rtgh
Headlines

ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌! ಉಚಿತ ಶೂ, ಸಾಕ್ಸ್‌ ವಿತರಣೆಗೆ ಗ್ರೀನ್‌ ಸಿಗ್ನಲ್

free shoes socks for students
Share

ಹಲೋ ಸ್ನೇಹಿತರೇ, 2024-25ನೇ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತವಾಗಿ ಒದಗಿಸಲಾಗುತ್ತಿರುವ ಶೂ ಮತ್ತು ಸಾಕ್ಸ್ ಖರೀದಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಶಿಕ್ಷಣ ಇಲಾಖೆಯ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ಓದುತ್ತಿರುವ ಅಂದಾಜು 42.65 ಲಕ್ಷ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಒಟ್ಟು ರೂ.121.00 ಕೋಟಿಗಳ ವೆಚ್ಚದಲ್ಲಿ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು ಅಥವಾ ಪಾದರಕ್ಷೆ ನೀಡಲಾಗುತ್ತದೆ.

free shoes socks for students

ಷರತ್ತುಗಳು:-

1. ಎಲ್ಲಾ ವಿದ್ಯಾರ್ಥಿಗಳ ಪಾದರಕ್ಷೆಗಳ ಅಳತೆ ದಾಖಲಿಸಿ, ಉತ್ತಮ ಗುಣಮಟ್ಟದ ಪಾದರಕ್ಷೆಯನ್ನು ಸ್ಥಳೀಯವಾಗಿ ಖರೀದಿಸಿ, ವಿತರಣೆ ಮಾಡುವ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲೆಯ ಶಾಲಾಭಿವೃದ್ಧಿ ಹಾಗೂ ಎಸ್.ಡಿ.ಎಂ.ಸಿ ಸಮಿತಿಗೆ ವಹಿಸುವುದು.

2. ಒಂದು ಜೊತೆ ಕಪ್ಪು ಬಣ್ಣದ ಶೂ ಗಳನ್ನು ಹಾಗೂ ಎರಡು ಜೊತೆ ಬಿಳಿ ಬಣ್ಣದ ಸಾಕ್ಸ್ಗಳನ್ನು ಖರೀದಿಸಿ ವಿತರಿಸುವುದು. ಸ್ಥಳೀಯ ವಾತಾವರಣಕ್ಕೆ ಅನುಗುಣವಾಗಿ ಶೂ ಮತ್ತು ಸಾಕ್ಸ್ ಗಳ ಬದಲಾಗಿ ಪಾದರಕ್ಷೆಗಳನ್ನು ಖರೀದಿಸಿ ವಿತರಿಸುವುದು.

3. ಶೂ ಮತ್ತು ಸಾಕ್ಸ್ಗಳ ಖರೀದಿ ಪ್ರಕ್ರಿಯೆ ಪ್ರಾರಂಭಿಸುವ ಮುನ್ನ ಎಸ್.ಡಿ.ಎಂ.ಸಿ.ಯು ಕೆಳಕಂಡಂತೆ ಖರೀದಿ ಸಮಿತಿಯನ್ನು ರಚಿಸತಕ್ಕದ್ದು.

4. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಸಭೆ ನಡೆಸಿ ಶೂ ಮತ್ತು ಸಾಕ್ಸ್ ಅಥವಾ ಪಾದರಕ್ಷೆ ಖರೀದಿ ಸಮಿತಿಯ ಸದಸ್ಯರನ್ನು ಆಯ್ಕೆಗೊಳಿಸಬೇಕು. ಈ ಉದ್ದೇಶಕ್ಕಾಗಿ ನಡೆಸುವ ಎಸ್.ಡಿ.ಎಂ.ಸಿ. ಸಭೆಯಲ್ಲಿ ಕನಿಷ್ಟ ಅರ್ಧದಷ್ಟು ಸದಸ್ಯರು ಹಾಜರಿರತಕ್ಕದ್ದು ಹಾಗೂ ಸಮಿತಿಯ ನಡಾವಳಿಯನ್ನು ವಲಯ ಸಂಪನ್ಮೂಲ ವ್ಯಕ್ತಿಗಳು ಅಥವಾ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು (ಬಿ.ಆರ್.ಪಿ ಅಥವಾ ಸಿ.ಆರ್.ಪಿ) ಇಲಾಖೆಯ ಅಂತರ್ಜಾಲ ತಾಣದಲ್ಲಿ ದಾಖಲಿಸತಕ್ಕದ್ದು.

