ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ ರಾಜ್ಯದ ಪ್ರತಿಯೊಂದು ಮನೆ ಯಜಮಾನಿಗೆ ಎರಡು ಸಾವಿರ ರೂಪಾಯಿಗಳು ಪ್ರತಿ ತಿಂಗಳು ದೊರೆಯುತ್ತಿದೆ. ಈ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಗೆ 4 ಹೊಸ ರೂಲ್ಸ್ ಜಾರಿಗೆ ತಂದಿದೆ. ಈ ರೂಲ್ಸ್ ಏನು? ಇದನ್ನು ಪಾಲಿಸುವುದು ಹೇಗೆ ಎನ್ನುವ ಬಗೆಗಿನ ಹೆಚ್ಚಿನ ವಿವರವನ್ನು ನಾವು ನಿಮಗೆ ತಿಳಿಸಿಕೊಡಲಿದ್ದೇವೆ.
Contents
• NPCI ಖಡ್ಡಾಯ :
ಗೃಹ ಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣ ಪಡೆಯಲು NPCI ಕಡ್ಡಾಯವಾಗಿದೆ. ಅಂದರೆ ಇನ್ನು ಮುಂದೆ ಪ್ರತಿಯೊಬ್ಬರೂ NPCI ಮಾಡಬೇಕು. ನಿಮ್ಮ ಮನೆ ಹತ್ತಿರದಲ್ಲಿನ ಬ್ಯಾಂಕ್ ಗೆ ಭೇಟಿ ನೀಡುವ ಮೂಲಕ NPCI ಯನ್ನು ಮಾಡಬಹುದು. ಆಧಾರ್ ಕಾರ್ಡ್, ಪಡಿತರ ಚೀಟಿ ಜೊತೆಗೆ ಬ್ಯಾಂಕ್ ವಿವರಗಳನ್ನು ನೀಡಿದರೆ NPCI ಮಾಡಿಕೊಡಲಾಗುತ್ತದೆ.
• ಆಧಾರ್ E-KYC ಕಡ್ಡಾಯ:
ಇನ್ನು ಗೃಹ ಲಕ್ಷ್ಮಿ ಯೋಜನೆಯ ಮಾಸಿಕ 2000 ರೂ ಹಣ ನಿಮ್ಮ ಖಾತೆಗೆ ಜಮಾ ಆಗಬೇಕಿದ್ದರೆ ನೀವು ಮುಖ್ಯವಾಗಿ Aadhaar E -KYC ಅಪ್ಡೇಟ್ ಮಾಡುವುದು ಅವಶ್ಯಕವಾಗಿದೆ. ನಿಮ್ಮ ಆಧಾರ್ ಸಂಖ್ಯೆ ಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿದ ಮೇಲೆ ಮಾತ್ರ DBT ಮೂಲಕ ನಿಮ್ಮ ಖಾತೆಗೆ ಹಣವನ್ನು ಜಮಾ ವಾಗಲಿದೆ.
• ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ :
ರೇಷನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ಗೆ ಲಿಂಕ್ ಆಗದೆ ಇದ್ರೆ ಕೂಡಲೇ ಸರಿಪಡಿಸಿಕೊಳ್ಳಬೇಕಿದೆ. ನಿಮ್ಮ Restion Card ಗೆ ನಿಮ್ಮ Aadhaar Card Link ಆಗದೆ ಇದ್ದರು ಕೂಡ ಯಾವುದೇ ಕಾರಣಕ್ಕೂ ನಿಮ್ಮ ಖಾತೆಗೆ ಹಣ ಜಮಾ ಆಗುವುದಿಲ್ಲ.
• ಬ್ಯಾಂಕ್ ಸ್ಟೇಟಸ್ ಚೆಕ್ ಮಾಡಿ:
ಇನ್ನು ಕೆಲ ಫಲಾನುಭವಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯವಾಗಿದೆ. ನಿಷ್ಕ್ರಿಯವಾಗಿರುವ ಬ್ಯಾಂಕ್ ಖಾತೆಗೇ ಹಣ ಜಮಾ ಮಾಡಲು ಸಾದ್ಯವಾಗುವಿಲ್ಲ. ಹೀಗಾಗಿ ಬ್ಯಾಂಕ್ ಖಾತೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಒಳಿತು.
ಇತರೆ ವಿಷಯಗಳು
ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗಾವಕಾಶ! ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸೌರ ಫಲಕ ಅಳವಡಿಸಲು ಮನೆ ಮನೆಗೂ 50 ಸಾವಿರ.! ದೇಶದ ಜನತೆಗೆ ಮೋದಿ ಸರ್ಕಾರದ ಕೊಡುಗೆ