rtgh
Headlines

ಗೃಹಲಕ್ಷ್ಮಿ ಜೂನ್, ಜುಲೈ ತಿಂಗಳ ಹಣ ಈ ದಿನ ಜಮಾ!

Gruha Lakshmi Scheme Karnataka Information
Share

ಮೇ ತಿಂಗಳವರೆಗೆ ಗೃಹಲಕ್ಷ್ಮೀ ಹಣವನ್ನು ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Gruha Lakshmi Scheme Karnataka Information

ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತವಾದ ಪ್ರದೇಶಗಳಿಗೆ ಭೇಟಿಯನ್ನು ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಸಿಎಂ ಮಾತನಾಡಿದ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮೇ ತಿಂಗಳವರೆಗೆ ಹಣವನ್ನು ಖಾತೆಗೆ ಜಮಾ ಮಾಡಿದ್ದು, ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಕೊಡುತ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಯಾವುದೆ ಕಾರಣಕ್ಕು ನಿಲ್ಲಿಸುವುದಿಲ್ಲ, ಮುಂದುವರೆಸಲಿದೆ ಎಂದು ಹೇಳಿದ್ದಾರೆ.

ಮನೆಗಳು ಸಂಪೂರ್ಣವಾಗಿ ಹಾನಿಯದವರಿಗೆ 1.2 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು. ಪರಿಹಾರದ ಜೊತೆಗೆ ಹೊಸ ಮನೆಯನ್ನು ಕಟ್ಟಿಕೊಡಲಾಗುವುದು. ಭಾಗಶಃ ಮನೆಯು ಹಾನಿಯಾದವರಿಗೆ 50,000ರೂಪಾಯಿ ಪರಿಹಾರವನ್ನು ನೀಡಲಾಗುವುದು. ಕೊಡಗು ಜಿಲ್ಲೆಯಲ್ಲಿ ಮಳೆಯ ಕಾರಣದಿಂದ 16 ಜಾನುವಾರು ಸಾವನ್ನಪ್ಪಿದ್ದು, ಒಂದೊಂದು ಜಾನುವಾರಿಗೆ 33 ಸಾವಿರ ರೂ. ಪರಿಹಾರವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಸಹ ಓದಿ: ವಿದ್ಯಾರ್ಥಿಗಳಿಗೆ ಓದುವ ಹವ್ಯಾಸ ಬೆಳೆಸಲು ಹೊಸ ಸ್ಕೀಮ್‌ ಜಾರಿಗೆ ಮುಂದಾದ ರಾಜ್ಯ ಸರ್ಕಾರ

ಕೊಡಗು ಜಿಲ್ಲೆಯಲ್ಲಿ 14 ಕಡೆಯಲ್ಲಿ ಕಾಳಜಿ ಕೇಂದ್ರವನ್ನು ಸ್ಥಾಪಿಸಲಾಗಿದೆ. 186 ಜನ ಕಾಳಜಿ ಕೇಂದ್ರದಲ್ಲಿ ಇದ್ದಾರೆ. ಕೊಡಗು ಜಿಲ್ಲೆಯಲ್ಲಿ ಶೇ. 50% ಮಳೆ ಹೆಚ್ಚಾಗಿದೆ. ಅನೇಕ ಕಡೆ ಭೂಕುಸಿತವಾಗಿದೆ. 24 ಗಂಟೆಯಲ್ಲಿ 2 ಕಡೆಗಳಲ್ಲಿ ಭೂಕುಸಿತ ಸಂಭವಿಸಿದೆ. ಅದೃಷ್ಟವಶಾತ್ ಪ್ರಾಣಕ್ಕೆ ಹಾನಿಯಾಗಿಲ್ಲ. ಕೆಲವರಿಗೆ ಗಾಯಗಳಾಗಿವೆ. ಮಳೆ ನಿಂತ ತಕ್ಷಣವೇ ಪರಿಹಾರದ ಕಾರ್ಯವನ್ನು ಕೈಗೊಳ್ಳಲಾಗುವುದು. ಮಳೆಯಿಂದಾಗಿ ಹಾನಿಯಾದ ಮನೆಗಳಿಗೆ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕಸ್ತೂರಿ ರಂಗನ್ ಅವರ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಇದರ ಬಗ್ಗೆ ಅರಣ್ಯ ಸಚಿವರ ಜೊತೆಗೆ ಮತ್ತೊಮ್ಮೆ ಚರ್ಚಿಸಿ ಅಂತಿಮವಾದ ತೀರ್ಮಾನವನ್ನು ಮಾಡಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ₹746 ಕೋಟಿ ರೂಪಾಯಿ ಹಾಗೂ ಮಡಿಕೇರಿಗೆ ಜಿಲ್ಲಾ ಪಿಡಿತ ಖಾತೆಯಲ್ಲಿ ₹46 ಕೋಟಿ ರೂಪಾಯಿ ಹಣಯಿದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

2023-24ನೇ ಸಾಲಿನ ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ!

ಜನಸಾಮಾನ್ಯರ ಮೇಲೆ ಮತ್ತಷ್ಟು ಹೊರೆ..! ದೇಶದಾದ್ಯಂತ ದೊಡ್ಡ ಬದಲಾವಣೆ


Share

Leave a Reply

Your email address will not be published. Required fields are marked *