rtgh
Headlines

30 ದಿನ ಉಚಿತ ಹೊಲಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ! ಆಸಕ್ತ ಮಹಿಳೆಯರು ಅರ್ಜಿ ಹಾಕಿ

Free sewing machine training
Share

ಹಲೋ ಸ್ನೇಹಿತರೇ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯವತಿಯಿಂದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

Free sewing machine training

ತರಬೇತಿ ಅವಧಿ ಎಂದಿನಿಂದ ಆರಂಭವಾಗಲಿದೆ? ಯಾರೆಲ್ಲಾ ತರಬೇತಿಯಲ್ಲಿ ಭಾಗವಹಿಸಬಹುದು? ತರಬೇತಿ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್ ನಿಂದ ಯಾವೆಲ್ಲಾ ಯೋಜನೆಯಡಿ ಸಾಲ ಪಡೆಯಬಹುದಾಗಿದೆ.

30 ದಿನಗಳ ಉಚಿತ ಹೊಲಿಗೆ ತರಬೇತಿಯಲ್ಲಿ ಯಾರೆಲ್ಲಾ ಭಾಗವಹಿಸಬಹುದಾಗಿದೆ?

  • 18 ರಿಂದ 45 ವರ್ಷದ ವಯೋಮಾನದವರು ಈ ತರಬೇತಿಯಲ್ಲಿ ಭಾಗವಹಿಸಲು ಅರ್ಹರು.
  • ಕನ್ನಡ ಓದು ಬರಹ ಕಲಿತಿರಬೇಕು.
  • ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರಬೇಕು.
  • ಗ್ರಾಮೀಣ ಭಾಗದ BPL ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖ ಮಾಡಲಾಗಿದೆ.

ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿದೆ

ತರಬೇತಿಯು ಒಟ್ಟು 30 ದಿನ ನಡೆಯಲಿದೆ ತರಬೇತಿ ಭಾಗವಹಿಸುವವರಿಗೆ ಉಚಿತ ವಸತಿ & ಊಟದ ವ್ಯವಸ್ಥೆ ಇರುತ್ತದೆ..

ತರಬೇತಿ ಆರಂಭವಾಗುವ ದಿನ:

18 ಮಾರ್ಚ್ 2024 ರಿಂದ ಈ ತರಬೇತಿ ಪ್ರಾರಂಭವಾಗಿ 18 ಏಪ್ರಿಲ್ 2024 ಕ್ಕೆ ಮುಕ್ತಾಯವಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಕುಮಟಾ ಕೇಂದ್ರದ ಈ 9449860007, 9538281989, 9916783825, 8880444612 ಮೊಬೈಲ್ ನಂಬರ್‌ಗೆ ಕರೆ ಮಾಡಿ ಅಗತ್ಯ ವಿವರಗಳನ್ನು ಒದಗಿಸಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ತರಬೇತಿ ಆರಂಭವಾಗುವ ದಿನ ನಿಮ್ಮ ಅಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್, ಪೋಟೋ ತೆಗೆದುಕೊಂಡು ನೇರವಾಗಿ ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.

ತರಬೇತಿ ನಡೆಯುವ ಸ್ಥಳ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆ-ಅಂಚೆ ಸಂಖ್ಯೆ 581343

ಯಾವೆಲ್ಲಾ ಯೋಜನೆಯಡಿ ಸಾಲ ಪಡೆಯಬಹುದು.

ಈ ಕೇಂದ್ರದಲ್ಲಿ ತರಬೇತಿ ಪಡೆಯುವ ಅವಧಿಯಲ್ಲಿ ಯಾವೆಲ್ಲಾ ಯೋಜನೆಯಡಿ ನೀವು ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಬ್ಸಿಡಿಯಲ್ಲಿ ಸಾಲವನ್ನು ಪಡೆಯಬಹುದು ಎಂದು ತಿಳಿಸಲಾಗುತ್ತದೆ ಜೊತೆಗೆ ಸಾಲಕ್ಕೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಸಹ ಒದಗಿಸಲಾಗುತ್ತದೆ. ಒಂದಿಷ್ಟು ಯೋಜನೆಗಳ ಕುರಿತು ಈ ಕೆಳಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ:

ಈ ವರ್ಷದಿಂದ ಜಾರಿಗೆ ಬಂದಿರುವ ಜನಪ್ರಿಯ ಯೋಜನೆಯಲ್ಲಿ ಈ ಯೋಜನೆಯು ಒಂದಾಗಿದೆ ಸ್ವ-ಉದ್ಯೋಗ ಆರಂಭಿಸಲು ಸಬ್ಸಿಡಿಯಲ್ಲಿ ಬ್ಯಾಂಕ್ ಮೂಲಕ ಶೇ 5% ಬಡ್ಡಿಯಲ್ಲಿ 1 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ

2) PMEGP- ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ:

ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ(PMEGP) ಈ ಯೋಜನೆಯ ಮೂಲಕವು ನೀವು ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಶೇ 35 ಸಬ್ಸಿಡಿಯಲ್ಲಿ ಬ್ಯಾಂಕ್ ಮೂಲಕ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. 

ಇತರೆ ವಿಷಯಗಳು

ಇಂದು ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ರಣಕಹಳೆ: 2.5 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ

ಬ್ಯಾಂಕ್ ನಲ್ಲಿ ಸಹಾಯಕ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಪದವಿ ಪಾಸ್‌ ಆಗಿದ್ರೆ ಸಾಕು


Share

Leave a Reply

Your email address will not be published. Required fields are marked *