ಇದನ್ನೂ ಸಹ ಓದಿ : ಕಡಿಮೆ ಜಮೀನು ಹೊಂದಿರುವರಿಗೆ ಗುಡ್‌ ನ್ಯೂಸ್! ಸರ್ಕಾರದಿಂದ ಖಾತೆಗೆ ಬರುತ್ತೆ 10 ಸಾವಿರ

5. ಹೆಚ್ಚಿನ ಶಾಲೆಗಳಲ್ಲಿ ಖರೀದಿ ವೆಚ್ಚವು ಐದು ಲಕ್ಷಕ್ಕಿಂತ ಕಡಿಮೆ ಆಗುವುದರಿಂದ ಅಂತಹ ಶಾಲೆಗಳು ಮೂರು ಸಂಸ್ಥೆಗಳಿಂದ ಕೊಟೇಶನ್ ಪಡೆದು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮದ ಪ್ರಕಾರವಾಗಿ(ಕೆ.ಟಿ.ಟಿ.ಪಿ ಆಕ್ಟ್ 1999) ಖರೀದಿ ಪ್ರಕ್ರಿಯೆಯನ್ನು ನಿರ್ವಹಿಸುವುದು. ಕನಿಷ್ಠ ಮೂರು ಸಂಸ್ಥೆಗಳಿಂದ ದರಪಟ್ಟಿಗಳನ್ನು ಹೊಂದಿರಲೇಬೇಕು. ಖರೀದಿ ಮಾಡುವಂತಹ ಸಂಸ್ಥೆಯು ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನೋಂದಣಿಯಾಗಿರಬೇಕು ಹಾಗೂ ಜಿಎಸ್‌ಟಿ ಸಂಖ್ಯೆ ಹೊಂದಿರಬೇಕು.

6. ಶೂ ಗಳ ಮೇಲ್ಪದರು ಪಾಲಿವಿನೈಲ್ 1ಪಿ.ವಿ.ಸಿ] ಕೋಟೆಡ್ ವಿಸ್ಕೋಸ್/ಪಾಲಿಯೆಸ್ಟರ್/ ಪಾಲಿಯೆಸ್ಟರ್ ಕಾಟನ್ ಫ್ಯಾಬ್ರಿಕ್ 1.5 ಎಂಎಂ ಹೊಂದಿದ ಮತ್ತು ಎಕ್ಸೆಂಡೆಡ್ ಪಾಲಿವಿನೈಲ್ ಕ್ಲೋರೈಡ್ 1ಪಿ.ವಿ.ಸಿ1 ಸೋಲ್ ಹೊಂದಿದ ಹಾಗೂ ಪಾದರಕ್ಷೆಯ ಒಳಪದರು (Insock) ಬಟ್ಟೆ/ಫ್ಯಾಬ್ರಿಕ್‌ನಿಂದ ಕೂಡಿರುವುದನ್ನು (ಅಂದಾಜು 0.8 ಎಂ.ಎಂ ದಪ್ಪ) ಖರೀದಿಸುವುದು. ಎಸ್.ಡಿ.ಎಂ.ಸಿ.ಗಳು ಪಾದರಕ್ಷೆಗಳನ್ನು ಖರೀದಿಸಲು ತೀರ್ಮಾನಿಸಿದಲ್ಲಿ ವೆಲ್‌ಕ್ರೋ ಪಾದರಕ್ಷೆಗಳನ್ನು (Velcro Sandals) ಮತ್ತು ಲೈನಿಂಗ್ ಸಾಕ್ಸ್ ಖರೀದಿಸಿ ವಿತರಿಸುವುದು.

