಇದಕ್ಕೆ ಅರ್ಹರಾಗಿರುವುದಿಲ್ಲಾ.

ಹೇಗೆ ಅರ್ಜಿ ಸಲ್ಲಿಸಬೇಕು?

ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಸಲ್ಲಿಸುವವರು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು : 

• ಆನ್ಲೈನ್ ನೋಂದಣಿಗೆ ಆರಂಭದ ದಿನಾಂಕ – 24 ಜುಲೈ 2024
• ಆನ್ಲೈನ್ ನೊಂದಣಿಗೆ ಕೊನೆ ದಿನಾಂಕ – 31 ಆಗಸ್ಟ್ 2024

ಪ್ರಮುಖ ಲಿಂಕ್ ಗಳು : 

• ಅಧಿಕೃತ ಪ್ರಕಟಣೆ – Download Now
• ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್ : Click here

ಇತರೆ ವಿಷಯಗಳು

ಅಂಗನವಾಡಿ ಸಿಬ್ಬಂದಿ ವರ್ಗದವರಿಗೆ ಗುಡ್ ನ್ಯೂಸ್: ಗೌರವ ಧನ ದಿಢೀರ್ ಹೆಚ್ಚಳ!

ಆನ್‌ಲೈನ್‌ನಲ್ಲಿ ಹಣ ವರ್ಗಾವಣೆ.. ಆರ್‌ಬಿಐ ಮಹತ್ವದ ನಿರ್ಧಾರ..!


Share

Leave a Reply

Your email address will not be published. Required fields are marked *