rtgh
Headlines

ರಾಜ್ಯದ್ಯಂತ 18 ಲಕ್ಷ ರೈತರ ನೋಂದಣಿ! ಕುಸುಮ್‌ ಯೋಜನೆಯಡಿ ಉಚಿತ ಸೌರ ಪಂಪ್‌ಸೆಟ್‌

Free Solar Pumpset Scheme
Share

ಹಲೋ ಸ್ನೇಹಿತರೆ, ನೀರಾವರಿಗಾಗಿ ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವುದರಿಂದ ಇಂಧನ ಸ್ವಾವಲಂಬನೆ ಸಾಧಿಸುವಂತಹ ಕುಸುಮ್‌ ಯೋಜನೆಯಡಿ ಸೌರ ಪಂಪ್‌ಸೆಟ್‌ ಪಡೆಯಲು ಈಗಾಗಲೇ ರಾಜ್ಯದಾದ್ಯಂತ 18 ಲಕ್ಷ ರೈತರು ನೋಂದಣಿ ಮಾಡಿದ್ದಾರೆ.

Free Solar Pumpset Scheme

ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆಯನ್ನು ಕಡಿಮೆಗೊಳಿಸಿ, ಸೌರಶಕ್ತಿಯ ಬಳಕೆಯನ್ನು ಹೆಚ್ಚು ಮಾಡುವ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್‌ ಯೋಜನೆ ರೂಪಿಸಲಾಗಿದೆ. ಕರ್ನಾಟಕ ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಯೋಜನೆಯ ಅನುಷ್ಠಾನದ ಹೊಣೆಯನ್ನು ಹೊತ್ತಿದ್ದು, ರಾಜ್ಯದ ಎಲ್ಲ ಎಸ್ಕಾಂಗಳು ಪೂರಕವಾಗಿ ಕೆಲಸ ಮಾಡುತ್ತಿವೆ.

ಇದನ್ನು ಓದಿ: ʻಯಶಸ್ವಿನಿ ಯೋಜನೆʼ ಫಲಾನುಭವಿಗಳಿಗೆ ದಿಢೀರನೆ ಬಂತು ಮತ್ತೊಂದು ಗುಡ್‌ ನ್ಯೂಸ್!!

ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸುವ ಉದ್ದೇಶದಿಂದ ಸರ್ಕಾರ ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಜೊತೆಗೆ, ಕುಸುಮ್‌ ಬಿ ಯೋಜನೆಯಡಿ ಫಲಾನುಭವಿ ರೈತರಿಗೆ ಸೌರ ಫಲಕಗಳು, ಸಬ್‌ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್‌ಗಳು, ಮೌಂಟಿಂಗ್‌ ಸ್ಟ್ರಕ್ಚರ್‌, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಇತ್ಯಾದಿಗಳನ್ನು ಸರಬರಾಜು ಮಾಡಲಾಗುತ್ತದೆ. ಸೌರ ಪಂಪ್‌ಸೆಟ್‌ ಬಳಕೆಯಿಂದ 8 ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಾಗಲಿದೆ. ಇದರಿಂದ ರಾತ್ರಿ ವೇಳೆ ರೈತರು ಕೃಷಿ ಚಟುವಟಿಕೆಗಳಿಗೆ ಪರದಾಡಬೇಕಿಲ್ಲ ಎಂದು ವಿವರಿಸಿದರು.

ಸೌರಶಕ್ತಿಯ ಬಳಕೆ ಮೂಲಕ ರೈತರು ಕೃಷಿಯಲ್ಲಿ ಸ್ವಾವಲಂಬನೆಯನ್ನು ಸಾಧಿಸಲು ಕುಸುಮ್‌ ಈ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ, ರೈತರಿಗೆ ಸೌರ ಚಾಲಿತ ಪಂಪ್‌ಸೆಟ್‌ಗಳ ಬಳಕೆಗೆ ಒತ್ತು ನೀಡಲಾಗುತ್ತಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಹೆಚ್ಚಿನ ಸಹಾಯಧನವನ್ನು ಸಹ ನೀಡಲಾಗುತ್ತಿದೆ. ಕೃಷಿ ಭೂಮಿಯಲ್ಲಿ ಅಳವಡಿಸಲಾಗುವ ಸೋಲಾರ್ ಪಂಪ್‌ಗಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ಉಚಿತವಾಗಿ ನಿರ್ವಹಣೆ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ.

ಕುಸುಮ್‌ ಯೋಜನೆಗೆ ನೋಂದಣಿ ಹೇಗೆ?

ರೈತರು ತಮ್ಮ ಆಧಾರ್ ಕಾರ್ಡ್, ಆರ್‌ಟಿಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್‌ಲೈನ್ ಪೋರ್ಟಲ್ https://souramitra.com‌ ನ ಮೂಲಕ ನೋಂದಾಯಿಸಿಕೊಳ್ಳಬಹುದು. ರೈತರ ನೋಂದಣಿ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ.

ಕುಸುಮ್ ಯೋಜನೆಯಡಿ ಫೀಡರ್ ಮಟ್ಟದ ಸೌರೀಕರಣದ ಮೂಲಕ ರೈತರ ಪಂಪ್‍ಸೆಟ್‍ಗಳು ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡಲಾಗುವುದು. ಪ್ರತ್ಯೇಕ ಸೋಲಾರ್ ಪಂಪ್‌ಗಳ ಬದಲಿಗೆ ಕೃಷಿ ಫೀಡರ್‌ಗಳನ್ನು ಸೌರೀಕರಣಗೊಳಿಸುವಂತಹ ಯೋಜನೆ ಇದಾಗಿದೆ. ಸ್ವಂತ ಬಳಕೆಗಷ್ಟೇ ಅಲ್ಲದೇ, ಸೌರ ವಿದ್ಯುತ್ ಅನ್ನು ಮಾರಾಟ ಮಾಡುವ ಮೂಲಕ ರೈತರು ಹೆಚ್ಚುವರಿ ಆದಾಯವನ್ನು ಪಡೆಯಬಹುದು.

ಇತರೆ ವಿಷಯಗಳು:

BSF, ಹೆಡ್‌ ಕಾನ್ಸಟೇಬಲ್‌ 1526 ಹುದ್ದೆಗಳ ಭರ್ಜರಿ ಉದ್ಯೋಗಾವಕಾಶ!

ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್: ಮೋದಿ ಸರ್ಕಾರದಿಂದ ಹೊಸ ಯೋಜನೆ ಜಾರಿ


Share

Leave a Reply

Your email address will not be published. Required fields are marked *