rtgh
Headlines

ಮುಕ್ತಿ ಕಂಡ ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿ.!! ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

gobi manchurian cotton candy ban
Share

ಹಲೋ ಸ್ನೇಹಿತರೇ, ಪುಟಾಣಿ ಮಕ್ಕಳಿಂದ ದೊಡ್ಡವರು ಸೇರಿ ಎಲ್ಲರೂ ಇಷ್ಟಪಡುವ, ಸಂಜೆ ಟೈಮ್ನಲ್ಲಿ ಬಾಯಿ ಚಪ್ಪರಿಸಿ ತಿನ್ನುವ ತಿಂಡಿ ಗೋಬಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಉಂಟುಮಾಡುವ ಅಂಶ ಪತ್ತೆಯಾಗಿದೆ. ಹೀಗಾಗಿಯೇ ಪುದುಚೇರಿ ಮತ್ತು ತಮಿಳುನಾಡು, ಕರ್ನಾಟಕ ಸರ್ಕಾರಗಳ ಬಳಿಕ ಈಗ ರಾಜ್ಯ ಸರ್ಕಾರವೂ ಅಸುರಕ್ಷಿತ ಕಾಟನ್‌ ಕ್ಯಾಂಡಿ, ಗೋಬಿಗೆ ನಿಯಂತ್ರಣ ಹೇರಲು ಮುಂದಾಗಿದೆ.

gobi manchurian cotton candy ban

ರಾಜ್ಯಾದ್ಯಂತ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ ಮಾದರಿ ಗಳಲ್ಲಿ ಆರೋಗ್ಯಕ್ಕೆ ಮಾರಕವಾದ ಅಂಶ ಹಾಗೂ ಬಳಕೆಯ ಬಣ್ಣ ಸೇರಿದಂತೆ ವ್ಯಸನಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿದ್ದು, ಈ ಅಸುರಕ್ಷಿತ ವಸ್ತುಗಳನ್ನು ಬಳಕೆ ಮಾಡದಂತೆ ಆರೋಗ್ಯ ಇಲಾಖೆಯು ನಿರ್ಬಂಧ ಹೇರಲು ಮುಂದಾಗಿದೆ. ಈ ಬಗ್ಗೆ ಇಂದು (ಮಾ.11) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸುದ್ದಿಗೋಷ್ಠಿಗೂ ಮುಂದಾಗಿದ್ದಾರೆ.

ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದೆ. ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಆ ಹಿನ್ನೆಲೆಯಲ್ಲಿ, ಇಂದು ಮಹತ್ವದ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ. ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳ ಪರೀಕ್ಷೆಗೆ ನೀಡಲಾಗಿತ್ತು. ಸದ್ಯ ಈಗ ಪರೀಕ್ಷೆಯ ವರದಿ ಬಂದ ಹಿನ್ನೆಲೆ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ಧಿಗೋಷ್ಠಿ ನಡೆಸಲು ಮುಂದಾಗಿದ್ದು ರಾಜ್ಯದಲ್ಲಿ ಅಸುರಕ್ಷಿತ ಗೋಬಿ ಹಾಗೂ ಕ್ಯಾಂಡಿ ಕೂಡ ಬ್ಯಾನ್ ಆಗುವ ಸಾಧ್ಯತೆ ಇದೆ.

ರಾಜ್ಯಾದ್ಯಂತ 170ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 100ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿಗಳು ಅಸುರಕ್ಷಿತ ಎಂದು ವರದಿಯಲ್ಲಿಉಲ್ಲೇಖಿಸಿದ್ದಾಗಿ ತಿಳಿದು ಬಂದಿದೆ. ಇನ್ನು ತಜ್ಞರು ಕೂಡಾ ಈ ಆಹಾರ ಸೇವನೆ ಅಪಾಯಕಾರಿ ಎಂದಿದ್ದಾರೆ.

