ಹಲೋ ಸ್ನೇಹಿತರೇ, ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಗೆ ನೀವು ಅರ್ಜಿ ಸಲ್ಲಿಸಿದ್ದೀರಾ? ನಿಮ್ಮ ಬ್ಯಾಂಕ್ ಖಾತೆಗೆ 7 ನೇ ಕಂತಿನ ಹಣ ಯಾವಾಗ ಜಮೆಯಾಗಲಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನ ಮೆಚ್ಚಿದ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದೆ. ಮಹಿಳಾ ಸಬಲೀಕರಣದ ದೃಷ್ಠಿಯಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.
ಗ್ರಾಮೀಣ & ನಗರ ಪ್ರದೇಶದ ಕಡುಬಡವ ಕುಟುಂಬಗಳಿಗೆ ಬರಗಾಲ & ಬೆಲೆ ಏರಿಕೆ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ 2,000 ರೂ. ವರದಾನವಾಗಿದೆ. ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತಿದೆ.
7 ನೇ ಕಂತಿನ 2,000 ರೂ. ಹಣ
ಕರ್ನಾಟಕ ಸರ್ಕಾರವು ಗೃಹಲಕ್ಷ್ಮೀ ಯೋಜನೆಯನ್ನು 2023 ರ ಆಗಸ್ಟ್ 30 ರಿಂದ ಅನುಷ್ಠಾಣಕ್ಕೆ ತರಲಾಗಿದ್ದು, ಅವತ್ತಿನಿಂದ ಈವರೆಗೆ 6 ಕಂತುಗಳ 12,000 ರೂ. ಹಣವನ್ನು ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳ ಖಾತೆಗೆ ವರ್ಗಾವಣೆಯನ್ನು ಮಾಡಲಾಗಿದೆ. 7 ನೇ ಕಂತಿನ 2,000 ರೂ. ಹಣವನ್ನು ಕೂಡ ಜಮಾ ಮಾಡಲಾಗುತ್ತದೆ.
ಸರ್ಕಾರದ ಈ ಹಿಂದೆ ಹೇಳಿದಂತೆ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪ್ರತಿ ತಿಂಗಳ ದಿನಾಂಕ 20 ಒಳಗಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು ನಿರ್ಧಾರ ಮಾಡಲಾಗಿದೆ. ಅದರಂತೆ ಬಹುತೇಕ ಅರ್ಹ ಮನೆ ಯಜಮಾನಿಯರಿಗೆ 6 ಕಂತುಗಳ ಒಟ್ಟು 12,000 ರೂ. ಹಣ ಜಮೆಯಾಗಿದೆ.
ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ 2ನೇ ಅಥವಾ 3ನೇ ವಾರದಲ್ಲಿ ಗೃಹಲಕ್ಷ್ಮೀಯರ ಖಾತೆಗಳಿಗೆ GruhaLakshmi DBT ಮೂಲಕ ವರ್ಗಾವಣೆ ಮಾಡಲಾಗುವುದು.
ನಿಮಗೆ ಹಣ ಬರದೆ ಇದ್ದಲ್ಲಿ ನಿಮ್ಮ ಹತ್ತಿರದ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ..
ಗೃಹಲಕ್ಷ್ಮಿ DBT Status Check ಮಾಡಲು DBT Karnataka App Link: Download ಮಾಡಿ
ಇತರೆ ವಿಷಯಗಳು
ಹೊಸ BPL ಕಾರ್ಡ್ ಪಡೆಯಲು ಅರ್ಜಿ ಆಹ್ವಾನ! ಅರ್ಹರು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ
ಮಹಿಳೆಯರಿಗೆ ₹15,000 & 15 ದಿನಗಳ ಉಚಿತ ತರಬೇತಿ.! ಕೇಂದ್ರ ಸರ್ಕಾರದ ನಮೋ ಡ್ರೋನ್ ದೀದಿ ಯೋಜನೆ