7. ಪ್ರತಿಯೊಂದು ತಾಲ್ಲೂಕಿನಲ್ಲಿ ಕನಿಷ್ಠ ಶೇ.5ರಷ್ಟು ಶಾಲೆಗಳಲ್ಲಿನ ಶೂ ಮತ್ತು ಸಾಕ್ಸ್ ಗುಣಮಟ್ಟವನ್ನು ಯಾದೃಚ್ಚಿಕವಾಗಿ ಪರೀಕ್ಷಿಸಲು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಒಂದು ಸಮಿತಿಯನ್ನು ರಚಿಸಲು ಕ್ರಮಕೈಗೊಳ್ಳುವುದು.

8. ಹಿಂದಿನ ಸಾಲುಗಳಲ್ಲಿ ಕಳಪೆ ಗುಣಮಟ್ಟದ ಮತ್ತು ನಕಲಿ ಬ್ರಾಂಡೆಡ್ ಶೂ ಮತ್ತು ಸಾಕ್ಸ್ ಸರಬರಾಜುಗಾಗಿರುವ ಬಗ್ಗೆ ಸರ್ಕಾರದ ಹಂತದಲ್ಲಿ ಸಾಕಷ್ಟು ದೂರುಗಳು ಸ್ವೀಕೃತವಾಗಿರುತ್ತವೆ. ಆದ್ದರಿಂದ ಪ್ರಸ್ತುತ ಸಾಲಿನಲ್ಲಿ ಜಾಗರೂಕತೆಯಿಂದ ಪರಿಶೀಲಿಸಿ, ರಾಷ್ಟ್ರಮಟ್ಟದ ಹೆಸರಾಂತ ಕಂಪನಿಗಳ ಪ್ರತಿಷ್ಠಿತ ಬ್ರಾಂಡ್‌ಗಳ ಅಧಿಕೃತ ಮಾರಾಟಗಾರರಿಂದ ISO CERTIFIED ಶೂ ಮತ್ತು ಸಾಕ್ಸ್ ಅಥವಾ ಪಾದರಕ್ಷೆಗಳನ್ನು ಖರೀದಿಸತಕ್ಕದ್ದು. ಅನಧಿಕೃತ ಮಾರಾಟಗಾರರಿಂದ ನಕಲಿ ಬ್ರಾಂಡ್/ಕಳಪೆ ಗುಣಮಟ್ಟದ ಶೂ ಮತ್ತು ಸಾಕ್ಸ್ ಅಥವಾ ಪಾದರಕ್ಷೆಗಳನ್ನು ಖರೀದಿಸಿರುವ ಬಗ್ಗೆ ದೂರುಗಳು ವರದಿಯಾದಲ್ಲಿ ತಪಾಸಣೆಗೆ ಒಳಪಡಿಸಿ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರು/ಕ್ಷೇತ್ರ ಶಿಕ್ಷಣಾಧಿಕಾರಿಗಳು/ಉಪನಿರ್ದೇಶಕರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವುದು.

ಇತರೆ ವಿಷಯಗಳು:

ಈ ರೀತಿಯ ಕರೆ ಮತ್ತು ಮೆಸೇಜ್‌ಗಳನ್ನು ನಿರ್ಬಂಧಿಸುವಂತೆ ಸರ್ಕಾರದ ಖಡಕ್‌ ಎಚ್ಚರಿಕೆ!

LPG ಸಿಲಿಂಡರ್ ಬಳಕೆದಾರರಿಗೆ ಶಾಕಿಂಗ್‌ ಸುದ್ದಿ: ಇನ್ಮುಂದೆ ಸಬ್ಸಿಡಿ ಬಂದ್!

HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಸಿಹಿಸುದ್ದಿ!


Share

Leave a Reply

Your email address will not be published. Required fields are marked *