rtgh
Headlines

ವರ್ಗಾವಣೆಗಾಗಿ ಕಾಯುತ್ತಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!

Government Employee Transfer
Share

ಹಲೋ ಸ್ನೇಹಿತರೆ, ರಾಜ್ಯ ಸರ್ಕಾರಿ ನೌಕರರ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ನೌಕರರ ಸಾರ್ವತ್ರಿಕ ವರ್ಗಾವಣೆಯ ವಿಷಯದ ಕುರಿತಾಗಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಹೆಚ್ಚಿದೆ.

Government Employee Transfer

ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಶಾಸಕರಿಂದ ಒತ್ತಡ ಇರುವ ಕಾರಣಕ್ಕಾಗಿ.ಸರ್ಕಾರ ವರ್ಗಾವಣೆಗೆ ಒಪ್ಪದಿದ್ದಲ್ಲಿ ಶಾಸಕರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಹೀಗಾಗಿ ಸಣ್ಣ ಪ್ರಮಾಣದ ವರ್ಗಾವಣೆಯನ್ನು ನಡೆಸುವ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿಸಲಾಗಿದೆ.

ಕಳೆದ ವರ್ಷ ಶೇ. 6 ಪ್ರಮಾಣದಲ್ಲಿ ವರ್ಗಾವಣೆ ಪ್ರಕ್ರಿಯೆ ಮಾಡಲಾಗಿತ್ತು. ಈ ವರ್ಷ ಇನ್ನೂ ಕಡಿಮೆ ಪ್ರಮಾಣದಲ್ಲಿ ವರ್ಗಾವಣೆ ಪ್ರಕ್ರಿಯೆ ಮಾಡುವ ಸಾಧ್ಯತೆ ಇದೆ. ಜೂನ್ ಅಂತ್ಯದೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಚಿಂತನೆ ನಡೆದಿದೆ.

ಚುನಾವಣೆ ನೀತಿ ಸಂಹಿತೆ ಇರುವ ಕಾರಣಕ್ಕೆ ಮೂರು ತಿಂಗಳು ಆಡಳಿತ ಯಂತ್ರ ಸಂಪೂರ್ಣ ಸ್ಥಗಿತವಾಗಿತ್ತು. ಆದರೆ ಈಗ ವರ್ಗಾವಣೆ ಕಾರಣಕ್ಕೆ ಮತ್ತಷ್ಟು ದಿನಗಳ ಕಾಲ ಸ್ಥಗಿತವಾದರೆ ಸಮಸ್ಯೆಯಾಗುತ್ತದೆ. ಹೀಗಾಗಿ ಸಣ್ಣ ಪ್ರಮಾಣದಲ್ಲಿ ಜೂನ್ ಅಂತ್ಯದೊಳಗೆ ವರ್ಗಾವಣೆ ಪ್ರಕ್ರಿಯೆ ನಡೆಸುವ ಚಿಂತನೆ ಸರ್ಕಾರ ಮಾಡಿದ್ದು, ಗುರುವಾರದ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತರೆ ವಿಷಯಗಳು:

ಇನ್ನು 3 ದಿನ ರಾಜ್ಯದಲ್ಲಿ ಭಾರೀ ಮಳೆ! IMD ರೆಡ್ ವಾರ್ನಿಂಗ್

ರಾಜ್ಯದಲ್ಲಿ ಮುಂದುವರೆಯಲಿದೆ ಮಳೆಯ ಅಬ್ಬರ! 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ


Share

Leave a Reply

Your email address will not be published. Required fields are marked *