CBSE 10ನೇ ತರಗತಿ ಪರೀಕ್ಷೆಗೆ ಮಾರ್ಗಸೂಚಿ ಬಿಡುಗಡೆ!!

ಇನ್ನು ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್‌-ಬಿ ಹಾಗೂ ಗೋಬಿ ಮಂಚೂರಿಯಲ್ಲಿ ಸನ್‌ಸೆಟ್‌ ಯೆಲ್ಲೊ ಬಣ್ಣ ಮತ್ತು ಟಾಟ್ರ್ರಾಜಿನ್‌ ರಾಸಾಯನಿಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಎರಡೂ ತಿನಿಸುಗಳನ್ನು ನಿಷೇಧಿಸಲು ಮುಂದಾಗಿದೆ. ಆಹಾರ ಹಾಗೂ ಸುರಕ್ಷತಾ ಇಲಾಖೆ ವರದಿಯನ್ನು ಆಧರಿಸಿ ಆರೋಗ್ಯ ಸಚಿವರು ಇಂದು ರಾಜ್ಯದಲ್ಲಿ ಇವುಗಳ ನಿಷೇಧ ಪ್ರಕಟಿಸುವ ಸಂಭವವಿದೆ. ಆದ್ರೆ ಇದಕ್ಕೆ ಗೋಬಿ ಮಾರಟಗಾರರು ಬೇಸರವನ್ನು ಹೊರ ಹಾಕಿದ್ದಾರೆ. ಇದನ್ನೇ ನಂಬಿ ಬದುಕು ಸಾಗಿಸುವವರ ಜೀವನ ಹೇಗೆ ಸರ್ಕಾರ ಅಪಾಯಕಾರಿಯಾದ ಅಂಶ ಬಳಕೆಗೆ ನಿಷೇಧ ಹಾಕಲಿ. ಆದ್ರೆ ಕಂಪ್ಲೀಟ್ ಬ್ಯಾನ್ ಮಾಡುವುದು ಬೇಡಾ ಎಂದು ಕೆಲ ಗೋಬಿ ಮಾರಾಟಗಾರರು ಮನವಿ ಮಾಡಿದ್ದಾರೆ.

ಒಟ್ನಲ್ಲಿ ಜನರ ಆರೋಗ್ಯದ ದೃಷ್ಠಿಯಿಂದ ಸರ್ಕಾರ ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದು ರಾಜ್ಯದಲ್ಲಿ ಗೋಬಿ ಹಾಗೂ ಕಾಟನ್ ಕ್ಯಾಂಡಿ ಬ್ಯಾನ್ ಆಗುವ ಸಾಧ್ಯತೆ ಇದೆ. ಈ ಕುರಿತಂತೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಗಳಿವೆ. ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ರಾಸಾಯನಿಕಗಳನ್ನು ಬಳಸುವುದು ತಿಳಿದುಬಂದಿರುವುದರಿಂದ ತಮಿಳುನಾಡಿನಲ್ಲಿ ಈಗಗಾಲೇ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ನಿಷೇಧಿಸಲಾಗಿದೆ. ಅದೇ ಮಾದರಿಯನ್ನು ಕರ್ನಾಟಕವೂ ಅನುಸರಿಸುವ ಸಾಧ್ಯತೆಗಳಿವೆ.

ಸುಕನ್ಯಾ ಸಮೃದ್ಧಿ ಯೋಜನೆ: ಏಪ್ರಿಲ್ 1 ರಿಂದ ಹೊಸ ಬಡ್ಡಿದರ ಅನ್ವಯ

ಸರ್ಕಾರದ ಭರ್ಜರಿ ಆಫರ್.!!‌ ಹಸು, ಕುರಿ, ಕೋಳಿ ಸಾಕಾಣಿಕೆಗೆ ಸಿಗಲಿದೆ 50% ಸಹಾಯಧನ


Share

Leave a Reply

Your email address will not be published. Required fields are marked *